ಸುಮಲತಾಗೆ ಬಿಜೆಪಿ ಹೈಕಮಾಂಡ್ ಬುಲಾವ್; ಕುತೂಹಲ ಕೆರಳಿಸಿದ ವರಿಷ್ಠರ ಕರೆ

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎನ್ನಲಾಗುತ್ತಿದೆ. ಹೆಚ್​ಡಿ ಕುಮಾರಸ್ವಾಮಿ ಅವರು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಮೇಲಿನ ಮುನಿಸು ಮರೆತು ಒಗ್ಗಟ್ಟಿನಿಂದ ಚುನಾವಣೆ ಎದುರಿಸುವ ಪರೋಕ್ಷ ಮಾತುಗಳನ್ನಾಡಲು ಇದೇ ಕಾರಣ ಎನ್ನಲಾಗುತ್ತಿದೆ. ಈ ನಡುವೆ, ಸುಮಲತಾ ಅವರಿಗೆ ಬಿಜೆಪಿ ಹೈಕಮಾಂಡ್ ಆಹ್ವಾನಿಸಿದ್ದು, ದೆಹಲಿಗೆ ತೆರಳಿದ್ದಾರೆ.

ಸುಮಲತಾಗೆ ಬಿಜೆಪಿ ಹೈಕಮಾಂಡ್ ಬುಲಾವ್; ಕುತೂಹಲ ಕೆರಳಿಸಿದ ವರಿಷ್ಠರ ಕರೆ
ಸುಮಲತಾಗೆ ಬಿಜೆಪಿ ಹೈಕಮಾಂಡ್ ಬುಲಾವ್; ದೆಹಲಿಗೆ ತೆರಳಿದ ಸುಮಲತಾ
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on: Mar 17, 2024 | 5:39 PM

ಬೆಂಗಳೂರು, ಮಾ.17: ಲೋಕಸಭಾ ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ (BJP) ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎನ್ನಲಾಗುತ್ತಿದೆ. ಈ ನಡುವೆ ಬಿಜೆಪಿ ಬೆಂಬಲಿತ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಆಹ್ವಾನಿಸಿದ್ದು, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ವಿಮಾನದ ಮೂಲಕ ರಾಜಧಾನಿಗೆ ತೆರಳಿದ್ದಾರೆ. ಸದ್ಯ, ಬಿಜೆಪಿ ವರಿಷ್ಠರ ಕರೆ ರಾಜ್ಯ ರಾಜಕಾರಣದಲ್ಲಿ ಅದರಲ್ಲಿ ಭಾರೀ ಕುತೂಹಲ ಕೆರಳಿಸಿದೆ.

ಪಕ್ಷೇತರವಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಬಿಜೆಪಿಯನ್ನು ಬೆಂಬಲಿಸಿರುವ ಸುಮಲತಾ ಅವರು ಈ ಬಾರಿ ಮಂಡ್ಯದ ಬಿಜೆಪಿ ಟಿಕೆಟ್​ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ತನಗೆ ಟಿಕೆಟ್ ಸಿಗುವ ವಿಶ್ವಾಸ ಇದೆ ಎಂದು ಹಲವು ಬಾರಿ ಹೇಳಿದ್ದಾರೆ. ಆದರೆ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ.

ಅಲ್ಲದೆ, ಮಂಡ್ಯದಿಂದ ಪುಟ್ಟರಾಜು ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಮಾತುಕತೆ ನಡೆಸಲಾಗುತ್ತಿದೆ. ಪುಟ್ಟರಾಜು ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಅಂತಿಮವಾಗಿದೆ. ಅದಾಗ್ಯೂ, ನಿಖಿಲ್ ಅಥವಾ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ನಾಯಕರು, ಮುಖಂಡರು ಒತ್ತಾಯಿಸುತ್ತಿದ್ದಾರೆ. ಕೊನೇ ಕ್ಷಣದಲ್ಲಿ ಪುಟ್ಟರಾಜು ಬದಲು ನಿಖಿಲ್ ಹೆಸರು ಘೋಷಣೆಯಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಕುಮಾರಸ್ವಾಮಿ ಅವರೇ ಅಖಾಡಕ್ಕಿಳಿದರೂ ಅಚ್ಚರಿ ಪಡಬೇಕಿಲ್ಲ.

ಇದನ್ನೂ ಓದಿ: ಸುಮಲತಾ ವಿರುದ್ಧದ ರಾಜಕೀಯ ಕದನಕ್ಕೆ ವಿರಾಮ ಘೋಷಿಸಿದ ಕುಮಾರಸ್ವಾಮಿ, ಪಾಠ ಕಲಿತರೇ ಎಚ್​ಡಿಕೆ!

2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಡೆದ ರಾಜಕೀಯ ಇಡೀ ದೇಶವೇ ಮಂಡ್ಯದತ್ತ ತಿರುಗಿ ನೋಡುವಂತೆ ಮಾಡಿತ್ತು. ಸುಮಲತಾ ಮತ್ತು ನಿಖಿಲ್ ಕುಮಾರಸ್ವಾಮಿ ನಡುವೆ ರೋಚಕ ಚುನಾವಣಾ ಸ್ಪರ್ಧೆ ನಡೆದಿತ್ತು. ಕೊನೆಯಲ್ಲಿ ಸುಮಲತಾ ಅವರು ಗೆದ್ದು ಬೀಗಿದ್ದರು. ಇದು ದಳಪತಿ ಕುಟುಂಬಕ್ಕೆ ಸಹಿಸಲಾಗದ ನೋವಿನ ಸಂಗತಿಯಾಗಿತ್ತು. ಇಲ್ಲಿಂದ ಶುರುವಾಗಿದ್ದ ಸುಮಲತಾ ಮತ್ತು ಕುಮಾರಸ್ವಾಮಿ ನಡುವೆ ಜಿದ್ದಾಜಿದ್ದಿಗೆ ಸ್ವತಃ ಕುಮಾರಸ್ವಾಮಿ ಅವರೇ ಇತ್ತೀಚೆಗೆ ತಿಲಾಂಜಲಿ ಇಟ್ಟಿದ್ದಾರೆ.

ಹೌದು, ಲೋಕಸಭಾ ಚುನಾವಣೆ ಬರುತ್ತಿದ್ದಂತೆ ಮತ್ತು ಮಂಡ್ಯ ಕ್ಷೇತ್ರ ಬಹುತೇಕ ತಮ್ಮ ತೆಕ್ಕೆಗೆ ಬೀಳುತ್ತಿದ್ದಂತೆ ವೈರತ್ವ ಮರೆತು ಒಂದಾಗುವ ಮುನ್ಸೂಚನೆ ನೀಡಿದ ಕುಮಾರಸ್ವಾಮಿ, ಸುಮಲತಾ ಅವರೇನು ನನ್ನ ಶತ್ರುನಾ? ಭೇಟಿ ಮಾಡುವ ಅವಶ್ಯಕತೆ ಬಂದರೆ ಅವರನ್ನು ಸಹ ಭೇಟಿಯಾಗತ್ತೇನೆ ಎಂದು ಹೇಳಿದ್ದರು. ಸುಮಲತಾ ಅಂಬರೀಶ್ ನನ್ನ ಅಕ್ಕ ಇದ್ದಂತೆ, ನಮ್ಮಿಬ್ಬರ ನಡುವಿನ ಸಂಘರ್ಷವನ್ನು ಮುಂದುವರಿಸಿಕೊಂಡು ಹೋಗಲ್ಲ ಎಂದು ಘೋಷಿಸಿದ್ದರು.

ಈ ನಡುವೆ, ಬಿಜೆಪಿ ಹೈಕಮಾಂಡ್ ಕರೆ ಮಾಡಿದ ಹಿನ್ನೆಲೆ ಸುಮಲತಾ ಅಂಬರೀಶ್ ಅವರು ದೆಹಲಿಗೆ ತೆರಳಿದ್ದು, ಅಲ್ಲಿ ಬಿಜೆಪಿ ಚಾಣಕ್ಯ ಖ್ಯಾತಿಯ ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ ಹಾಗೂ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ಸದ್ಯ, ಈ ಪ್ರಯಾಣವು ಕುತೂಹಲ ಮೂಡಿಸಿದ್ದು, ಸುಮಲತಾ ಅವರಿಗೆ ಮಂಡ್ಯ ಟಿಕೆಟ್ ಸಿಗುತ್ತಾ? ಇಲ್ಲವಾ? ಅಥವಾ ಮಂಡ್ಯ ಕ್ಷೇತ್ರ ಜೆಡಿಎಸ್​ಗೆ ಬಿಟ್ಟುಕೊಟ್ಟು ಸುಮಲತಾಗೆ ಬಿಜೆಪಿಯಲ್ಲಿ ಸ್ಥಾನ ಕೊಡುತ್ತಾರಾ? ಅಥವಾ ಬೇರೆ ಕ್ಷೇತ್ರದ ಟಿಕೆಟ್ ಘೋಷಿಸುತ್ತಾರಾ? ಇತ್ಯಾದಿ ಪ್ರಶ್ನೆಗಳು ಎದ್ದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಖಾಲಿಯಿದ್ದಾಗೆಲ್ಲ ಇಬ್ರಾಹಿಂ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ: ಮಂಜುನಾಥ
ಖಾಲಿಯಿದ್ದಾಗೆಲ್ಲ ಇಬ್ರಾಹಿಂ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ: ಮಂಜುನಾಥ
‘ಬುರುಡೆ ಒಡೆಯುತ್ತೀನಿ’ ಎಂದ ರಜತ್​ಗೆ ಉಗ್ರಂ ಮಂಜು ಪ್ರತ್ಯುತ್ತರ
‘ಬುರುಡೆ ಒಡೆಯುತ್ತೀನಿ’ ಎಂದ ರಜತ್​ಗೆ ಉಗ್ರಂ ಮಂಜು ಪ್ರತ್ಯುತ್ತರ
ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?