AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ನಾಲೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ ಯಶಸ್ವಿ; ಅರಣ್ಯ ಸಿಬ್ಬಂದಿಯಿಂದ ರೋಚಕ ಕಾರ್ಯಾಚರಣೆ

ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದಿದ್ದ ಕಾಡಾನೆಯನ್ನು ಮೂರು ದಿನಗಳ ಸುದೀರ್ಘ ಕಾರ್ಯಾಚರಣೆಯ ನಂತರ ಯಶಸ್ವಿಯಾಗಿ ರಕ್ಷಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶುವೈದ್ಯರ ತಂಡವು ಎರಡು ಅರಿವಳಿಕೆ ಚುಚ್ಚುಮದ್ದು ನೀಡಿ, ಕ್ರೇನ್ ಮೂಲಕ ಪ್ರಜ್ಞೆತಪ್ಪಿದ ಆನೆಯನ್ನು ಮೇಲೆತ್ತಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ.

ಮಂಡ್ಯ: ನಾಲೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ ಯಶಸ್ವಿ; ಅರಣ್ಯ ಸಿಬ್ಬಂದಿಯಿಂದ ರೋಚಕ ಕಾರ್ಯಾಚರಣೆ
ಕಾಡಾನೆ ರಕ್ಷಣೆ
ಪ್ರಶಾಂತ್​ ಬಿ.
| Edited By: |

Updated on: Nov 18, 2025 | 3:49 PM

Share

ಮಂಡ್ಯ, ನವೆಂಬರ್​​ 18: ಜಿಲ್ಲೆಯ ಶಿವನಸಮುದ್ರದ ಬಳಿಯ ನಾಲೆಯಲ್ಲಿ (Canal) ಮೂರು ದಿನ ಸಿಲುಕಿ ಪರದಾಡಿದ್ದ ಕಾಡಾನೆಯನ್ನು (Wild Elephant) ಸತತ ಕಾರ್ಯಾಚರಣೆ ಬಳಿಕ ಇದೀಗ ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕ್ರೇನ್ ಮೂಲಕ ನಾಲೆಯಿಂದ ಕಾಡಾನೆಯನ್ನು ಮೇಲೆತ್ತಿದ್ದಾರೆ. ಸದ್ಯ ಚಿಕಿತ್ಸೆ ನೀಡಿ ಹಲಗೂರು ಅರಣ್ಯ ಪ್ರದೇಶದಲ್ಲಿ ಬಿಡಲಾಗಿದೆ.

ಆಹಾರ ಅರಸಿ ಬಂದು ನಾಲೆಗೆ ಬಿದ್ದ ಕಾಡಾನೆ

10 ರಿಂದ 15 ವರ್ಷ ಪ್ರಾಯದ ಕಾಡಾನೆ ಆಹಾರ ಅರಸಿ ಬಂದು ಜಿಲ್ಲೆಯ ಮಳವಳ್ಳಿ ತಾಲೂಕಿನ‌ ಶಿವವಸಮುದ್ರ ಬಳಿಯ ನಾಲೆಗೆ ಬಿದ್ದಿದೆ. ಖಾಸಗಿ ಪವರ್ ಸ್ಟೇಷನ್​ಗೆ ನೀರು ಸರಬರಾಜು ಮಾಡುವ ನಾಲೆಯಲ್ಲೇ 3 ದಿನದಿಂದ ಸಿಲುಕಿತ್ತು. ಸ್ಥಳದಲ್ಲೇ ಬೀಡುಬಿಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಕಾಡಾನೆಗೆ ಆಹಾರ ನೀಡಿದ್ದರು.

ಇದನ್ನೂ ಓದಿ: ಚಾಮರಾಜನಗರ ತಮಿಳುನಾಡು ಗಡಿ ದಿಂಬಂ ಘಾಟ್​ನಲ್ಲಿ ಕಾಡಾನೆ ಉಪಟಳ: ವಿಡಿಯೋ ವೈರಲ್

ನಾಲೆಯಿಂದ ಆನೆಯನ್ನ ಮೇಲೆತ್ತಲು ಅರಣ್ಯ ಇಲಾಖೆ ಸಿಬ್ಬಂದಿ ನಿನ್ನೆ ಪ್ರಯತ್ನ ಪಟ್ಟಿದ್ದರು. ಆದರೆ ನಾಲೆಯಲ್ಲಿ ನೀರು ಹೆಚ್ಚಾಗಿದ್ದ ಕಾರಣ ಕಾರ್ಯಚರಣೆಗೆ ತೊಡಕಾಗಿತ್ತು. ಇಂದು ನಾಲೆಯ ನೀರನ್ನು ತಗ್ಗಿಸಿ ಕಾರ್ಯಚರಣೆ ಮಾಡಲಾಗಿದೆ.

ಮೊದಲಿಗೆ ಪಟಾಕಿ ಸಿಡಿಸಿ ತಾನಾಗಿಯೇ ಕಾಡಾನೆ ಮೇಲಕ್ಕೆ ಬರುವಂತೆ ಮಾಡಲಾಗಿದೆ. ಆದರೆ ಅದು ಸಾಧ್ಯವಾಗಿಲ್ಲ. ಇನ್ನು ಅರಣ್ಯ ಇಲಾಖೆ ಇಟ್ಟಿರುವ ಕಂಟೇನರ್​​ನ್ನು ಕಾಡಾನೆ ದೂಡಿದೆ. ಬಳಿಕ ಅರಿವಳಿಕೆ ಚುಚ್ಚುಮದ್ದು ನೀಡಲಾಗಿದೆ. ಚುಚ್ಚುಮದ್ದು ನೀಡುತ್ತಿದ್ದಂತೆ ಕಾಡಾನೆ ಕೂಗಾಡಿ ಆರ್ಭಟಿಸಿದೆ.

ಕ್ರೇನ್ ಮೂಲಕ ಕಾಡಾನೆ ರಕ್ಷಣೆ

2 ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಕಾಡಾನೆ ಪ್ರಜ್ಞೆತಪ್ಪಿ ನಾಲೆಯಲ್ಲೇ ಕುಸಿದುಬಿದ್ದಿದೆ. ಬಳಿಕ ಸಿಬ್ಬಂದಿ ನಾಲೆಗೆ ಇಳಿದು ಕಾಡಾನೆಯ ಕಾಲುಗಳಿಗೆ ಬೆಲ್ಟ್ ಕಟ್ಟಿ ಕಬ್ಬಿಣದ ಮ್ಯಾಟ್ ಮೇಲೆ ಮಲಗಿಸಿ ಕ್ರೇನ್ ಮೂಲಕ ನಾಲೆಯಿಂದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆತ್ತಿದ್ದಾರೆ.

ಇದನ್ನೂ ಓದಿ: ವಿರಾಜಪೇಟೆ: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ಸೊಂಡಿಲಿನಿಂದ ಎತ್ತಿ ರಕ್ಷಿಸಿದ ಕಾಡಾನೆ ಹಿಂಡು

ಸುರಕ್ಷಿತವಾಗಿ ಮೇಲೆತ್ತಿ ಲಾರಿ ಮೂಲಕ ಸ್ಥಳಾಂತರಿಸಿದ್ದಾರೆ. ಸದ್ಯ ಕಾಡಾನೆಗೆ ಚಿಕಿತ್ಸೆ ನೀಡಿ ಹಲಗೂರು ಅರಣ್ಯ ಪ್ರದೇಶಕ್ಕೆ ಅರಣ್ಯ ಸಿಬ್ಬಂದಿ ಬಿಟ್ಟಿದ್ದಾರೆ. ಆ ಮೂಲಕ ಕಾಡಾನೆ ರಕ್ಷಣಾ ಕಾರ್ಯಾಚರಣೆ ಯಶಸ್ವಿ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ