AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರಗೋಡು ಹನುಮ ಧ್ವಜ ತೆರವು ವಿರೋಧಿಸಿ ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸ್​ ನೋಟಿಸ್​

ಜನವರಿ 22ರ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ 108 ಅಡಿ ಎತ್ತರದ ಕಂಬದ ಮೇಲೆ ಹನುಮ ಧ್ವಜ ಹಾರಿಸಲಾಗಿತ್ತು. ಈ ಧ್ವಜವನ್ನು ಸರ್ಕಾರ ತೆರವುಗೊಳಿಸಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆ ಮಾಡಿದ್ದ ಹಿಂದೂ ಕಾರ್ಯಕರ್ತರಿಗೆ ಇದೀಗ ಕೆರಗೋಡು ಠಾಣೆ ಪೊಲೀಸರು ನೋಟಿಸ್​ ನೀಡಿದ್ದಾರೆ.

ಕೆರಗೋಡು ಹನುಮ ಧ್ವಜ ತೆರವು ವಿರೋಧಿಸಿ ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸ್​ ನೋಟಿಸ್​
ತೆರವುಗೊಳಿಸಿರುವ ಹನುಮ ಧ್ವಜ, ಪೊಲೀಸ್​ ನೋಟಿಸ್​
ಪ್ರಶಾಂತ್​ ಬಿ.
| Edited By: |

Updated on: May 11, 2024 | 10:09 AM

Share

ಮಂಡ್ಯ, ಮೇ 10: ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ (Keragodu Hanuman Dhwaja) ತೆರವು ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಹನುಮ ಧ್ವಜ ತೆರವುಗೊಳಿಸಿದ್ದನು ವಿರೋಧಿಸಿ ಹಿಂದೂ ಕಾರ್ಯಕರ್ತರು (Hindu Activists) ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಕೆರಗೋಡು ಠಾಣೆ ಪೊಲೀಸರು ನೋಟಿಸ್ (Notice)​ ಜಾರಿ ಮಾಡಿದ್ದಾರೆ. ಅಲ್ಲದೆ “ರೌಡಿ ಶೀಟ್​​ ತೆರೆಯುವ ಸಂಬಂಧ ಏಳು ದಿನದೊಳಗೆ ಉತ್ತರ ನೀಡುವಂತೆ ಸೂಚನೆ ನೀಡಿದ್ದಾರೆ.

ಧ್ವಜ ಸ್ಥಂಭ ವಿಚಾರದಲ್ಲಿ ಅನ್ಯಕೋಮಿನ ಜನರನ್ನು ಹೆದರಿಸುವುದು, ಬೆದರಿಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಚೋದನೆ ನೀಡಿದ್ದೀರಿ. ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರಂತರವಾಗಿ ಸಕ್ರೀಯವಾಗಿರುವುದರಿಂದ ಏಕೆ ನಿಮ್ಮ ಮೇಲೆ ಕರಗೋಡು ಪೊಲೀಸ್​ ಠಾಣೆಯಲ್ಲಿ ರೌಡಿ ಶೀಟ್​ ತೆರೆಯಬಾರದೆಂದು ನಿಮ್ಮ ಸಮಜಾಯಿಸಿಯನ್ನು ಈ ನೋಟಿಸ್​ ತಲುಪಿದ ಏಳು ದಿನಗಳ ಒಳಗೆ ಠಾಣೆಗೆ ಹಾಜರಾಗಿ ಮಾಹಿತಿ ಸಲ್ಲಿಸಬೇಕು ಎಂದು ಕೆರಗೋಡು ಠಾಣೆ ಪೊಲೀಸರು ವಿಶ್ವ ಹಿಂದೂ ಪರಿಷತ್​​ನ ಮೈಸೂರು ಭಾಗದ ಸಹಕಾರ್ಯದರ್ಶಿ ಚಿಕ್ಕಬಳ್ಳಿ ಬಾಲು, ಕಾರ್ತಿಕ್, ಹರೀಶ್​ ಅವರಿಗೆ ನೋಟಿಸ್​ ಜಾರಿ ಮಾಡಲಾಗಿದೆ.

ಈ ಮೂವರ ವಿರುದ್ಧ ಗಲಭೆಗೆ ಪ್ರಚೋದನೆ ಆರೋಪದಡಿ ಕಲಂ 143, 341, 353, 149 ಸೆಕ್ಷನ್ ಅಡಿಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೆರಗೋಡು ಗ್ರಾಮಕ್ಕೆ ಬರ್ತಿಯಾ, ತಾಕತ್ ಇದ್ಯಾ?: ಶಾಸಕ ರವಿ ಗಣಿಗ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ವಿಹೆಚ್​ಪಿ ಮುಖಂಡ 

ಇನ್ನು ರೌಡಿ ಶೀಟ್ ತೆರೆಯುವ ಬಗ್ಗೆ ಪೊಲೀಸರು ನೋಟಿಸ್ ನೀಡಿರುವುದನ್ನು ಖಂಡಿಸಿ ವಕೀಲರು ಹಾಗೂ ಹಿಂದೂ ಕಾರ್ಯಕರ್ತರು ಇಂದು (ಮೇ 11) ಬೆಳಗ್ಗೆ 11 ಗಂಟೆಗೆ ಕೆರಗೋಡಿನಲ್ಲಿ ಪ್ರತಿಭಟನೆ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ವಿವಾದಿತ ಧ್ವಜಸ್ತಂಭದಿಂದ ಪೊಲೀಸ್​ ಠಾಣೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಹೋರಾಟ ಹತ್ತಿಕ್ಕಲು ಮುಂದಾಗಿದೆ. ಪೊಲೀಸರ ಮೂಲಕ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಪ್ರತಿಭಟನೆ ಮಾಡಲಿದ್ದಾರೆ.

ಏನಿದು ಹನುಮ ಧ್ವಜ ವಿವಾದ

ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನಪಿಗಾಗಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರು 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಿದ್ದರು. ಧ್ವಜ ಹಾರಿಸಿದ್ದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದಾಗಿದೆ. ಅಲ್ಲದೇ ಧ್ವಜ ಹಾರಿಸಿದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿ ತಾಲೂಕು ಪಂಚಾಯಿತಿಗೆ ದೂರು ನೀಡಿದ್ದರು. ದೂರಿನ್ವಯ ತಾಲೂಕು ಪಂಚಾಯಿತಿ ಅಧಿಕಾರಿಗಳು ಧ್ವಜವನ್ನು ತೆರವುಗೊಳಿಸಲು ಬಂದಿದ್ದರು. ಇದಿಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು.

ಬಳಿಕ ಪೊಲೀಸರು ಗ್ರಾಮಕ್ಕೆ ಆಗಮಿಸಿ ಧ್ವಜ ತೆರವುಗೊಳಿಸಲು ಮುಂದಾದರು. ಆಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಲು ಪೊಲೀಸರು 144 ಸೆಕ್ಷನ್​ ಜಾರಿ ಮಾಡಿದ್ದರು. 144 ಸೆಕ್ಷನ್​ ಜಾರಿಯಾದ ಬಳಿಕವೂ ಪ್ರತಿಭಟನಾಕಾರರು ಸ್ಥಳದಿಂದ ತೆರಳದ ಹಿನ್ನೆಲೆಯಲ್ಲಿ ಲಾಠಿ ಜಾರ್ಜ್​ ಮಾಡಲಾಗಿತು. ಕೊನೆಗೂ ಪೊಲೀಸರು ಧ್ವಜ ತೆರವುಗೊಳಿಸಿದ್ದರು.

ಇದಾದ ಬಳಿಕ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಜನವರಿ 29 ರಂದು ಹನುಮ ಧ್ವಜ ಇಳಿಸಿದ್ದನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್​ ನಾಯಕರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಕೆರಗೋಡಿನಿಂದ ಮಂಡ್ಯದವರೆಗೂ ಪಾದಯಾತ್ರೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?