ಮಂಡ್ಯ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ: ಮತ್ತೆ ಮೂವರ ಬಂಧನ

ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಇದೀಗ ಈ ಪ್ರಕರಣ ಸಂಬಂಧ ಮಂಡ್ಯ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 2 ಸ್ಕ್ಯಾನಿಂಗ್ ಯಂತ್ರ, ಒಂದು ಕಾರು ವಶಕ್ಕೆ ಪಡೆಯಲಾಗಿದೆ.

ಮಂಡ್ಯ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ: ಮತ್ತೆ ಮೂವರ ಬಂಧನ
ಆರೋಪಿಗಳಿಂದ ವಶಕ್ಕೆ ಪಡೆದ ವಸ್ತುಗಳು
Follow us
| Updated By: ಆಯೇಷಾ ಬಾನು

Updated on: Sep 08, 2024 | 8:16 AM

ಮಂಡ್ಯ, ಸೆ.08: ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ (Fetus Discovery And Murder) ಸಂಬಂಧಿಸಿ ಮಂಡ್ಯ ಪೊಲೀಸರು (Mandya Police) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ್ ಬಂಧಿತ ಆರೋಪಿಗಳು. ಬಂಧಿತರಿಂದ 2 ಸ್ಕ್ಯಾನಿಂಗ್ ಯಂತ್ರ, ಒಂದು ಕಾರು ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಜನರನ್ನ ಬಂಧಿಸಲಾಗಿದೆ. ಇದೀಗ ಮತ್ತೆ ಮೂವರು ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಆರೇಳು ಆರೋಪಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಮೇಲುಕೋಟೆ, ನಂಜನಗೂಡು, ಪಾಂಡವಪುರ, ಬೆಳ್ಳೂರು ಠಾಣೆಗಳಲ್ಲಿ ಪ್ರಕರಣ ಸಂಬಂಧ ಪ್ರಕರಣಗಳು ದಾಖಲಾಗಿದ್ದು ಮಂಡ್ಯ ಪೊಲೀಸರು ಮತ್ತಷ್ಟು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿತ, ವ್ಯಕ್ತಿ ಆಸ್ಪತ್ರೆಗೆ ದಾಖಲು

ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಹಣದಾಸೆಗೆ ಕರುಳಬಳ್ಳಿಗಳನ್ನ ಕೊಲ್ಲುವಂತಹ ಹೇಯ ಕೃತ್ಯವನ್ನ ಪಾಪಿಗಳು ಎಸುಗುತ್ತಿದ್ದರು. ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಏನೆಲ್ಲ ಕ್ರಮಗಳನ್ನ ತೆಗೆದುಕೊಂಡರು ಸಕ್ಕರಿನಗರಿಯಲ್ಲಿ ಇಂತಹ ಹೇಯಕೃತ್ಯ ನಿರಂತರವಾಗಿ ನಡೆಯುತ್ತಿತ್ತು. ಅದರಲ್ಲೂ ತಮ್ಮದೇ ಆದ ನೆಟ್ ವರ್ಕ್ ಮಾಡಿಕೊಂಡು ಕರಾಳದಂಧೆಯ್ನ ಪಾಪಿಗಳು ನಡೆಸುತ್ತಿದ್ದರು. ಇನ್ನು ಇಂತಹ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಪ್ರಕರಣದ ಕಿಂಗ್ ಪಿನ್ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಎಮ್ ಶೆಟ್ಟಿಹಳ್ಳಿ ಗ್ರಾಮದ ಅಭಿಷೇಕ್, ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ವಿರೇಶ್ ಸೇರಿ ಒಟ್ಟು 12 ಜನ ಆರೋಪಿಗಳನ್ನ ಇತ್ತೀಚೆಗೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 23 ಲಕ್ಷ ರೂ ಮೌಲ್ಯದ ಎರಡು ಸ್ಕ್ನಾನಿಂಗ್ ಮಶೀನ್, ಮೂರು ಕಾರು ಸೇರಿ ಮೂರು ಮೊಬೈಲ್ ಗಳನ್ನ ವಶಕ್ಕೆ ಪಡೆದಿದ್ದಾರೆ.

ಮೊದಲಿಗೆ ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ನಡೆಯುತ್ತಿದ್ದ ಕರಾಳದಂಧೆಯನ್ನ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿ ಹಲವು ಮಂದಿಯನ್ನ ಬಂಧಿಸಿದ್ದರು. ಆನಂತರ ಈ ಪ್ರಕರಣವನ್ನ ಸಿಐಡಿಗೂ ವಹಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಕಿಂಗ್ ಪಿನ್ ಆಗಿದ್ದ ಅಭಿಷೇಕ್ ಬಂಧನವಾಗದೇ ತಲೆ ಮರೆಸಿಕೊಂಡಿದ್ದ. ಆನಂತರ ಪಾಂಡವಪುರದ ಹೆಲ್ತ್ ಕ್ವಾಟ್ರಸ್, ಮೇಲೆಕೋಟೆ, ನಾಗಮಂಗಲ ಸೇರಿದಂತೆ ಹಲವು ಕಡೆಗಳಲ್ಲಿ ನಡೆಯುತ್ತಿದ್ದ ಕರಾಳದಂಧೆ ಬೇಧಿಸಿ ಹಲವು ಆರೋಪಿಗಳನ್ನ ಬಂಧನ ಮಾಡಲಾಗಿತ್ತು. ಆದರೆ ಐದು ಪ್ರಕರಣಗಳಲ್ಲಿ ಸಿಐಡಿ ಪೊಲೀಸರು ಸೇರಿದಂತೆ ಮಂಡ್ಯ ಜಿಲ್ಲೆಯ ಪೊಲೀಸರಿಗೆ ಚಳ್ಳೆಯನ್ನು ತಿನ್ನಿಸಿ ಕಿಂಗ್ ಪಿನ್ ಅಭಿಷೇಕ್ ಕರಾಳದಂಧೆಯನ್ನ ಮುಂದುವರೆಸಿಕೊಂಡು ಹೋಗಿದ್ದ. ಈತನ ಬಂಧನಕ್ಕಾಗಿಯೇ ಏಳು ತಂಡಗಳನ್ನ ರಚನೆ ಮಾಡಲಾಗಿತ್ತು. ಕೊನೆಗೂ ಐನಾತಿ ಅಭಿಷೇಕ್ ಬಂಧನವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ