AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರಗೋಡು ಹನುಮ ಧ್ವಜ ವಿವಾದ: ರಾಜ್ಯ ಬಿಜೆಪಿ ನಾಯಕರ ವಿರುದ್ಧ ಪ್ರಿಯಾಂಕ್​ ಖರ್ಗೆ ವಾಗ್ದಾಳಿ

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರು ಗ್ರಾಮದ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಈ ವಿಚಾರ ತೀರ್ವ ಸ್ವರೂಪ ಪಡೆದುಕೊಂಡಿದ್ದು, ರಾಜಕೀಯ ಕೆಸರೆಚಾಟಕ್ಕೆ ಕಾರಣವಾಗಿದೆ. ರಾಜ್ಯ ಬಿಜೆಪಿ ನಾಯಕರು ಪ್ರಕರಣ ಸಂಬಂಧ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದಕ್ಕೆ ಸಚಿವ ಪ್ರಿಯಾಂಕ್​ ಖರ್ಗೆ ಟ್ವೀಟ್​ ಮಾಡಿ ಕಿಡಿಕಾರಿದ್ದಾರೆ.

ಕೆರಗೋಡು ಹನುಮ ಧ್ವಜ ವಿವಾದ: ರಾಜ್ಯ ಬಿಜೆಪಿ ನಾಯಕರ ವಿರುದ್ಧ ಪ್ರಿಯಾಂಕ್​ ಖರ್ಗೆ ವಾಗ್ದಾಳಿ
ಸಚಿವ ಪ್ರಿಯಾಂಕ್​ ಖರ್ಗೆ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on: Jan 29, 2024 | 10:42 AM

ಮಂಡ್ಯ, ಜನವರಿ 29: ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ (Hanum Flag) ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ರಾಜ್ಯ ಬಿಜೆಪಿ (BJP) ನಾಯಕರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕಿಡಿಕಾರಿದ್ದಾರೆ. ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗಲ್ಲ. ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ. ಬೆಂಕಿ ಹಚ್ಚಿ, ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳುಮಟ್ಟಕ್ಕೆ ಇಳಿದಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ವಿಪಕ್ಷ ನಾಯಕನೆಂದರೆ ಘನತೆಯುಕ್ತ ಸ್ಥಾನ, ಆ ಸ್ಥಾನದ ಗೌರವವನ್ನು ಮಣ್ಣುಪಾಲು ಮಾಡುತ್ತಿರುವ ವಿರೋಧ ಪಕ್ಷದ ನಾಯಕ ಆರ್​. ಅಶೋಕ್ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಾಷ್ಟ್ರಧ್ವಜದ ಬದಲು ಭಗವಾಧ್ವಜ ಹಾರಿಸುವ ಷಡ್ಯಂತ್ರ ರೂಪಿಸಿದ್ಯಾರು? ಅನುಮತಿ ಪತ್ರದ ಷರತ್ತುಗಳನ್ನ ಉಲ್ಲಂಘಿಸಲು ಪ್ರೇರೇಪಿಸಿದ್ದು ಯಾರು? ಬಿಜೆಪಿ ಅದೆಷ್ಟು ದಿನಗಳಿಂದ ಶಾಂತಿ ಕೆಡಿಸುವ ಸಂಚು ರೂಪಿಸಿತ್ತು? ಕಾನೂನು, ನೀತಿ ನಿಯಮ ಬಿಜೆಪಿ ಕಾಲ ಕೆಳಗಿನ ಕಸದಂತೆ ನೋಡೋದೇಕೆ? ಎಂದು ಪ್ರಶ್ನಿಸಿದ್ದಾರೆ.

ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ ಆರ್​ಎಸ್​ಎಸ್​ ಹೇಳಿಕೊಟ್ಟ ಪಾಠದಂತೆ ಬಿಜೆಪಿಯೂ ತಿರಂಗಾ ಕಂಡರೆ ಉರಿದು ಬೀಳುತ್ತಿದೆ. ರಾಷ್ಟ್ರಧ್ವಜಕ್ಕೆ ಕೈ ಮುಗಿಯುವ ಬದಲು ಬಿಜೆಪಿ ಕೆಂಡ ಕಾರುತ್ತಿದೆ. ತಮಗೆ ತಾವೇ ದೇಶದ್ರೋಹಿಗಳೆಂದು ಸರ್ಟಿಫಿಕೇಟ್ ಕೊಟ್ಟುಕೊಂಡಿದ್ದಾರೆ. ಬಿಜೆಪಿಯವರಿಗೆ ದೇಶದ ಧ್ವಜ, ಸಂವಿಧಾನ, ದೇಶದ ಐಕ್ಯತೆ ಇಷ್ಟವಿಲ್ಲವೆಂದರೆ ನಿಮ್ಮ ಪ್ರೀತಿಪಾತ್ರವಾದ ಪಾಕಿಸ್ತಾನಕ್ಕೆ ಹೋಗಿ. ಬಿಜೆಪಿ ತಂತ್ರ, ಕುತಂತ್ರಗಳಿಗೆ ನಾವು ಬಗ್ಗುವುದಿಲ್ಲ, ಬಗ್ಗು ಬಡಿಯುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರುವು: ಗ್ರಾಮಸ್ಥರು-ಸರ್ಕಾರದ ನಡುವೆ ಜಟಾಪಟಿ ಏಕೆ? ಇಲ್ಲಿದೆ ಕಾರಣ

ನಿಮ್ಮ ಗಮನಕ್ಕೆ ಕೆಲವು ವಿಚಾರಗಳು

29/12/2023 ರಂದು ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಮಾತ್ರ ಹಾರಿಸುತ್ತೇವೆ ಎಂದು ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ಧ್ವಜ ಸ್ಥಂಭಕ್ಕೆ ಅನುಮತಿ ಕೇಳಿದ್ದಾರೆ. 17/01/2024 ರಂದು ಧ್ವಜ ಸ್ಥಂಭದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಬಿಟ್ಟು ಇನ್ನಿತರ ಯಾವುದೇ ರಾಜಕೀಯ, ಧಾರ್ಮಿಕ ಧ್ವಜವವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟು ಸಹಿ ಮಾಡಿದ್ದಾರೆ. 18/01/2024 ರಂದು ಕೆರೆಗೋಡು ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜಾರೋಹಣಕ್ಕೆ ಮಾತ್ರ ಶರತ್ತುಗಳೊಂದಿಗೆ ಅನುಮತಿ ಪತ್ರ ನೀಡಿದ್ದಾರೆ.

ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾಡುವ ಮಾರ್ಪಾಡುಗಳಿಗೆ ಬದ್ಧರಾಗಿರಬೇಕೆಂದು ತಿಳಿಸಲಾಗಿದೆ. ಯಾವುದೇ ಗಲಭೆಗಳಿಗೆ ಅವಕಾಶ ಮಾಡಿಕೊಡದಂತೆ ಷರತ್ತು ವಿಧಿಸಲಾಗಿದೆ. ಧ್ವಜಾರೋಹಣ ಮಾಡುವ 6-7 ದಿನ ಮುಂಚಿತವಾಗಿ ಗ್ರಾಮ ಪಂಚಾಯ್ತಿ ಹಾಗೂ ಪೊಲೀಸರಿಗೆ ತಿಳಿಸುವಂತೆ ಸೂಚಿಸಲಾಗಿದೆ.

ಬಿಜೆಪಿ ಉತ್ತರಿಸಲೇಬೇಕಾದ ಪ್ರಶ್ನೆಗಳು

  1. ರಾಷ್ಟ್ರ ಧ್ವಜದ ಬದಲು ಏಕಾಏಕಿ ಭಾಗವಾಧ್ವಜ ಹಾರಿಸುವ ಷಡ್ಯಂತ್ರ ರೂಪಿಸಿದ್ದು ಯಾರು?
  2. ಅನುಮತಿ ಪತ್ರದ ಷರತ್ತುಗಳನ್ನು ಉಲ್ಲಂಘಿಸಲು ಪ್ರೇರೇಪಿಸಿದ್ದು ಯಾರು?
  3. ಬಿಜೆಪಿ ಅದೆಷ್ಟು ದಿನಗಳಿಂದ ಶಾಂತಿ ಕೆಡಿಸುವ ಸಂಚು ರೂಪಿಸಿತ್ತು?
  4. ಕಾನೂನು, ನೀತಿ ನಿಯಮಗಳೇನು ಬಿಜೆಪಿ ಕಾಲ ಕೆಳಗಿನ ಕಸದಂತೆ ನೋಡುವುದೇಕೆ?

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ