AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನು ನನ್ನ ಸ್ನೇಹಿತನನ್ನೇ ಪ್ರೀತಿಸಬೇಕು, ಮದುವೆಯಾಗಬೇಕು” ಎಂದು ರೌಡಿ ಧಮ್ಕಿ; ಮನನೊಂದು ಜೀವ ಕಳೆದುಕೊಂಡ ಬಾಲಕಿ

ಮಂಡ್ಯದ ಚಂದಗಾಲು ಗ್ರಾಮದಲ್ಲಿ 17 ವರ್ಷದ ಸಿಂಚನಾ ಪಾಗಲ್ ಪ್ರೇಮಿ ಹಾಗೂ ರೌಡಿಶೀಟರ್ ಹೃತಿಕ್ ಗೌಡನ ನಿರಂತರ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರೀತಿಯ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಬಾಲಕಿ ಮತ್ತು ಪೋಷಕರ ಮೇಲೆ ಹಲ್ಲೆ ನಡೆದಿದೆ. ಕುಟುಂಬಸ್ಥರು ಆರೋಪಿಗಳಿಗೆ ಕಠಿಣ ಶಿಕ್ಷೆಗಾಗಿ ಆಗ್ರಹಿಸಿದ್ದು, ಶಿವಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ನೀನು ನನ್ನ ಸ್ನೇಹಿತನನ್ನೇ ಪ್ರೀತಿಸಬೇಕು, ಮದುವೆಯಾಗಬೇಕು ಎಂದು ರೌಡಿ ಧಮ್ಕಿ; ಮನನೊಂದು ಜೀವ ಕಳೆದುಕೊಂಡ ಬಾಲಕಿ
ಬಾಲಕಿಯನ್ನು ಸಿಂಚನ
ದಿಲೀಪ್​, ಚೌಡಹಳ್ಳಿ
| Edited By: |

Updated on:Nov 29, 2026 | 5:33 PM

Share

ಮಂಡ್ಯ, ನ.29: ಪಾಗಲ್ ಪ್ರೇಮಿಯೊಬ್ಬನ ಹುಚ್ಚಾಟ ಹಾಗೂ ಆತನಿಗೆ ಸಾಥ್ ನೀಡಿದ ರೌಡಿಶೀಟರ್‌ನ ದೌರ್ಜನ್ಯಕ್ಕೆ 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಮಂಡ್ಯ ತಾಲೂಕಿನ ಚಂದಗಾಲು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಸಿಂಚನ (17) ಎಂದು ಗುರುತಿಸಲಾಗಿದೆ.

ಮಗಳ ಸಾವಿಗೆ ರೌಡಿಶೀಟರ್ ಹೃತಿಕ್ ಗೌಡ ಅಲಿಯಾಸ್ ಚಿಂಟು ಹಾಗೂ ಆತನ ಸ್ನೇಹಿತರ ಕಿರುಕುಳವೇ ನೇರ ಕಾರಣ ಎಂದು ಮೃತಳ ತಾಯಿ ರಂಜಿತಾ ಮತ್ತು ತಂದೆ ನಿಂಗರಾಜು ಗಂಭೀರ ಆರೋಪ ಮಾಡಿದ್ದಾರೆ. ಪಕ್ಕದೂರಿನ ಯುವಕನಾಗಿದ್ದ ರೌಡಿಶೀಟರ್ ಹೃತಿಕ್ ಗೌಡ, ತನ್ನ ಸ್ನೇಹಿತನನ್ನು ಪ್ರೀತಿಸುವಂತೆ ಸಿಂಚನಾಗೆ ನಿರಂತರವಾಗಿ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ. ಅಷ್ಟೇ ಅಲ್ಲದೆ, “ನನ್ನ ದೋಸ್ತನ್ನೇ ಲವ್ ಮಾಡಬೇಕು, ಅವನನ್ನೇ ಮದುವೆಯಾಗಬೇಕು” ಎಂದು ಬೆದರಿಕೆ ಹಾಕುತ್ತಿದ್ದನು ಎಂದು ಆರೋಪಿಸಲಾಗಿದೆ. ಆದರೆ ಸಿಂಚನ ಮಾತ್ರ “ನಾನು ಚೆನ್ನಾಗಿ ಓದಬೇಕು” ಎಂದು ಪ್ರೀತಿಯ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಳು.

ಈ ವಿಚಾರವನ್ನು ಕೆಲವು ದಿನಗಳ ಹಿಂದೆಯೇ ಪೋಷಕರು ಯುವಕನ ಮನೆಯವರ ಗಮನಕ್ಕೂ ತಂದಿದ್ದರು. ಆದರೂ ಪುಂಡರ ಕಿರುಕುಳ ಮಾತ್ರ ನಿಂತಿರಲಿಲ್ಲ ಎಂದು ಕುಟುಂಬಸ್ಥರು ದೂರಿದ್ದಾರೆ. ಘಟನೆ ನಡೆದ ದಿನ ಎರಡು ಬೈಕ್‌ಗಳಲ್ಲಿ ನಾಲ್ವರು ಯುವಕರು ಸಿಂಚನ ಮನೆಗೆ ನುಗ್ಗಿ ಬಾಲಕಿ ಹಾಗೂ ಪೋಷಕರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮನೆಯೊಳಗಿಂದ ಜೋರಾಗಿ ಚೀರಾಟ ಕೇಳುತ್ತಿದ್ದಂತೆ ಸ್ಥಳೀಯರು ಸಹಾಯಕ್ಕೆ ಧಾವಿಸಿದ್ದು, ಅಷ್ಟರಲ್ಲಾಗಲೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಅವಮಾನ ಮತ್ತು ಭಯದಿಂದ ತೀವ್ರವಾಗಿ ಮನನೊಂದ ಸಿಂಚನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದರೆ 2 ಹಸು ನೀಡುತ್ತೇವೆ ಎಂಬ ಹೇಳಿಕೆ ಹಿಂದಿದೆ ಹೆಚ್‌ಡಿಕೆ ಮಾಸ್ಟರ್ ಪ್ಲಾನ್: ಮಹಿಳೆಯರ ಜೊತೆಗೆ ರೈತರಿಗೂ ಲಾಭ

ಕೈಯಲ್ಲಿ ಪುಸ್ತಕ ಹಿಡಿದು ಭವಿಷ್ಯದ ಕನಸು ಕಾಣಬೇಕಿದ್ದ ಮಗಳು ಇಂದು ಹೆಣವಾಗಿದ್ದಾಳೆ ಎಂದು ಪೋಷಕರು ಕಣ್ಣೀರಿಡುತ್ತಿದ್ದು, ಮಗಳ ಸಾವಿಗೆ ಕಾರಣರಾದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಸದ್ಯ ಮಂಡ್ಯದ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ರೌಡಿಶೀಟರ್ ಹೃತಿಕ್ ಗೌಡ ಹಾಗೂ ಆತನ ಸಹಚರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ನ

Published On - 5:33 pm, Sun, 29 November 26

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್
ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್
ರಾಗಿಯಲ್ಲಿ ಕಲ್ಲು, ಮಣ್ಣು ಮಿಶ್ರಣ ಮಾಡ್ತಿದ್ದ ಘಟಕದ ಮೇಲೆ ದಾಳಿ
ರಾಗಿಯಲ್ಲಿ ಕಲ್ಲು, ಮಣ್ಣು ಮಿಶ್ರಣ ಮಾಡ್ತಿದ್ದ ಘಟಕದ ಮೇಲೆ ದಾಳಿ
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ