ಮಂಡ್ಯದಲ್ಲೊಂದು ಮನಕಲಕುವ ಘಟನೆ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮಗು ಸಾವು

ಮಂಡ್ಯದಲ್ಲಿ ಸಂಚಾರಿ ಪೊಲೀಸರ ನಿರ್ಲಕ್ಷ್ಯದಿಂದ ಮೂರೂವರೆ ವರ್ಷದ ಮಗು ಸಾವನ್ನಪ್ಪಿದೆ. ನಾಯಿ ಕಚ್ಚಿದ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಹೆಲ್ಮೆಟ್ ಪರಿಶೀಲನೆಗಾಗಿ ಪೊಲೀಸರು ಬೈಕ್ ನಿಲ್ಲಿಸಿದ್ದರಿಂದ ಅಪಘಾತ ಸಂಭವಿಸಿದೆ. ಮಗುವಿನ ತಲೆಗೆ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಘಟನೆಗೆ ಸ್ಥಳೀಯರಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಮಂಡ್ಯದಲ್ಲೊಂದು ಮನಕಲಕುವ ಘಟನೆ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮಗು ಸಾವು
ಮೃತ ಮಗು ಹೃತೀಕ್ಷಾ
Edited By:

Updated on: May 26, 2025 | 2:43 PM

ಮಂಡ್ಯ, ಮೇ 26: ನಗರದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು (child) ಬಲಿಯಾಗಿರುವಂತಹ (death) ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್, ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಸ್ಥಳದಲ್ಲೇ ಮೃತಪಟ್ಟ ಮಗು. ಮಂಡ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಡೆದದ್ದೇನು?

ಮಗು ಹೃತೀಕ್ಷಾಗೆ ನಾಯಿ ಕಚ್ಚಿದ್ದರಿಂದ ತಂದೆ, ತಾಯಿ ಬೈಕ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಹೆಲ್ಮೆಟ್ ತಪಾಸಣೆಗಾಗಿ ಸ್ವರ್ಣಸಂದ್ರ ಬಳಿ ಸಂಚಾರಿ ಠಾಣೆ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಹೀಗಾಗಿ ಮಗು ಸೇರಿದಂತೆ ದಂಪತಿ ಆಯಾ ತಪ್ಪಿ ಬಿದಿದ್ದಾರೆ. ಈ ವೇಳೆ ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದೆ.

ಇದನ್ನೂ ಓದಿ: ಮೈಸೂರು ನಗರದಲ್ಲಿ ನಸುಕಿನಿಂದಲೇ ಜಿಟಿಜಿಟಿ ಮಳೆ, ಸಾಮಾನ್ಯ ಜನಜೀವನ ಅಸ್ತವ್ಯಸ್ತ

ಮಗುವನ್ನು ಮಡಿನಲ್ಲಿ ಇಟ್ಟುಕೊಂಡು ರಸ್ತೆಯಲ್ಲೇ ಪೋಷಕರು ಗೋಳಾಡಿದ್ದಾರೆ. ಘಟನೆ ಕಣ್ಣಾರೆ ಕಂಡು ಸಾರ್ವಜನಿಕರು ದಿಗ್ಭ್ರಮೆಗೊಂಡರೆ, ಮಂಡ್ಯ ಸಂಚಾರಿ ಪೊಲೀಸರಿಗೆ ಹೆತ್ತಕರುಳು ಹಿಡಿಶಾಪ ಹಾಕಿದೆ. ಸಂಚಾರಿ ಪೊಲೀಸರ ವಿರುದ್ಧ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರದ್ದು ಅಮಾನೀಯ ವರ್ತನೆ, ಕ್ಷಮಿಸಲು ಸಾಧ್ಯವಿಲ್ಲ ಎಂದ ಶಾಸಕ ರವಿಕುಮಾರ್ ಗಣಿಗ

ಇನ್ನು ಘಟನೆ ಬಗ್ಗೆ ಟಿವಿ9ಗೆ ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಹೇಳಿಕೆ ನೀಡಿದ್ದು, ‘ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತಾಡಿದ್ದೇನೆ. ಪೊಲೀಸರದ್ದು ಅಮಾನೀಯ ವರ್ತನೆ, ಕ್ಷಮಿಸಲು ಸಾಧ್ಯವಿಲ್ಲ. ತಕ್ಷಣ ಆ ಪೊಲೀಸ್​ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡೊನಾಲ್ಡ್ ಟ್ರಂಪ್​​ನ್ನೂ ಬಿಡದ ಸೈಬರ್ ವಂಚಕರು: ರಾಜ್ಯದ ನೂರಾರು ಜನರಿಂದ ಕೋಟ್ಯಂತರ ರೂ ವಂಚನೆ

ಮೃತ ಬಾಲಕಿಯ ಕುಟುಂಬದ ಬಳಿ ನಾನು ಕ್ಷಮೆ ಕೇಳುತ್ತೇನೆ. ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿ ಬಾಲಕಿಯ ಕುಟುಂಬಕ್ಕೆ ಪರಿಹಾರ ನೀಡಲಾಗುವುದು. ವೈಯಕ್ತಿಕವಾಗಿ ನಾನು ಕುಟುಂಬಕ್ಕೆ ನೆರವು ನೀಡುತ್ತೇನೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:53 pm, Mon, 26 May 25