AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಮೊಟ್ಟೆ ಕೊಟ್ಟಿದ್ದಕ್ಕೆ ಆಲಕೆರೆ ಸರ್ಕಾರಿ ಶಾಲೆ ತೊರೆದ 70 ವಿದ್ಯಾರ್ಥಿಗಳು!

ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಯಿಂದಾಗಿ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ ತೊರೆದಿದ್ದಾರೆ. ಶಾಲೆಯ ಬಳಿ ದೇವಸ್ಥಾನ ಇರುವುದರಿಂದ ಮೊಟ್ಟೆ ವಿತರಣೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲವು ಪೋಷಕರು ಮೊಟ್ಟೆ ವಿತರಣೆಗೆ ಆಗ್ರಹಿಸಿದ್ದರೂ, ಹೆಚ್ಚಿನವರು ತಮ್ಮ ಧಾರ್ಮಿಕ ಭಾವನೆಗಳನ್ನು ಉಲ್ಲೇಖಿಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಶಾಲಾ ಆಡಳಿತ ಇಕ್ಕಟ್ಟಿನಲ್ಲಿ ಸಿಲುಕಿದೆ.

ಮಂಡ್ಯ: ಮೊಟ್ಟೆ ಕೊಟ್ಟಿದ್ದಕ್ಕೆ ಆಲಕೆರೆ ಸರ್ಕಾರಿ ಶಾಲೆ ತೊರೆದ 70 ವಿದ್ಯಾರ್ಥಿಗಳು!
ಆಲಕೆರೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳು
ದಿಲೀಪ್​, ಚೌಡಹಳ್ಳಿ
| Edited By: |

Updated on: Aug 12, 2025 | 9:09 AM

Share

ಮಂಡ್ಯ, ಆಗಸ್ಟ್ 12: ಮೊಟ್ಟೆ ಕೊಡುತ್ತಿರುವುದನ್ನು ವಿರೋಧಿಸಿ 70 ವಿದ್ಯಾರ್ಥಿಗಳು ಸರ್ಕಾರಿ ಶಾಲೆ (government School) ತೊರೆದ ಘಟನೆ ಮಂಡ್ಯ (Mandya) ತಾಲೂಕಿನ ಆಲಕೆರೆ ಗ್ರಾಮದಲ್ಲಿ ನಡೆದಿದೆ. ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆ ಸೃಷ್ಟಿಯಾಗಿತ್ತು. ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಹೆಚ್ಚಿನ ಪೋಷಕರು ಈ ಹಿಂದೆಯೇ ತಿಳಿಸಿದ್ದರು. ಕೆಲವೇ ಸಂಖ್ಯೆಯ ಪೋಷಕರು ಮೊಟ್ಟೆ ನೀಡುವಂತೆ ಆಗ್ರಹಿಸಿದ್ದರು. ಹೀಗಾಗಿ ಇಕ್ಕಟ್ಟಿಗೆ ಸಿಲುಕಿದ್ದ ಅಧಿಕಾರಿಗಳು ನಿಯಮದಂತೆ ಮೊಟ್ಟೆ ವಿತರಣೆ ಆರಂಭಿಸಿದ್ದರು. ಇದರ ಬೆನ್ನಲ್ಲೇ ಮಕ್ಕಳು ಸಾಮೂಹಿಕವಾಗಿ ಶಾಲೆ ತೊರದಿದ್ದಾರೆ. ಶಾಲೆಯಲ್ಲಿ ಒಟ್ಟಾರೆಯಾಗಿ 124 ಮಕ್ಕಳು ಓದುತ್ತಿದ್ದು ಆ ಪೈಕಿ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದೀಗ ಶಾಲೆ ತೊರೆದಿದ್ದಾರೆ. ನಮ್ಮ ಧಾರ್ಮಿಕ ಭಾವನೆಗೆ ಬೆಲೆ ಸಿಗದ ಜಾಗದಲ್ಲಿ ಓದುವುದು ಬೇಡ ಎಂದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ.

ಮಂಡ್ಯ ಆಲಕೆರೆ ಶಾಲೆ ಮೊಟ್ಟೆ ವಿತರಣೆ ವಿವಾದದ ಹಿನ್ನೆಲೆ

ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ನೀಡುವ ವಿಚಾರವಾಗಿ ಕಳೆದ ತಿಂಗಳು ಪರ-ವಿರೋಧ ವ್ಯಕ್ತವಾಗಿತ್ತು. ಶಾಲೆ ಬಳಿ ವೀರಭದ್ರೇಶ್ವರ ಸ್ವಾಮಿ ದೇಗುಲ ಇರುವುದರಿಂದ ಮೊಟ್ಟೆ ವಿತರಣೆ ಮಾಡಬಾರದು. ದೇಗುಲದ ಸುತ್ತಮುತ್ತ ಮಾಂಸಾಹಾರ, ಮೊಟ್ಟೆಯನ್ನು ಸ್ಥಳೀಯರ ಇಚ್ಛೆಯಂತೆ ನಿಷೇಧಿಸಲಾಗಿದೆ ಎಂದು ಕೆಲವು ಮಂದಿ ಪೋಷಕರು ಆಗ್ರಹಿಸಿದ್ದರು. ಈ ಕಾರಣಕ್ಕೆ ಶಾಲೆಯಲ್ಲಿ ಕೂಡ ಮೊಟ್ಟೆ ವಿತರಿಸದಿರಲು ಎಸ್​​ಡಿಎಂಸಿ ನಿರ್ಧರಿಸಿತ್ತು. ಮೊಟ್ಟೆ ಬದಲಿಗೆ ಬಾಳೆಹಣ್ಣು ಅಥವಾ ಮಿಠಾಯಿ ವಿತರಣೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಮತ್ತೆ ಮೊಟ್ಟೆ ವಿತರಣೆ ಮಾಡಲು ಮುಂದಾಗಿದ್ದು ಹೆಚ್ಚಿನ ಪೋಷಕರ ವಿರೋಧಕ್ಕೆ ಗುರಿಯಾಗಿತ್ತು.

ಮೊಟ್ಟೆ ವಿತರಣೆ ಬಗ್ಗೆ ಪೋಷಕರು ಹೇಳಿದ್ದೇನು?

Alakere Government School Students

ಇದನ್ನೂ ಓದಿ
Image
ಕಾಡಾನೆ ದಾಳಿಗೆ ಒಳಗಾಗಿದ್ದ ವ್ಯಕ್ತಿಗೆ 25 ಸಾವಿರ ದಂಡ! ಎಚ್ಚರಿಕೆ ಸಂದೇಶ
Image
ರಾಜಣ್ಣ ತಲೆದಂಡಕ್ಕೆ ಕಾರಣ ಒಂದೆರಡಲ್ಲ: ಈ ವಿಚಾರಗಳೇ ಮುಳುವಾಯ್ತು ನೋಡಿ!
Image
ಮಂಡ್ಯದಲ್ಲಿ ವ್ಯಕ್ತಿಯ ಪ್ರಾಣಕ್ಕೆ ಕುತ್ತು ತಂದ ವೈಟ್‌ ಶರ್ಟ್‌
Image
ಆಲಕೆರೆ ಶಾಲೆಯಲ್ಲಿ ಮೊಟ್ಟೆ ಗಲಾಟೆ, ಪರ-ವಿರೋಧ ಶುರುವಾಗಿದ್ದೇಕೆ ನೋಡಿ

ಮೊಟ್ಟೆ ತಿನ್ನುವ ಬಗ್ಗೆ ನಮಗೆ ಯಾವುದೇ ತಕರಾರಿಲ್ಲ. ಆದರೆ ಈ ಪ್ರದೇಶದಲ್ಲಿ ದೇಗುಲ ಇರುವುದರಿಂದ ಬೇಡ. ಮೊಟ್ಟೆ ಬೇಕು ಎನ್ನುವ ಮಕ್ಕಳ ಮನೆಗೇ ಅದನ್ನು ತಲುಪಿಸಿಬಿಡಿ. ದೇಗುಲದ ಆವರಣವಾಗಿರುವುದರಿಂದ ಶಾಲೆಯಲ್ಲಿ ಮೊಟ್ಟೆ ಬೇಯಿಸುವುದು ಬೇಡ. ನಮ್ಮ ಧಾರ್ಮಿಕ ಭಾವನೆಗೆ ಬೆಲೆ ನೀಡಬೇಕು. ಇಲ್ಲವಾದಲ್ಲಿ ಟಿಸಿ ಕೊಟ್ಟುಬಿಡಿ ನಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸುತ್ತೇವೆ ಎಂದು ಕಳೆದ ತಿಂಗಳು ಹೆಚ್ಚಿನ ಮಕ್ಕಳ ಪೋಷಕರು ಹೇಳಿದ್ದರು.

ಇದನ್ನೂ ಓದಿ: ಮಂಡ್ಯ: ಆಲಕೆರೆ ಶಾಲೆಯಲ್ಲಿ ಮೊಟ್ಟೆ ಗಲಾಟೆ, ಪರ-ವಿರೋಧ ಶುರುವಾಗಿದ್ದೇಕೆ ನೋಡಿ

ಆದರೆ, ಮತ್ತೊಂದು ವರ್ಗದ ಪೋಷಕರು ಮೊಟ್ಟೆ ನೀಡಲೇಬೇಕು ಎಂದು ಹಠ ಹಿಡಿದಿದ್ದರಿಂದ, ಅಧಿಕಾರಿಗಳು ಹಾಗೂ ಶಿಕ್ಷಕರು ಇಕ್ಕಟ್ಟಿಗೆ ಸಿಲುಕಿದ್ದರು. ಅಂತಿಮವಾಗಿ ಮೊಟ್ಟೆ ವಿತರಣೆ ಆರಂಭಿಸಲಾಗಿತ್ತು. ಅದರ ಬೆನ್ನಲ್ಲೇ ಇದೀಗ ವಿದ್ಯಾರ್ಥಿಗಳು ಸಾಮೂಹಿಕವಾಗಿ ಶಾಲೆ ತೊರೆದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್