ಬಗೆದಷ್ಟು ಬಯಲಾಗುತ್ತಿದೆ ಮಂಡ್ಯ ಭ್ರೂಣ ಪತ್ತೆ, ಹತ್ಯೆ ಪ್ರಕರಣ; ಮತ್ತೆ ಮೂವರು ಅರೆಸ್ಟ್, 18ಕ್ಕೆ ಏರಿದ ಬಂಧಿತರ ಸಂಖ್ಯೆ

ಮಂಡ್ಯ ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗ ಮತ್ತೆ ಮೂವರನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಪೊಲೀಸರಿಗೆ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಬಂಧಿತರಿಂದ ಒಂದು ಕಾರು ವಶಕ್ಕೆ ಪಡೆಯಲಾಗಿದೆ.

ಬಗೆದಷ್ಟು ಬಯಲಾಗುತ್ತಿದೆ ಮಂಡ್ಯ ಭ್ರೂಣ ಪತ್ತೆ, ಹತ್ಯೆ ಪ್ರಕರಣ; ಮತ್ತೆ ಮೂವರು ಅರೆಸ್ಟ್, 18ಕ್ಕೆ ಏರಿದ ಬಂಧಿತರ ಸಂಖ್ಯೆ
ಬಗೆದಷ್ಟು ಬಯಲಾಗುತ್ತಿದೆ ಮಂಡ್ಯ ಭ್ರೂಣ ಪತ್ತೆ, ಹತ್ಯೆ ಪ್ರಕರಣ; ಮತ್ತೆ ಮೂವರು ಅರೆಸ್ಟ್,
Edited By:

Updated on: Sep 10, 2024 | 9:00 AM

ಮಂಡ್ಯ, ಸೆ.10: ಮಂಡ್ಯ (Mandya) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿವಂತೆ ಮಾಡಿತ್ತು. ಹೆಣ್ಣುಭ್ರೂಣಉ ಹತ್ಯೆಯ (Feticide) ಕರಾಳ ದಂಧೆಯ ಅನೇಕ ಸಂಗತಿಗಳು ಬಗೆದಷ್ಟು ಬಯಲಾಗುತ್ತಲೇ ಇದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 15 ಜನರನ್ನ ಪೊಲೀಸರು ಅರೆಸ್ಟ್ ಮಾಡಿದ್ದು ಇದೀಗ ಮತ್ತೆ ಮೂವರು ಬಲೆಗೆ ಬಿದ್ದಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಈ ಪ್ರಕರಣದಲ್ಲಿ ಇನ್ನು ಹಲವು ಆರೋಪಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿತ್ತು. ತನಿಖೆ ಮುಂದುವರೆಸಿದ್ದ ಪೊಲೀಸರು ಈಗ ಮತ್ತೆ ಮೂವರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರಿಗೆ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಬಂಧಿತರಿಂದ ಒಂದು ಕಾರು ವಶಕ್ಕೆ ಪಡೆಯಲಾಗಿದೆ.

ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬರ್@ಬಾಬು, ಕೆ.ಆರ್.ನಗರದ ಶಂಕರ ಬಂಧಿತ ಆರೋಪಿಗಳು. ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು ಮಂಡ್ಯ ಪೊಲೀಸರು ಮತ್ತಷ್ಟು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ; ಹೆಣ್ಣು ಎಂದು ಗರ್ಭಪಾತ, ಆದ್ರೆ ಅದು ಗಂಡು ಮಗುವಾಗಿತ್ತು

ಪ್ರಕರಣ ಹಿನ್ನೆಲೆ

ಮೊದಲಿಗೆ ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ನಡೆಯುತ್ತಿದ್ದ ಕರಾಳದಂಧೆಯನ್ನ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿ ಹಲವು ಮಂದಿಯನ್ನ ಬಂಧಿಸಿದ್ದರು. ಆನಂತರ ಈ ಪ್ರಕರಣವನ್ನ ಸಿಐಡಿಗೂ ವಹಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಕಿಂಗ್ ಪಿನ್ ಆಗಿದ್ದ ಅಭಿಷೇಕ್ ಬಂಧನವಾಗದೇ ತಲೆ ಮರೆಸಿಕೊಂಡಿದ್ದ. ಆನಂತರ ಪಾಂಡವಪುರದ ಹೆಲ್ತ್ ಕ್ವಾಟ್ರಸ್, ಮೇಲೆಕೋಟೆ, ನಾಗಮಂಗಲ ಸೇರಿದಂತೆ ಹಲವು ಕಡೆಗಳಲ್ಲಿ ನಡೆಯುತ್ತಿದ್ದ ಕರಾಳದಂಧೆ ಬೇಧಿಸಿ ಹಲವು ಆರೋಪಿಗಳನ್ನ ಬಂಧನ ಮಾಡಲಾಗಿತ್ತು. ಆದರೆ ಐದು ಪ್ರಕರಣಗಳಲ್ಲಿ ಸಿಐಡಿ ಪೊಲೀಸರು ಸೇರಿದಂತೆ ಮಂಡ್ಯ ಜಿಲ್ಲೆಯ ಪೊಲೀಸರಿಗೆ ಚಳ್ಳೆಯನ್ನು ತಿನ್ನಿಸಿ ಕಿಂಗ್ ಪಿನ್ ಅಭಿಷೇಕ್ ಕರಾಳದಂಧೆಯನ್ನ ಮುಂದುವರೆಸಿಕೊಂಡು ಹೋಗಿದ್ದ. ಈತನ ಬಂಧನಕ್ಕಾಗಿಯೇ ಏಳು ತಂಡಗಳನ್ನ ರಚನೆ ಮಾಡಲಾಗಿತ್ತು. ಕೊನೆಗೂ ಐನಾತಿ ಅಭಿಷೇಕ್ ಬಂಧನವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ