ಮಂಡ್ಯ: ಜಿಲ್ಲೆಯಲ್ಲಿ ಚಿರತೆ ದಾಳಿ (Leopard attack in Manya) ಪ್ರಕರಣ ಮತ್ತೆ ಮುಂದುವರಿದಿದೆ. ಚಿರತೆಯೊಂದು ಹಸುವಿನ ಮೇಲೆ ದಾಳಿ (Leopard Attacks On Cow) ನಡೆಸಿ ಕೊಂದು ಹಾಕಿದ ಘಟನೆ ಮಳವಳ್ಳಿ ತಾಲೂಕಿನ ಬ್ಲಫ್ ಬಳಿ ನಡೆದಿದ್ದು, ಪ್ರೀತಿಯಿಂದ ಸಾಕಿದ ಹಸುವನ್ನು ಕಳೆದುಕೊಂಡ ಮಾಲೀಕ ಕಣ್ಣೀರು ಸುರಿಸುತ್ತಿದ್ದಾರೆ. ತಾಲೂಕಿನಲ್ಲಿ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಸಹಜವಾಗಿ ಜನರಲ್ಲಿನ ಆತಂಕವನ್ನು ಹೆಚ್ಚಿಸಿದೆ. ಮಳವಳ್ಳಿ ತಾಲೂಕಿನ ಬ್ಲಫ್ ಬಳಿಯ ನಂಜಪ್ಪ ಎಂಬುವವರು ಸಾಕಿದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಗ್ರಾಮದಲ್ಲಿ ಕತ್ತಲಾದರೆ ಸಾಕು ಜನರು ಒಂಟಿಯಾಗಿ ಓಡಾಡಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಬಳಿ ಸಮರ್ಪಕ ಬೋನು ಇಲ್ಲದೆ ಇರುವ ಹಿನ್ನೆಲೆ ಚಿರತೆಗಳು ಸೆರೆಯಾಗದೆ ಅಲ್ಲೆಂದರಲ್ಲಿ ದಾಳಿ ನಡೆಸುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಚಿರತೆ ಪ್ರತ್ಯಕ್ಷಗೊಂಡ ಸ್ಥಳದಲ್ಲಿ ಬೋನ್ ಅಳವಡಿಸಿದರೆ ಅನಾಹುತಕ್ಕೆ ಕಡಿವಾಣ ಹಾಕ ಬಹುದೆಂದು ಗ್ರಾಮಸ್ಥರು ಹೇಳುತ್ತಿದ್ದಾರೆ.
ಇದನ್ನೂ ಓದಿ: Leopard: ಬೆಂಗಳೂರಿನಲ್ಲಿ ಮತ್ತೆ ಶುರುವಾದ ಚಿರತೆ ಕಾಟ: ಹಸುವಿನ ಮೇಲೆ ದಾಳಿ, ಆತಂಕದಲ್ಲಿ ಜನ
ಚಾಮರಾಜನಗರ: ಚಿರತೆ ದಾಳಿಗೆ ಕರು ಬಲಿಯಾದ ಘಟನೆ ತಾಲೂಕಿನ ಬಂಡೀಪುರ ಪ್ರಾದೇಶಿಕ ಅರಣ್ಯ ವ್ಯಾಪ್ತಿಯ ಕಿಲಗೆರೆ ಗ್ರಾಮದ ಬಳಿ ನಡೆದಿದೆ. ಗ್ರಾಮದ ಪ್ರಜ್ವಲ್ ಎಂಬವರಿಗೆ ಸೇರಿದ ಕರುವಿನ ಮೇಲೆ ಹುತ್ತೂರು ಕಿಲಗೆರೆ ಗೇಟ್ ಹಾಗೂ ಮಾದಲವಾಡಿ ಗ್ರಾಮದ ಮಾರ್ಗಮಧ್ಯೆ ಇರುವ ಜಮೀನಿನಲ್ಲಿ ತಡರಾತ್ರಿ ದಾಳಿ ನಡೆಸಿ ಕೊಂದು ಹಾಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:33 am, Sat, 31 December 22