AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆಯಾಗಿದ್ದಾಳೆ ಎನ್ನಲಾದ ಮಹಿಳೆ ದಿಢೀರ್ ಪ್ರತ್ಯಕ್ಷ; ಮಾಡದ ತಪ್ಪಿಗೆ 2.5 ವರ್ಷ ಜೈಲಿನಲ್ಲಿದ್ದ ವ್ಯಕ್ತಿ!

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಂಜು ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪತ್ತೆಯಾಗಿದ್ದಾರೆ. ಆಕೆಯ ಕೊಲೆ ಆರೋಪದ ಮೇಲೆ ರಾಜೇಶ್ ಎಂಬಾತ ಎರಡೂವರೆ ವರ್ಷ ಜೈಲುವಾಸ ಅನುಭವಿಸಿದ್ದ. ಇದೀಗ ಮಂಜು ಪ್ರತ್ಯಕ್ಷವಾಗಿದ್ದು, ಇಷ್ಟವಿಲ್ಲದ ಮದುವೆಯಿಂದ ಮನೆಬಿಟ್ಟು ಹೋಗಿದ್ದಾಗಿ ಹೇಳಿಕೆ ನೀಡಿದ್ದಾರೆ. ಪೊಲೀಸರ ತನಿಖೆ ಮತ್ತು ಬಲವಂತದ ತಪ್ಪೊಪ್ಪಿಗೆ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಕೊಲೆಯಾಗಿದ್ದಾಳೆ ಎನ್ನಲಾದ ಮಹಿಳೆ ದಿಢೀರ್ ಪ್ರತ್ಯಕ್ಷ; ಮಾಡದ ತಪ್ಪಿಗೆ 2.5 ವರ್ಷ ಜೈಲಿನಲ್ಲಿದ್ದ ವ್ಯಕ್ತಿ!
ರಾಜೇಶ್
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 12, 2026 | 2:43 PM

Share

ಮುಖ್ಯಾಂಶಗಳು

  • ಕೊಲೆಯಾಗಿದ್ದಾಳೆ ಎನ್ನಲಾದ ಮಂಜು ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷ.
  • ಕೊಲೆ ಆರೋಪದಲ್ಲಿ ರಾಜೇಶ್ ಎರಡೂವರೆ ವರ್ಷ ಜೈಲುವಾಸ ಅನುಭವಿಸಿ ಜಾಮೀನಿನಲ್ಲಿ ಬಿಡುಗಡೆ.
  • ಇಷ್ಟವಿಲ್ಲದ ಮದುವೆಯಿಂದ ಮನೆಬಿಟ್ಟಿದ್ದಾಗಿ ಮಂಜು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

ಮಂಡ್ಯ, ನವೆಂಬರ್ 11: ರಾಜ್ಯದಲ್ಲಿ ಪೊಲೀಸ್ ತನಿಖೆಯ ಲೋಪಕ್ಕೆ ನಿರಪರಾಧಿಯೊಬ್ಬರು ಎರಡೂವರೆ ವರ್ಷ ಜೈಲು ಶಿಕ್ಷೆ ಅನುಭವಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಹಿಳೆಯೇ ಇದೀಗ ದಿಢೀರ್ ಪ್ರತ್ಯಕ್ಷವಾಗಿದ್ದು, ಆಕೆಯ ಕೊಲೆ ಆರೋಪದ ಮೇಲೆ ಜೈಲು ಸೇರಿದ್ದ ವ್ಯಕ್ತಿ ನಿರಪರಾಧಿ ಎಂಬುದು ಬಹಿರಂಗವಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಈ ಘಟನೆ ಪೊಲೀಸ್ ತನಿಖೆಯ ಹೊಣೆಗಾರಿಕೆ ಮತ್ತು ಅಮಾಯಕರಿಗೆ ನ್ಯಾಯ ಸಿಗುವ ವಿಚಾರವಾಗಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ನಡೆದಿದ್ದೇನು?

2019ರಲ್ಲಿ ಪಾಂಡವಪುರ ಪಟ್ಟಣದಿಂದ ಮಂಜು ಎಂಬ ಮಹಿಳೆ ನಾಪತ್ತೆಯಾಗಿದ್ದರು. ಈ ಸಂಬಂಧ ಆಕೆಯ ತಂದೆ ನಾಗರಾಜು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ, ಮಂಜು ನಾಪತ್ತೆಯಾಗುವ ಮುನ್ನ ಪಾಂಡವಪುರ ಬಸ್ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಸಿಕ್ಕಿದ್ದ ರಾಜೇಶ್ ಎಂಬಾತನ ಮೊಬೈಲ್‌ನಿಂದ ಕೊನೆಯ ಕರೆ ಮಾಡಿರುವುದು ತಿಳಿದುಬಂದಿತ್ತು. ಇದೇ ಸುಳಿವು ಆಧರಿಸಿ ಸುಮಾರು ಎರಡು ವರ್ಷಗಳ ಬಳಿಕ ಪಾಂಡವಪುರದ ರಾಗಿಮುದ್ದನಹಳ್ಳಿ ನಿವಾಸಿ ರಾಜೇಶ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿತ್ತು.

ಬಲವಂತವಾಗಿ ತಪ್ಪೊಪ್ಪಿಗೆ ಹೇಳಿಕೆ ಪಡೆದ ಆರೋಪ

ಆದರೆ ಪ್ರಕರಣದ ತನಿಖೆ ವೇಳೆ ಪೊಲೀಸರು ರಾಜೇಶ್‌ಗೆ ಚಿತ್ರಹಿಂಸೆ ನೀಡಿ, ಬಲವಂತವಾಗಿ ತಪ್ಪೊಪ್ಪಿಗೆ ಹೇಳಿಕೆ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬೂಟಿನಿಂದ ಒದ್ದು, ವಿದ್ಯುತ್ ಶಾಕ್ ನೀಡಿ, ಮನೆಯವರನ್ನೂ ಬಂಧಿಸುವುದಾಗಿ ಬೆದರಿಕೆ ಹಾಕಿದ್ದರಿಂದ ಭಯಗೊಂಡ ರಾಜೇಶ್ ತಾನು ಮಾಡದ ತಪ್ಪನ್ನು ಒಪ್ಪಿಕೊಂಡಿದ್ದ ಎನ್ನಲಾಗಿದೆ. ಅಂದಿನ ಪಾಂಡವಪುರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಭಾಕರ್ ಅವರ ತನಿಖಾ ವೈಖರಿಯ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ.

ಈ ಪ್ರಕರಣದಲ್ಲಿ 2021ರಿಂದ ಸುಮಾರು ಎರಡೂವರೆ ವರ್ಷ ಜೈಲಿನಲ್ಲಿದ್ದ ರಾಜೇಶ್, 2024ರ ಜನವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ನಾಗಮಂಗಲ ಪಟ್ಟಣದಲ್ಲಿ ಮಂಜು ಜೀವಂತವಾಗಿರುವುದು ಪತ್ತೆಯಾಗಿದೆ. ರಾಜೇಶ್ ಪರ ವಕೀಲ ನಟೇಶ್ ಅವರಿಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಮಹಿಳೆಯನ್ನು ಪತ್ತೆಹಚ್ಚಲಾಗಿದೆ.

ವರ್ಷಗಳ ನಂತರ ಸಿಕ್ಕ ಮಹಿಳೆ ಹೇಳಿದ್ದೇನು?

ನಂತರ ಆಕೆಯನ್ನು ಬಿಂಡಿಗನವಿಲೆ ಪೊಲೀಸರ ವಶಕ್ಕೆ ಒಪ್ಪಿಸಿ ಹೇಳಿಕೆ ದಾಖಲಿಸಲಾಗಿದೆ. ಇಷ್ಟವಿಲ್ಲದ ಮದುವೆ ಮಾಡಿಸಿದ್ದರಿಂದ ಮನೆ ಬಿಟ್ಟು ಹೋಗಿದ್ದೆ. ಇದೀಗ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿ ಜೀವನ ನಡೆಸುತ್ತಿದ್ದೇನೆ. ರಾಜೇಶ್ ಎಂಬುವವರ ಪರಿಚಯವೇ ನನಗಿಲ್ಲ ಎಂದು ಮಂಜು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಮಹಿಳೆ ಜೀವಂತವಾಗಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ, ನಿರಪರಾಧಿಯೊಬ್ಬನನ್ನು ಕೊಲೆ ಆರೋಪದಲ್ಲಿ ಜೈಲಿಗೆ ಕಳುಹಿಸಿದ ಪ್ರಕರಣದ ತನಿಖೆ ಇದೀಗ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಪೊಲೀಸರ ತನಿಖಾ ಲೋಪ, ಬಲವಂತದ ತಪ್ಪೊಪ್ಪಿಗೆ ಆರೋಪ ಹಾಗೂ ರಾಜೇಶ್ ಅನುಭವಿಸಿದ ಜೈಲುವಾಸಕ್ಕೆ ಯಾರು ಹೊಣೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ