AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಎಂ ಹಾಸ್ಟೆಲ್‌ ನಿವೃತ್ತ ಅಧೀಕ್ಷಕನ ಮನೆಯಲ್ಲಿ ಖಜಾನೆ ಕಂಡು ಲೋಕಾಯುಕ್ತ ಅಧಿಕಾರಿಗಳಿಗೇ ಶಾಕ್​​: ಬರೋಬ್ಬರಿ 80 ಮದ್ಯದ ಬಾಟಲಿಗಳೂ ಪತ್ತೆ

ಮಂಡ್ಯದ ಬಿಸಿಎಂ ಹಾಸ್ಟೆಲ್ ನಿವೃತ್ತ ಅಧೀಕ್ಷಕನ ಮನೆ ಮತ್ತು ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ನಡೆದ ಈ ಕಾರ್ಯಾಚರಣೆಯಲ್ಲಿ 2 ಕೋಟಿಗೂ ಅಧಿಕ ಮೌಲ್ಯದ ಆಸ್ತಿ, ಚಿನ್ನಾಭರಣ, 80 ಬಾಟಲ್ ಮದ್ಯ, ರೇಷ್ಮೆ ಸೀರೆಗಳು, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸೇರಬೇಕಿದ್ದ ದಿನಸಿ ಮತ್ತು ಸಾಹಿತ್ಯ ಸಮ್ಮೇಳನದ ಉಡುಗೊರೆಗಳು ಪತ್ತೆಯಾಗಿವೆ.

ಬಿಸಿಎಂ ಹಾಸ್ಟೆಲ್‌ ನಿವೃತ್ತ ಅಧೀಕ್ಷಕನ ಮನೆಯಲ್ಲಿ ಖಜಾನೆ ಕಂಡು ಲೋಕಾಯುಕ್ತ ಅಧಿಕಾರಿಗಳಿಗೇ ಶಾಕ್​​: ಬರೋಬ್ಬರಿ 80 ಮದ್ಯದ ಬಾಟಲಿಗಳೂ ಪತ್ತೆ
ದಾಳಿ ವೇಳೆ ಪತ್ತೆಯಾಗಿರುವ ವಸ್ತುಗಳುImage Credit source: Tv9 Kannada
ದಿಲೀಪ್​, ಚೌಡಹಳ್ಳಿ
| Edited By: |

Updated on:Sep 22, 2026 | 12:46 PM

Share

ಮಂಡ್ಯ, ಸೆಪ್ಟೆಂಬರ್​​ 22: ಮಂಡ್ಯದ ಬಿಸಿಎಂ ಹಾಸ್ಟೆಲ್‌ನ ನಿವೃತ್ತ ಅಧೀಕ್ಷಕ ಶಿವರಾಜ್​​ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್​​ ಕೊಟ್ಟಿದ್ದು, ಶಿವರಾಜ್ ಅವರ ಮನೆ ಮತ್ತು ಫಾರ್ಮ್ ಹೌಸ್ ಮೇಲೆ ರೇಡ್​​ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಮಂಡ್ಯದ ಮದ್ದೂರಿನ ವಿನಾಯಕ ಬಡಾವಣೆಯಲ್ಲಿರುವ ಶಿವರಾಜ್ ಅವರ ನಿವಾಸ ಹಾಗೂ ಫಾರ್ಮ್ ಹೌಸ್ ಮೇಲೆ ದಾಳಿ ವೇಲೆ ನಗದು, ಚಿನ್ನಾಭರಣ ಮತ್ತು ಇತರ ವಸ್ತುಗಳು ಪತ್ತೆಯಾಗಿವೆ ಎನ್ನಲಾಗಿದೆ.

ಸುಮಾರು 80 ಬಾಟಲ್ ಮದ್ಯ ಮನೆಯಲ್ಲಿ ಪತ್ತೆ

ಪ್ರಾಥಮಿಕ ಪರಿಶೀಲನೆಯಲ್ಲಿ 2 ಕೋಟಿಗೂ ಅಧಿಕ ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ಈ ದಾಳಿಯಲ್ಲಿ ನೂರಾರು ಆಸ್ತಿ ಪತ್ರಗಳು, ಅಕ್ರಮವಾಗಿ ಕೂಡಿಟ್ಟ ನಗದು, ಅಪಾರ ಪ್ರಮಾಣದ ಚಿನ್ನಾಭರಣಗಳು ಹಾಗೂ ದುಬಾರಿ ಬೆಲೆಯ ರೇಷ್ಮೆ ಸೀರೆಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇವುಗಳ ಜೊತೆಗೆ ಅಚ್ಚರಿಯ ಅಂಶವಾಗಿ ಸುಮಾರು 80 ಬಾಟಲ್ ಮದ್ಯವೂ ಮನೆಯಲ್ಲಿ ಸಿಕ್ಕಿದ್ದು, ಈ ಪ್ರಮಾಣದ ಮದ್ಯದ ಸಂಗ್ರಹವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್ ತಪ್ಪಿಸಲು ಕಳ್ಳಾಟ: ಜೀವದ ಜೊತೆ ಚೆಲ್ಲಾಟ!

ಹಾಸ್ಟೆಲ್​​ನ ದಿನಸಿ ಸಾಮಗ್ರಿಗಳು ಮನೆಯಲ್ಲಿ ಪತ್ತೆ

ಇದಲ್ಲದೆ,  ಬಿಸಿಎಂ ಹಾಸ್ಟೆಲ್‌ನ ವಿದ್ಯಾರ್ಥಿಗಳಿಗೆ ನೀಡಬೇಕಾಗಿದ್ದ ದಿನಸಿ ಸಾಮಗ್ರಿಗಳಾದ ಅಕ್ಕಿ, ಬೇಳೆ, ಎಣ್ಣೆ ಮುಂತಾದ ಅಗತ್ಯ ವಸ್ತುಗಳು ಶಿವರಾಜ್ ಅವರ ಮನೆಯಲ್ಲಿ ಪತ್ತೆಯಾಗಿವೆ. ಎರಡು ವರ್ಷಗಳ ಹಿಂದೆ ಮಂಡ್ಯದಲ್ಲಿ ನಡೆದ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದಿಂದ ಅಧಿಕಾರಿಗಳಿಗೆ ಹಾಗೂ ವಿಐಪಿಗಳಿಗೆ ನೀಡಲು ಬಂದಿದ್ದ ಉಡುಗೊರೆ ಬಾಕ್ಸ್‌ಗಳು ಕೂಡ ಶಿವರಾಜ್ ಅವರ ಮನೆಯಲ್ಲಿ ಮತ್ತು ಫಾರ್ಮ್ ಹೌಸ್‌ನಲ್ಲಿ ಸಿಕ್ಕಿವೆ. ಲೋಕಾಯುಕ್ತ ಅಧಿಕಾರಿಗಳು ಪತ್ತೆಯಾದ ಎಲ್ಲಾ ದಾಖಲೆಗಳು, ಆಸ್ತಿ ಪತ್ರಗಳು ಮತ್ತು ವಸ್ತುಗಳ ಸಮಗ್ರ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ಸ್ಥಳಕ್ಕೆ ಜೆರಾಕ್ಸ್ ಯಂತ್ರ ಮತ್ತು ಸ್ಕ್ಯಾನರ್ ಕೊಂಡೊಯ್ಯಲಾಗಿದ್ದು, ದಾಖಲೆಗಳ ಪ್ರತಿಗಳನ್ನು ಪಡೆದು ಡಿಜಿಟಲೀಕರಣ ಮಾಡುವ ಕೆಲಸ ನಡೆಯುತ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:41 pm, Tue, 22 September 26

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ