AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಹೆಣ್ಣು ಭ್ರೂಣ ಪತ್ತೆ, ಹತ್ಯೆ: ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ ಆರು ಮಂದಿ ಬಂಧನ

ಒಂಟಿ ಮನೆ, ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಒಂದು ಹೆಣ್ಣುಭ್ರೂಣ ಹತ್ಯೆಗೆ 10 ಸಾವಿರದಿಂದ 50 ಸಾವಿರದವರೆಗೂ ಚಾರ್ಜ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ಭೇದಿಸಲು ಏಳು ತಂಡ ರಚನೆ ಮಾಡಲಾಗಿದೆ. ಪ್ರಕರಣದಲ್ಲಿ ಕೆಲ ವೈದ್ಯರು ಭಾಗಿಯಾಗಿದ್ದಾರೆ. ಅವರ ಬಂಧನಕ್ಕೂ ಖಾಕಿ ಮುಂದಾಗಿದೆ.

ಮಂಡ್ಯ ಹೆಣ್ಣು ಭ್ರೂಣ ಪತ್ತೆ, ಹತ್ಯೆ: ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ ಆರು ಮಂದಿ ಬಂಧನ
ಸಾಂದರ್ಭಿಕ ಚಿತ್ರ
ಪ್ರಶಾಂತ್​ ಬಿ.
| Edited By: ಆಯೇಷಾ ಬಾನು|

Updated on:Sep 11, 2024 | 9:55 AM

Share

ಮಂಡ್ಯ, ಸೆ.11: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ (Female Fetus) ಸಂಬಂಧಿಸಿ ಪ್ರತಿ ದಿನ ಒಬ್ಬೊಬ್ಬರೇ ಆರೋಪಿಗಳು ಖಾಕಿ ಬಲೆಗೆ ಬೀಳುತ್ತಿದ್ದಾರೆ. ಮತ್ತೆ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಂಟಿ ಮನೆ, ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಒಂದು ಹೆಣ್ಣುಭ್ರೂಣ ಹತ್ಯೆಗೆ 10 ಸಾವಿರದಿಂದ 50 ಸಾವಿರದವರೆಗೂ ಚಾರ್ಜ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ಆಕ್ಟೀವ್ ಆಗಿದ್ದ ಈ ತಂಡ, ಕಳೆದ ಹಲವು ವರ್ಷಗಳಿಂದ ಕರಾಳದಂಧೆ ನಡೆಸುತ್ತಿತ್ತು. ಆರೋಪಿಗಳು ಪೊಲೀಸ್, ಆರೋಗ್ಯ ಇಲಾಖೆಯ ಕಣ್ತಪ್ಪಿಸಿ ದಂಧೆ ನಡೆಸುತ್ತಿದ್ದರು. ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ್ ಪಟೇಲ್, ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬರ್, ಕೆ.ಆರ್. ನಗರದ ಶಂಕರ್ ಬಂಧಿತ ಆರೋಪಿಗಳು. ಬಂಧಿತರಿಂದ ಸ್ಕ್ಸಾನಿಂಗ್ ಮಶೀನ್, ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಇದುವರೆಗೂ 50ಕ್ಕೂ ಹೆಚ್ಚು ಹೆಣ್ಣುಭ್ರೂಣ ಹತ್ಯೆ ಮಾಡಿರುವುದು ಬಯಲಾಗಿದೆ.

ಆಸ್ಪತ್ರೆಗೆ ಸೋನೋಗ್ರಫಿ ಟೆಸ್ಟ್ ಮಾಡಿಸಿಕೊಳ್ಳಲು ಬರುವವರನ್ನೇ ಈ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ವಾರದ ಹಿಂದೆ ಕಿಂಗ್ ಪಿನ್ ಅಭಿಷೇಕ್ ಹಾಗೂ ವಿರೇಶ್ ಸೇರಿ 12 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಬಳಿಕ ಮತ್ತೆ 6 ಜನರನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ 6 ಜನರನ್ನು ಬಂಧಿಸಲಾಗಿದೆ.

ಪ್ರಕರಣ ಭೇದಿಸಲು ಏಳು ತಂಡ ರಚನೆ ಮಾಡಲಾಗಿದೆ. ಪ್ರಕರಣದಲ್ಲಿ ಕೆಲ ವೈದ್ಯರು ಭಾಗಿಯಾಗಿದ್ದಾರೆ. ಅವರ ಬಂಧನಕ್ಕೂ ಖಾಕಿ ಮುಂದಾಗಿದೆ. ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಘಟಕ ಪರೀಕ್ಷೆಗಳಿಗೂ ವೆಬ್ ಕಾಸ್ಟಿಂಗ್ ಅಸ್ತ್ರ ಪ್ರಯೋಗ; ಸರ್ಕಾರಿ ಶಾಲಾ ಶಿಕ್ಷಕರ ಪರದಾಟಕ್ಕೆ ಕಾರಣಾಯ್ತು ಇಲಾಖೆ ನಡೆ

ಪ್ರಕರಣ ಹಿನ್ನೆಲೆ

ಮೊದಲಿಗೆ ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ನಡೆಯುತ್ತಿದ್ದ ಕರಾಳದಂಧೆಯನ್ನ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿ ಹಲವು ಮಂದಿಯನ್ನ ಬಂಧಿಸಿದ್ದರು. ಆನಂತರ ಈ ಪ್ರಕರಣವನ್ನ ಸಿಐಡಿಗೂ ವಹಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಕಿಂಗ್ ಪಿನ್ ಆಗಿದ್ದ ಅಭಿಷೇಕ್ ಬಂಧನವಾಗದೇ ತಲೆ ಮರೆಸಿಕೊಂಡಿದ್ದ. ಆನಂತರ ಪಾಂಡವಪುರದ ಹೆಲ್ತ್ ಕ್ವಾಟ್ರಸ್, ಮೇಲೆಕೋಟೆ, ನಾಗಮಂಗಲ ಸೇರಿದಂತೆ ಹಲವು ಕಡೆಗಳಲ್ಲಿ ನಡೆಯುತ್ತಿದ್ದ ಕರಾಳದಂಧೆ ಬೇಧಿಸಿ ಹಲವು ಆರೋಪಿಗಳನ್ನ ಬಂಧನ ಮಾಡಲಾಗಿತ್ತು. ಆದರೆ ಐದು ಪ್ರಕರಣಗಳಲ್ಲಿ ಸಿಐಡಿ ಪೊಲೀಸರು ಸೇರಿದಂತೆ ಮಂಡ್ಯ ಜಿಲ್ಲೆಯ ಪೊಲೀಸರಿಗೆ ಚಳ್ಳೆಯನ್ನು ತಿನ್ನಿಸಿ ಕಿಂಗ್ ಪಿನ್ ಅಭಿಷೇಕ್ ಕರಾಳದಂಧೆಯನ್ನ ಮುಂದುವರೆಸಿಕೊಂಡು ಹೋಗಿದ್ದ. ಈತನ ಬಂಧನಕ್ಕಾಗಿಯೇ ಏಳು ತಂಡಗಳನ್ನ ರಚನೆ ಮಾಡಲಾಗಿತ್ತು. ಕೊನೆಗೂ ಐನಾತಿ ಅಭಿಷೇಕ್ ಬಂಧನವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:54 am, Wed, 11 September 24

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More