ಕೆಆರ್‌ಎಸ್ ಆಣೆಕಟ್ಟೆಗೆ ಬಾಗಿನ ಅರ್ಪಿಸಲು ಮಂಡ್ಯ ಜೆಡಿಎಸ್ ಶಾಸಕರಿಂದ ಸಿಎಂ ಬೊಮ್ಮಾಯಿಗೆ ಆಹ್ವಾನ
ಮುಖ್ಯಮಂತ್ರಿ ಹುದ್ದೆ ಏರಿರುವ ಕಾರಣ ಬಸವರಾಜ ಬೊಮ್ಮಾತಿಗೆ ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕರು ಅಭಿನಂದನೆಯನ್ನೂ ಅರ್ಪಿಸಿದ್ದಾರೆ.
ಬೆಂಗಳೂರು: ಕೆಆರ್‌ಎಸ್ ಡ್ಯಾಂಗೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರು ಆಹ್ವಾನಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಪರಿಶೀಲಿಸಲೂ ಜೆಡಿಎಸ್ ಶಾಸಕರು ಮನವಿ ಮಾಡಿದ್ದಾರೆ. ಶಾಸಕ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಶ್ರೀಕಂಠೇಗೌಡ, ಶ್ರೀನಿವಾಸ್ ಸೇರಿದಂತೆ ಹಲವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯಮಂತ್ರಿ ಹುದ್ದೆ ಏರಿರುವ ಕಾರಣ ಬಸವರಾಜ ಬೊಮ್ಮಾತಿಗೆ ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕರು ಅಭಿನಂದನೆಯನ್ನೂ ಅರ್ಪಿಸಿದ್ದಾರೆ.
ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಇಲಾಖೆ ವ್ಯವಸ್ಥೆ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಅಲ್ಲದೆ ಪೊಲೀಸ್ (Police) ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಿದ್ದೇನೆ. ಹೊಸ ಸರ್ಕಾರದಲ್ಲಿ ಹೇಗೆ ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. ದಕ್ಷತೆ, ಪ್ರಾಮಾಣಿಕತೆ ಇನ್ನೂ ಹೆಚ್ಚಾಗಬೇಕೆಂದು ಸೂಚಿಸಿದ್ದೇವೆ. ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿಕೆ ನೀಡಿದ್ದಾರೆ.
ಪೊಲೀಸ್ ಇಲಾಖೆ ಜನ ಸ್ನೇಹಿಯಾಗಿ ಕೆಲಸ ಮಾಡಬೇಕು. ಅಪರಾಧ ನಡೆಯುವುದನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು. ಅಲ್ಲದೇ ಈಗ ಕೊವಿಡ್ ಹೆಚ್ಚಾಗುತ್ತಿರುವ ಸಮಯ. ಹೀಗಾಗಿ ಕೊವಿಡ್ ನಿರ್ವಹಣೆ ಸಂದರ್ಭದಲ್ಲಿನ ಸವಾಲಿನ ಬಗ್ಗೆ ಹೇಳಿದ್ದೇನೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪೊಲೀಸ್ ಕಲ್ಯಾಣ ಕಾರ್ಯಕ್ರಮ ಮಾಡಬೇಕು. ಇದರ ಜತೆಗೆ ಮೂಲ ಸೌಕರ್ಯ ಅಭಿವೃದ್ಧಿಗೆ ಯೋಜನೆ ಏನೆನಿದೆ ಅದನ್ನು ಮುಂದುವರಿಸುವ ಭರವಸೆಯನ್ನು ಕೂಡ ನೀಡಿದ್ದೇನೆ. ಅಲ್ಲದೆ ಗೃಹ ಇಲಾಖೆ ಹೇಗಿರಬೇಕು ಎಂಬ ಬಗ್ಗೆ ಈಗಾಗಲೇ ಗೃಹ ಸಚಿವರು ಕೂಡ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ಹಾಕದಂತೆ ಸಿಎಂ ಸೂಚನೆ ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲು, ತುರಾಯಿ ಬೇಡ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಅಲ್ಲದೇ ಈ ಕುರಿತು ಅಧಿಕೃತ ಅದೇಶ ಹೊರಡಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ:
ಮೈಸೂರು ದಸರಾ ಆಚರಣೆ, ಕೊವಿಡ್ 3ನೇ ಅಲೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯ ವಿವರ ಇಲ್ಲಿದೆ
ಚಿತ್ರೀಕರಣ ವೇಳೆ ನಿಯಮಗಳನ್ನು ಪಾಲಿಸುತ್ತಿಲ್ಲ, ಕಠಿಣ ನಿಯಮಗಳನ್ನು ಜಾರಿ ಮಾಡಿ ಶೀಘ್ರದಲ್ಲೇ ಆದೇಶ; ಸಿಎಂ ಬಸವರಾಜ ಬೊಮ್ಮಾಯಿ (Mandya JDS MLAs invites CM Basavaraj Bommai to visit KRS dam)
Published On - 6:52 pm, Tue, 10 August 21