AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ತೆರೆದ ಕೆಆರ್​ಎಸ್​ ಡ್ಯಾಂ ಗೇಟ್​: ಸಾವಿರಾರು ಕ್ಯೂಸೆಕ್​ ಕಾವೇರಿ ನದಿ ನೀರು ಪೋಲು

ಕಳೆದ ವರ್ಷ ಬೇಸಿಗೆಯಲ್ಲಿ ಬೆಂಗಳೂರು ಮತ್ತು ಹಳೇ ಮೈಸೂರು ಭಾಗದ ಜನರು ಕುಡಿಯುವ ನೀರು ಮತ್ತು ಗೃಹ ಬಳಕೆ ನೀರಿಗಾಗಿ ಸಾಕಷ್ಟು ಪರದಾಡುವಂತಾಗಿತ್ತು. ಇದಕ್ಕೆ ಕಾರಣ ಕೆಆರ್​ಎಸ್​ ಡ್ಯಾಂನಲ್ಲಿ ನೀರು ಸಂಗ್ರಹ ಭಾರಿ ಪ್ರಮಾಣದಲ್ಲಿ ಕುಸಿದಿತ್ತು. ಇದರಿಂದ ಕಾವೇರಿ ತೀರದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಕಹಿ ಘಟನೆಗಳನ್ನು ಮರೆಯುವ ಮುನ್ನವೇ ಕೆಆರ್​ಎಸ್​ ಡ್ಯಾಂನಲ್ಲಿ ಮತ್ತೊಂದು ಅಚಾತುರ್ಯ ನಡೆದಿದೆ. ಏನದು? ಇಲ್ಲಿದೆ ವಿವರ

ಏಕಾಏಕಿ ತೆರೆದ ಕೆಆರ್​ಎಸ್​ ಡ್ಯಾಂ ಗೇಟ್​: ಸಾವಿರಾರು ಕ್ಯೂಸೆಕ್​ ಕಾವೇರಿ ನದಿ ನೀರು ಪೋಲು
ಕೆಆರ್​ಎಸ್​ ಡ್ಯಾಂ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on:Mar 25, 2025 | 9:14 AM

Share

ಮಂಡ್ಯ, ಮಾರ್ಚ 25: ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೃಷ್ಣರಾಜ ಸಾಗರ (KRS) ಜಲಾಶಯದ +80 ಗೇಟ್ ಭಾನುವಾರ (ಮಾರ್ಚ್​ 23) ರಾತ್ರಿ ಏಕಾಏಕಿ‌ ತೆರೆದಿದ್ದು, ಸೋಮವಾರ (ಮಾ.24) ರಾತ್ರಿವರೆಗೂ ಗೇಟ್​ ತೆರದೇ ಇತ್ತು. 24 ಗಂಟೆಯಲ್ಲಿ ಬರೋಬ್ಬರಿ ಎರಡು ಸಾವಿರ ಕ್ಯೂಸೆಕ್ ನೀರು‌‌ ನದಿ ಪಾಲಾಗಿದೆ. ಸೋಮವರಾರ ರಾತ್ರಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಗೇಟ್ ಬಂದ್ ಮಾಡಿದ್ದಾರೆ. ಈ ವೇಳೆ, ಹೆಚ್ಚಿನ ಪ್ರಮಾಣದ ‌ನೀರು ಇದ್ದಿದ್ದರಿಂದ ಗೇಟ್ ಮುಚ್ಚಲು‌ ಅಧಿಕಾರಿಗಳು ಹರಸಾಹಸ ಪಟ್ಟರು.

ಗೇಟ್​ ತೆರೆಯಲು ಕಾರಣವೇನು?

ಜಲಾಶಯದ ಗೇಟ್ ಏಕಾಏಕಿ ತೆರೆಯುವುದು ವಿರಾಳಾತಿ ವಿರಳ. ಆದರೆ, ಇಲ್ಲಿ ಕೆಆರ್​ಎಸ್​ ಡ್ಯಾಂನ ಗೇಟ್​ ಏಕಾಏಕಿ ತೆರೆದಿದ್ದು, ಅನುಮಾನವನ್ನು ಹುಟ್ಟು ಹಾಕಿದೆ. ಎರಡು ಕಾರಣಗಳಿಂದ ಡ್ಯಾಂn ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಡ್ಯಾಂನ ಗೇಟ್​ನ ಮೋಟಾರ್​ ರಿವರ್ಸ್​ ಆಗಿದ್ದರಿಂದ ಗೇಟ್​ ತೆರೆದಿರಬಹುದು, ಅಥವಾ ನಮ್ಮದೇ ಸಿಬ್ಬಂದಿ ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಗೇಟ್​ ಯಾವ ಕಾರಣಕ್ಕೆ ತೆರೆದಿದೆ ಎಂಬುವುದು ತನಿಖೆ ಬಳಿಕವಷ್ಟೇ ತಿಳಿಯಲಿದೆ.

ತನಿಖೆಗೆ ಪೂರಕ ಸಾಕ್ಷ್ಯ ಕೊರತೆ?

ಡ್ಯಾಂನ ಗೇಟ್​ ಏಕಾಏಕಿ ತೆರೆದ ವಿಚಾರ ತಿಳಿದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸುತ್ತಿದ್ದು, ಪರಿಶೀಲನೆ ನಡೆಸಲಿದ್ದಾರೆ. ಗೇಟ್​ ಏಕಾಏಕಿ ಹೇಗೆ ತೆರೆಯಿತು ಅಂತ ತನಿಖೆ ನಡೆಸಲು ಪೂರಕವಾದ ಸಾಕ್ಷ್ಯಾಧಾರಗಳು ಅತ್ಯಗತ್ಯ. ಆದರೆ, ಡ್ಯಾಂನ ಸುತ್ತಮುತ್ತ ಯಾವುದೇ ಸಿಸಿ ಕ್ಯಾಮೆರಾಗಳು ಇಲ್ಲ. ಇದರಿಂದ ತನಿಖೆ ನಿಧಾನವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ
Image
ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು?
Image
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
Image
ಕೃಷ್ಣ ನದಿ ಮತ್ತು ಕಳಸಾಬಂಡೂರಿ ಯೋಜನೆಗಳನ್ನೂ ಚರ್ಚಿಸಲಾಗಿದೆ: ಶಿವಕುಮಾರ್
Image
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಇದನ್ನೂ ಓದಿ: ಮೇಕೆದಾಟು: ಕರ್ನಾಟಕದ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ತಮಿಳುನಾಡು

ತುಂಡಾಗಿತ್ತು ಕ್ರೆಸ್ಟರ್​ ಗೇಟ್​

ಇನ್ನು, ಕಳೆದ ವರ್ಷ ತುಂಗಭದ್ರಾ ಜಲಾಶಯದ ಕ್ರೆಸ್ಟರ್​ಗೇಟ್​ ತುಂಡಾಗಿ ಕೊಚ್ಚಿಕೊಂಡು ಹೋಗಿತ್ತು. ಇದರಿಂದ ಸಾವಿರಾರು ಕ್ಯೂಸೆಕ್​ ನೀರು ನದಿ ಪಾಲಾಗಿತ್ತು. ಗೇಟ್​ ತುಂಡಾಗುತ್ತಿದ್ದಂತೆ ಕಾರ್ಯಪ್ರವೃತ್ತವಾಗಿದ್ದ ಸರ್ಕಾರ ಮತ್ತು ಡ್ಯಾಂ ನಿರ್ವಹಣಾ ಅಧಿಕಾರಿಗಳು ಒಂದು ವಾರದಲ್ಲಿ ಹೊಸ ಸ್ಟಾಫ್​ ಗೇಟ್​ ಅಳವಡಿಸಿದ್ದರು. ಇದು ಸಹಜವಾಗಿ ಡ್ಯಾಂ ನಿರ್ವಹಣಾ ಅಧಿಕಾರಿಗಳ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆ ಬಳಿಕವಾದರೂ ರಾಜ್ಯದ ಪ್ರಮುಖ ಜಲಾಶಯಗಳ ತಪಾಸಣೆ ಸರ್ಕಾರ ನಡೆಸಬೇಕಿತ್ತು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:11 am, Tue, 25 March 25

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ