ಮಂಡ್ಯ: ಕುಮಾರಸ್ವಾಮಿ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರು: ಸರ್ಕಾರದ ವಿರುದ್ಧ ಗರಂ

| Updated By: ವಿವೇಕ ಬಿರಾದಾರ

Updated on: Jul 05, 2024 | 1:23 PM

ಕೇಂದ್ರ ಸಚಿವರಾದ ಬಳಿಕ ಹೆಚ್​ಡಿ ಕುಮಾರಸ್ವಾಮಿ ಅವರು ಇಂದು ಮಂಡ್ಯ ಜಿಲ್ಲೆಯಲ್ಲಿ ಜನತಾ ದರ್ಶನ ನಡೆಸಿದರು. ಈ ಜನತಾ ದರ್ಶನ ಕಾರ್ಯಕ್ರಮಕ್ಕೆ ಜಿಲ್ಲೆಯ ಅಧಿಕಾರಿಗಳು ಗೈರಾಗಿದ್ದಾರೆ. ಇದಿರಿಂದ ಮುಜುಗರಕ್ಕೆ ಒಳಗಾಗದ ಹೆಚ್​ಡಿ ಕುಮಾರಸ್ವಾಮಿ ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯ: ಕುಮಾರಸ್ವಾಮಿ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರು: ಸರ್ಕಾರದ ವಿರುದ್ಧ ಗರಂ
ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ
Follow us on

ಮಂಡ್ಯ, ಜುಲೈ 05: ಕೇಂದ್ರ ಸಚಿವ ಹೆಚ್ ಡಿಕೆ ಕುಮಾರಸ್ವಾಮಿ (HD Kumaraswamy) ಅವರು ತವರು ಜಿಲ್ಲೆಯಲ್ಲಿ ಜನತಾ ದರ್ಶನ (Janata Darshan) ಕಾರ್ಯಕ್ರಮ ನಡೆಸಿದ್ದಾರೆ. ಆದರೆ, ಜನತಾ ದರ್ಶನ ಕಾರ್ಯಕ್ರಮಕ್ಕೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು (District Officers) ಗೈರಾಗಿದ್ದು, ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಇರಿಸುಮುರಿಸಾಗಿದೆ. ಅಧಿಕಾರಿಗಳ ಗೈರಿನಿಂದ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಹೆಚ್​ಡಿ ಕುಮಾರಸ್ವಾಮಿ, “ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿಗಳಿಗೆ ನಾನು ಮನವಿ ಮಾಡಿದ್ದೆ. ಆದರೆ, ಜನತಾ ದರ್ಶನ ಕಾರ್ಯಕ್ರಮ ಹಾಜರಾಗದಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಸುತ್ತೋಲೆ ನೀಡಿದೆ. ಇದು ಸರ್ಕಾರದ ಸಣ್ಣತನ ತೋರಿಸುತ್ತದೆ ಎಂದು ಸಿಡಿಮಿಡಿಗೊಂಡರು.

ಗುರುವಾರ (ಜು.05) ನಡೆದ ಕ್ಯಾಬಿನೆಟ್​ನಲ್ಲಿ ಮುಖ್ಯಮಂತ್ರಿ, ಸಚಿವರಿಗೆಷ್ಟೇ ಮಾತ್ರ ಜನತಾ ದರ್ಶನ ಮಾಡುವ ಅಧಿಕಾರವಿದೆ ಎಂದು ಸರ್ಕಾರ ಸುತ್ತೋಲೆ ಹೊರಡಿಸಲಾಗಿದೆ. ಅಧಿಕಾರಿಗಳಿಗೂ ಕೂಡ ಈಗಾಗಲೇ ಈ ಕುರಿತು ಸೂಚನೆ‌ ನೀಡಲಾಗಿದೆ ಎಂದು ಆರೋಪ ಮಾಡಿದರು.

ಇದನ್ನೂ ಓದಿ: ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಮುಡಾ ಫ್ಯಾಕ್ಟರಿ ಶುರುವಾಯ್ತು: ಡಿಕೆಶಿ ಬುಡಕ್ಕೆ ತಂದಿಟ್ಟ ಕುಮಾರಸ್ವಾಮಿ

ಡಿ.ಕೆ.ಸುರೇಶ್ ಸಂಸದರಾಗಿದ್ದ ಸಂದರ್ಭದಲ್ಲಿ ರಾಮನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು. ಜನಸ್ಪಂದನ ಹೆಸರಲ್ಲಿ ಅಧಿಕಾರಿಗಳನ್ನ ಹಳ್ಳಿಹಳ್ಳಿ‌ ತಿರುಗಿಸಿದರು. ಉಸ್ತುವಾರಿ ಸಚಿವರು ಮಾಡಬೇಕಾದ ಸಭೆಗಳನ್ನು ಡಿಕೆ ಸುರೇಶ್​ ಮಾಡಿದರು. ಅದಕ್ಕೆ ಅನುಮತಿ ಕೊಟ್ಟವರು ಯಾರು? ಆ ಸಂದರ್ಭದಲ್ಲಿ ಯಾವ ನಿಯಮ ಇತ್ತು? ಇವತ್ತು ಕೇಂದ್ರದ ಒಬ್ಬ ಮಂತ್ರಿ ಜನರ ಅಹವಾಲು ಸ್ವೀಕರಿಸಲು ಬಂದಿದ್ದೇನೆ, ಹೊಸ ನಿಯಾಮವಳಿ ಮೂಲಕ ತಡೆಯಲು ಮುಂದಾಗಿದ್ದಾರೆ. ಇದು ನನ್ನ ಮನೆಯ ಕಾರ್ಯಕ್ರಮವಲ್ಲ. ಇದರಿಂದ ಅವರಿಗೆ ಏನು ದೊರಕಲ್ಲ ಎಂದು ವಾಗ್ದಾಳಿ ಮಾಡಿದರು.

ಕುಮಾರಸ್ವಾಮಿ ಸಭೆ ಕರೆದಾಗ ಅಧಿಕಾರಿಗಳು ಹೋಗಲೇಬೇಕು: ಸತೀಶ್​

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಕ್ಕೆ ಸಚಿವ ಸತೀಶ್ ಜಾರಕಿಹೊಳಿ ದನಿಗೂಡಿಸಿದ್ದಾರೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೋ, ಇಲ್ಲವೋ ಗೊತ್ತಿಲ್ಲ. ಹೆಚ್​ಡಿ ಕುಮಾರಸ್ವಾಮಿಯವರು ಮಂಡ್ಯ ಸಂಸದರು. ಅವರು ಸಭೆ ಕರೆದಾಗ ಅಧಿಕಾರಿಗಳು ಹೋಗಲೇಬೇಕಾಗುತ್ತದೆ. ಹೋಗದೆ ಇದ್ದರೆ ಅದು ಸರಿಯಲ್ಲ ಎಂದರು.

ನಮ್ಮ ಸಂಸದ ಜಗದೀಶ್ ಶೆಟ್ಟರ್ ಅವರು ಸಭೆ ಮಾಡಿದಾಗ ಜಿಲ್ಲೆಯ ಎಲ್ಲ ಅಧಿಕಾರಿಗಳು ಹೋಗಿದ್ದರು. ಮಂಡ್ಯದಲ್ಲಿ ಏನಾಗಿದೆ ಗೊತ್ತಿಲ್ಲ, ಆದರೆ ನಮ್ಮ ಜಿಲ್ಲೆಯ ಸಂಸದರ ಉದಾಹರಣೆ ನಾನು ನೀಡಿದ್ದೇನೆ. ಸಚಿವರು ಸಂಸದರನ್ನು ಸ್ವಾಗತ ಮಾಡಿಕೊಳ್ಳಬೇಕಾಗುತ್ತದೆ ಎಂದು ಹೆಚ್​ಡಿ ಕುಮಾರಸ್ವಾಮಿ ಅವರ ಪರ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟ್​ ಬೀಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:10 pm, Fri, 5 July 24