AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ; ಖಾಸಗಿ ಆಸ್ಪತ್ರೆಗೆ ದಾಖಲು

ಮಂಡ್ಯದಲ್ಲಿ ಮತ್ತೆ ಚಿರತೆ ದಾಳಿ ಮುಂದುವರೆದಿದ್ದು, ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಬಳಿ ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.​

ಮಂಡ್ಯ: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ; ಖಾಸಗಿ ಆಸ್ಪತ್ರೆಗೆ ದಾಖಲು
ಚಿರತೆ ದಾಳಿಯಿಂದ ಗಾಯಗೊಂಡಿರುವ ಕಾರ್ಮಿಕ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 30, 2023 | 10:46 AM

Share

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಬಳಿ ಕಬ್ಬು ಕಟಾವು ಮಾಡುತ್ತಿದ್ದ ಭದ್ರಾವತಿ ಮೂಲದ ಜಯರಾಮ್​ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ಜಯರಾಮ್​ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಚಿರತೆ ದಾಳಿಯಿಂದ ರಾಯಸಮುದ್ರ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ರಾಮತುಂಗಾ ಗ್ರಾಮದಲ್ಲಿ ಬೋನ್​ಗೆ ಬಿದ್ದ 2 ವರ್ಷದ ಗಂಡು ಚಿರತೆ

ಮೈಸೂರು: ಹಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಇದೀಗ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ರಾಮತುಂಗಾ ಗ್ರಾಮದಲ್ಲಿ ಇಟ್ಟಿದ್ದ ಬೋನಿಗೆ ಬಿದ್ದಿದೆ. ರೈತ ನಾಗೇಶ್​ಗೆ ಸೇರಿದ 2 ಮೇಕೆಗಳನ್ನು ಈ ಚಿರತೆ ಕೊಂದು ತಿಂದಿತ್ತು. ಈ ಕಾರಣಕ್ಕೆ ಚಿರತೆ ದಾಳಿ ಮಾಡಿದ್ದ ಸ್ಥಳದಲ್ಲಿ ಅರಣ್ಯ ಸಿಬ್ಬಂದಿಯು ಬೋನ್ ಇರಿಸಿದ್ದು, ಇದೀಗ 2 ವರ್ಷದ ಗಂಡು ಚಿರತೆ ಬೋನ್​ಗೆ ಬಿದ್ದಿದೆ. ಸೆರೆ ಸಿಕ್ಕ ಗಂಡು ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಚಿಪ್ ಅಳವಡಿಕೆ ಮಾಡಲಾಗಿದೆ. ನಂತರ ದೇವಮಾಚಿ ಅರಣ್ಯಕ್ಕೆ ಚಿರತೆಯನ್ನ ಬಿಡಲಾಗಿದೆ.

ಬೆಂಗಳೂರಿನಲ್ಲಿ ನಿಯಂತ್ರಣ ತಪ್ಪಿ ಬೈಕ್​ನಿಂದ ಬಿದ್ದು ಸವಾರ ಸಾವು

ಬೆಂಗಳೂರು: ವಿಧಾನಸೌಧ ನೋಡಲು ತೆರಳುತ್ತಿದ್ದ ರಾಜೇಶ್​(23) ಹಾಗೂ ಪರಶುರಾಮ ಎಂಬಿಬ್ಬರು ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್​ ಬಳಿ ನಿಯಂತ್ರಣ ತಪ್ಪಿ ಬೈಕ್​ನಿಂದ ಬಿದ್ದಿದ್ದು, ರಾಜೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಪರಶುರಾಮ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ