AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕಾರು ಪಲ್ಟಿಯಾಗಿ ನಾಲ್ವರು ಸಾವು ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​.ಸಿ.ಮಹದೇವಪ್ಪ

ಮಂಡ್ಯ ಜಿಲ್ಲೆಯ ತುರಗನೂರು ನಾಲೆಗೆ ಬಿದ್ದು ನಾಲ್ವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಹೆಚ್​.ಸಿ.ಮಹದೇವಪ್ಪ ಮಿಮ್ಸ್​ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು.

ಮಂಡ್ಯ: ಕಾರು ಪಲ್ಟಿಯಾಗಿ ನಾಲ್ವರು ಸಾವು ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​.ಸಿ.ಮಹದೇವಪ್ಪ
ಸಚಿವ ಹೆಚ್​ ಸಿ ಮಹದೇವಪ್ಪ
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ|

Updated on:Jul 30, 2023 | 12:02 PM

Share

ಮಂಡ್ಯ ಜುಲೈ 29: ಜಿಲ್ಲೆಯ ತುರಗನೂರು ನಾಲೆಗೆ ಬಿದ್ದು ನಾಲ್ವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಹೆಚ್​.ಸಿ.ಮಹದೇವಪ್ಪ (HC Mahadevappa) ಮಿಮ್ಸ್​ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ (N. Chaluvaraya Swamy) ಮೃತರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ವೈಯಕ್ತಿಕ ನೆರವು ನೀಡಿದ್ದಾರೆ.

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳ ಜತೆ ಮಾತಾಡಿ ಹೆಚ್ಚಿನ ಪರಿಹಾರ ನೀಡಲಾಗುವುದು. ಅಪಘಾತ ವಲಯಗಳನ್ನು ಗುರುತಿಸಿ ತಡೆಗಟ್ಟಲು ಕ್ರಮಕ್ಕೆ ಸೂಚನೆ ನೀಡಲಾಗಿದೆ. ಸರ್ವೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮೃತರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದರು.

ಘಟನೆ ಹಿನ್ನೆಲೆ

ಶನಿವಾರ ರಾತ್ರಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಬಳಿ ನಾಲೆಗೆ ಕಾರು ಪಲ್ಟಿಯಾಗಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದರು. ಕಾರಿನಲ್ಲಿ ತೆರಳುತ್ತಿದ್ದ ಐವರ ಪೈಕಿ ನಾಲ್ವರು ಮೃತ ಪಟ್ಟಿದ್ದು, ಚಾಲಕ ಪಾರಾಗಿದ್ದಾನೆ. ಗಾಮನಹಳ್ಳಿ ನಿವಾಸಿ ದೋಣಯ್ಯ ಎಂಬುವವರ ಪತ್ನಿ ಮಹದೇವಮ್ಮ, ಟಿ.ನರಸೀಪುರ ತಾಲೂಕಿನ ಗೊರವನಹಳ್ಳಿ ನಿವಾಸಿಗಳಾಗಿರುವ ಸಂಜನಾ, ಮಾದೇವಿ, ರೇಖಾ ಮೃತ ದುರ್ದೈವಿಗಳು.

ಗೊರವನಹಳ್ಳಿ ನಿವಾಸಿ ಚಾಲಕ ಮನೋಜ್‌ ಈಜಿ ದಡ ಸೇರಿದ್ದರೆರು. ಗಾಮನಹಳ್ಳಿಯಿಂದ ದೊಡ್ಡಮುಲಗೂಡು ಗ್ರಾಮಕ್ಕೆ ತೆರಳುತ್ತಿದ್ದರು. ನಾಲೆ ಏರಿಯ ತಿರುವಿನಲ್ಲಿ ಕಬ್ಬಿಣದ ತಾತ್ಕಾಲಿಕ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಬಳಿಕ ನಾಲೆಗೆ ಪಲ್ಟಿಯಾಗಿತ್ತು. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:48 am, Sun, 30 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ