ವಿಚಾರಣಾಧೀನ ಕೈದಿಗೆ ಆಸ್ಪತ್ರೆಯಲ್ಲಿ ರಾಜ್ಯಾತಿಥ್ಯ ಪ್ರಕರಣ; ಪೊಲೀಸ್ ಪೇದೆ ಸಸ್ಪೆಂಡ್

ಮಂಡ್ಯದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಬೆನ್ನುನೋವಿನ ನೆಪದಲ್ಲಿ ಆಸ್ಪತ್ರೆಯ ವಿಶೇಷ ಕೊಠಡಿಯಲ್ಲಿ ತನ್ನ ಗೆಳತಿಯೊಂದಿಗೆ ಇದ್ದ ಪ್ರಕರಣ ಬೆಳಕಿಗೆ ಬಂದಿದೆ. ನ್ಯಾಯಾಧೀಶರ ದಿಢೀರ್ ಭೇಟಿಯಿಂದ ಈ ಕರ್ತವ್ಯ ಲೋಪ ಬಯಲಾಗಿದೆ. ಘಟನೆ ಸಂಬಂಧ ಓರ್ವ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದ್ದು, ಡಿಜಿಪಿ ಅಲೋಕ್ ಕುಮಾರ್ ಅವರು ತನಿಖೆಗೆ ಆದೇಶಿಸಿದ್ದಾರೆ. ಇದು ಕಾರಾಗೃಹ ವ್ಯವಸ್ಥೆಯಲ್ಲಿನ ಲೋಪಗಳನ್ನು ಎತ್ತಿ ತೋರಿಸಿದೆ.

ವಿಚಾರಣಾಧೀನ ಕೈದಿಗೆ ಆಸ್ಪತ್ರೆಯಲ್ಲಿ ರಾಜ್ಯಾತಿಥ್ಯ ಪ್ರಕರಣ; ಪೊಲೀಸ್ ಪೇದೆ ಸಸ್ಪೆಂಡ್
ಮಂಡ್ಯ ಜೈಲು ಪ್ರಕರಣ
Edited By:

Updated on: Aug 26, 2026 | 12:53 PM

ಮಂಡ್ಯ, ಆ.26: ವಿಚಾರಣಾಧೀನ ಕೈದಿಯೊಬ್ಬ ಬೆನ್ನು ನೋವಿನ ನೆಪ ಹೇಳಿ ಆಸ್ಪತ್ರೆಯ ವಿಶೇಷ ಕೊಠಡಿಯಲ್ಲಿ ಗೆಳತಿಯೊಂದಿಗೆ ರಾಜ್ಯಾತಿಥ್ಯ ಪಡೆಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದೆ. ಜಿಲ್ಲಾ ಸಶಸ್ತ್ರ ಮೀಸಲು (DAR) ಪಡೆಯ ಪೇದೆ ಚಂದ್ರು ಎಂಬುವವರನ್ನು ಸಸ್ಪೆಂಡ್ ಮಾಡಿ ಮಂಡ್ಯ ಎಸ್‌ಪಿ ಡಾ. ಶೋಭಾರಾಣಿ ಅವರು ಆದೇಶ ಹೊರಡಿಸಿದ್ದಾರೆ.

ಆರೋಪಿ ಮಹಮದ್ ಹುಸೇನ್ ಎಂಬಾತ ಬೆನ್ನು ನೋವಿನ ನೆಪ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದನು. ಬಳಿಕ ಆಸ್ಪತ್ರೆಯ ವಿಶೇಷ ಕೊಠಡಿಯಲ್ಲಿ ತನ್ನ ಗೆಳತಿಯೊಂದಿಗೆ ಉಳಿದುಕೊಂಡು ರಾಜ್ಯಾತಿಥ್ಯ ಅನುಭವಿಸುತ್ತಿದ್ದನು.

ಜಿಲ್ಲಾ ಸತ್ರ ನ್ಯಾಯಾಧೀಶರಾದ ಸಿ. ಚಂದ್ರಶೇಖರ್ ಅವರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಇದನ್ನು ಕಂಡು ಆಕ್ರೋಶಗೊಂಡ ನ್ಯಾಯಾಧೀಶರು ಸ್ಥಳದಲ್ಲೇ ಇದ್ದ ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದರು.

ಇದನ್ನೂ ಓದಿ: ದೆಹಲಿಯಲ್ಲಿ 2,300 ದಾಟಿದ ಹಂದಿ ಜ್ವರ ಪ್ರಕರಣಗಳು: ಭಯಪಡಬೇಡಿ, ಇದು ಹೊಸ ತಳಿಯಲ್ಲ ಎಂದ ಐಸಿಎಂಆರ್

ನ್ಯಾಯಾಧೀಶರ ಸೂಚನೆಯ ಬೆನ್ನಲ್ಲೇ ಸಕ್ರಿಯರಾದ ಕಾರಾಗೃಹ ಹಾಗೂ ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ಅವರು ತಕ್ಷಣ ಮಂಡ್ಯ ಜೈಲಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕರ್ತವ್ಯ ಲೋಪದ ಬಗ್ಗೆ ಸ್ವತಃ ಪರಿಶೀಲಿಸಿದ ಡಿಜಿಪಿ, ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಹೊರತರಲು ಡಿಐಜಿ ಕಾರಾಗೃಹ (ದಕ್ಷಿಣ ವಲಯ) ದಿವ್ಯಾಶ್ರೀ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Loading...
Unable to load recommendations.
Follow Us