ಮಂಡ್ಯ ಬಾಲಕಿ ರೇಪ್ ಎಂಡ್ ಮರ್ಡರ್ ಕೇಸ್, 14 ದಿನದಲ್ಲೇ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ: ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್
ಮಳವಳ್ಳಿಯಲ್ಲಿ ಬಾಲಕಿ ‘ಹತ್ಯಾಚಾರ’ ಪ್ರಕರಣ ಸಂಬಂಧ 600ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ನ್ನು ಪೊಲೀಸರು ಕೋರ್ಟ್ಗೆ ಸಲ್ಲಿಸಿದ್ದಾರೆ. ಪ್ರಕರಣ ದಾಖಲಾಗಿ 14 ದಿನದಲ್ಲೇ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ಮಂಡ್ಯ: ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ‘ಹತ್ಯಾಚಾರ’ ಪ್ರಕರಣ ಸಂಬಂಧ 600ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ನ್ನು ಪೊಲೀಸರು ಕೋರ್ಟ್ಗೆ ಸಲ್ಲಿಸಿದ್ದಾರೆ. ಪ್ರಕರಣ ದಾಖಲಾಗಿ 14 ದಿನದಲ್ಲೇ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿತ್ತು. ಟ್ಯೂಷನ್ಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಶಿಕ್ಷಕ ಕಾಂತರಾಜ್ ಬಾಲಕಿಯನ್ನು ಸಂಪ್ನಲ್ಲಿ ಮುಳುಗಿಸಿದ್ದ. ಪ್ರಸ್ತುತ ಆರೋಪಿ ಕಾಂತರಾಜ್ ನ್ಯಾಯಾಂಗ ಬಂಧನದಲ್ಲಿದ್ದಾನೆ. ಚಾರ್ಜ್ಶೀಟ್ ಸಲ್ಲಿಕೆ ಸಂಬಂಧ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಸಂಸದೆ ಸುಮಲತಾ, ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಬಾಲಕಿ ಕುಟುಂಬಕ್ಕೆ ₹10 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಲಾಗಿದೆ. ಬಾಲಕಿ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.
ಎಚ್ಚೆತ್ತ ಮಂಡ್ಯ ಶಿಕ್ಷಣ ಇಲಾಖೆಯಿಂದ ಖಡಕ್ ನಿಯಮ ಜಾರಿ
ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಮಂಡ್ಯ ಶಿಕ್ಷಣ ಇಲಾಖೆಯು ಅನಧಿಕೃತ ಟ್ಯೂಷನ್ಗಳ ಮೇಲೆ ಹದ್ದಿನ ಕಣ್ಣಿಡಲು ಮುಂದಾಗಿದೆ. ಅನುಮತಿ ಪಡೆಯದೆ ಟ್ಯೂಷನ್ ನಡೆಸಿದರೆ ಕೇಸ್ ಬೀಳುತ್ತೆ ಎಂದು ಮಂಡ್ಯದಲ್ಲಿ ಡಿಡಿಪಿಐ ಜವರೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ. ಟ್ಯೂಷನ್ಗೆ ತೆರಳಿದ್ದ 10 ವರ್ಷದ ಬಾಲಕಿ ಮೇಲೆ ನಡೆದಿದ್ದ ರೇಪ್ ಅಂಡ್ ಮರ್ಡರ್ ಪ್ರಕರಣದಲ್ಲಿ ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸಂಸ್ಥೆಯ ಮೇಲ್ವಿಚಾರಕನಿಂದಲೆ ಪೈಶಾಚಿಕ ಕೃತ್ಯ ನಡೆದಿತ್ತು. ಅದು ಅನಧಿಕೃತವಾಗಿ ನಡೆಯುತ್ತಿದ್ದ ಟ್ಯೂಷನ್ ಸೆಂಟರ್ ಆಗಿತ್ತು. ಮಂಡ್ಯ ಜಿಲ್ಲೆಯಾದ್ಯಂತ ಅಕ್ರಮ ಟ್ಯೂಷನ್ ಸೆಂಟರ್ ಪತ್ತೆಗೆ ಸುತ್ತೋಲೆ ಹೊರಡಿಸಿರುವ ಡಿಡಿಪಿಐ, ಅನಧಿಕೃತ ಟ್ಯೂಷನ್ ಕಂಡು ಬಂದ್ರೆ ತಕ್ಷಣವೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದ್ರೆ ಶಿಸ್ತುಕ್ರಮಕ್ಕೆ ಒಳಗಾಗುತ್ತಾರೆ. ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಶಿಕ್ಷಣ ಇಲಾಖೆ ಈ ಎಚ್ಚರಿಕೆಯ ಕ್ರಮಕ್ಕೆ ಮುಂದಾಗಿದೆ.
Case of Rape & murder of 10 yrs old girl child at Malavalli of Mandya District has been charge sheeted within 14 days of the incident Kudos to Mandya District Police
Making efforts to ensure speedy Justice Grateful to Hon’ble CM @BSBommai ,Hon’ble HM & @DgpKarnataka for support
— alok kumar (@alokkumar6994) October 25, 2022
ಘಟನೆ ಹಿನ್ನೆಲೆ
ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್ನಲ್ಲಿ ಬಾಲಕಿ ಶವಪತ್ತೆಯಾಗಿತ್ತು. ಈ ಸಂಬಂಧ ಕೇಸ್ ದಾಖಲಿಸಿಕೊಂಡು ತನಿಖೆಗೆ ಇಳಿದಾಗ ಇದು ರೇಪ್ ಅಂಡ್ ಮರ್ಡರ್ ಕೇಸ್ ಎಂಬುವುದು ಬಯಾಲಾಯಿತು. ಮಧ್ಯಾಹ್ನ ಟ್ಯೂಷನ್ಗೆ ತೆರಳಿದ್ದ ಬಾಲಕಿ ಎಷ್ಟು ಸಮಯ ಕಳೆದರೂ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್ನಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಮಳವಳ್ಳಿ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದರು. ಇದರ ನಡುವೆ ಬಾಲಕಿಯನ್ನ ಅತ್ಯಾಚಾರವೆಸಗಿ ಕೊಲೆಗೈದಿರುವ ಬಗ್ಗೆ ಪೋಷಕರು ಆರೋಪ ಮಾಡಿದ್ದರು. ಸದ್ಯ ಈಗ ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿದೆ. ಬಾಲಕಿಯನ್ನು ಕರೆಸಿಕೊಂಡು ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಟ್ಯೂಷನ್ ನಡೆಸುತ್ತಿದ್ದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:20 pm, Tue, 25 October 22