ಮಂಡ್ಯ: ಛತ್ತೀಸ್ಗಢದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಮಂಡ್ಯ (Mandya) ಮೂಲದ ಯೋಧ ಜನಾರ್ದನ್ ಗೌಡ ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಮೃತಪಟ್ಟಿದ್ದಾರೆ. ಇವರು ಮೂಲತಃ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದವರಾಗಿದ್ದಾರೆ. ಛತ್ತೀಸ್ಗಢದಲ್ಲಿ (Chhattisgarh) ಭೂಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜನಾರ್ದನ್ ಕಳೆದ 1 ವಾರದಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಛತ್ತೀಸ್ಗಢದ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಯೋಧನ ಪಾರ್ಥಿವಶರೀರ ಶನಿವಾರ ಮಧ್ಯಾಹ್ನ ಸ್ವಗ್ರಾಮಕ್ಕೆ ತಲುಪಲಿದೆ. ಸಂಜೆ ಕಿಕ್ಕೇರಿ ಗ್ರಾಮದಲ್ಲಿ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಜನಾರ್ದನ ಗೌಡ ಅವರು 11 ವರ್ಷಗಳಿಂದ ಭೂಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 5 ವರ್ಷಗಳ ಹಿಂದೆ ಮದುವೆಯಾಗಿದ್ದ ಯೋಧ ಜನಾರ್ದನಗೌಡಗೆ 4 ವರ್ಷದ ಓರ್ವ ಪುತ್ರಿಯಿದ್ದಾಳೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ