ಸಹೋದರನ ಮಗನನ್ನೇ ಮಂಡ್ಯ ಡಿಹೆಚ್ಒ ಆಗಿ ವರ್ಗಾಯಿಸಿಕೊಂಡ ಸಚಿವ ಎನ್ ಚಲುವರಾಯಸ್ವಾಮಿ
ಸೋದರನ ಮಗನನ್ನೇ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವರ್ಗಾಯಿಸಿಕೊಂಡಿದ್ದಾರೆ. ಆ ಮೂಲಕ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಕುಟುಂಬಸ್ಥರು, ಸಂಬಂಧಿಗಳು, ತಮ್ಮ ಆಪ್ತರಿಗೆ ಆದ್ಯತೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.

ಮಂಡ್ಯ: ಸೋದರನ ಮಗನನ್ನೇ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ (N chaluvaraya swamy) ವರ್ಗಾಯಿಸಿಕೊಂಡಿದ್ದಾರೆ. ಆ ಮೂಲಕ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಕುಟುಂಬಸ್ಥರು, ಸಂಬಂಧಿಗಳು, ತಮ್ಮ ಆಪ್ತರಿಗೆ ಸಚಿವ ಎನ್.ಚಲುವರಾಯಸ್ವಾಮಿ ಆದ್ಯತೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಇದ್ದ ಡಿಹೆಚ್ಒಗೆ ಯಾವುದೇ ಸ್ಥಳ ತೋರಿಸದೆ ವರ್ಗಾವಣೆ ಮಾಡಿದ್ದು, ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ಮೋಹನ್ ಬುಧವಾರ ಅಧಿಕಾರ ಸ್ವೀಕರಿಸಿರ ಮಾಡಿದ್ದಾರೆ.
2 ವರ್ಷಗಳಿಂದ ಡಿಹೆಚ್ಒ ಆಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಧನಂಜಯ್ಯ ಅವರಿಂದ ಡಾ.ಮೋಹನ್ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆಯೂ ಡಾ.ಮೋಹನ್ ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದರು. ಆಗ ಗುತ್ತಿಗೆ ನೌಕರರ ನೇಮಕಾತಿ ವಿವಾದದಲ್ಲಿ ಸಿಲುಕಿದ್ದರು.
ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಏಕಮುಖ ಪ್ರಯಾಣ ದುಬಾರಿ; ಟ್ವಿಟರ್‌ನಲ್ಲಿ ಮಿಶ್ರ ಪ್ರತಿಕ್ರಿಯೆ
ಸಚಿವ ಚಲುವರಾಯ ಸ್ವಾಮಿ ವಿರುದ್ಧ ಕೆಎಸ್ಆರ್ಟಿಸಿ ಬಸ್ ಚಾಲಕ ವರ್ಗಾವಣೆ ಆರೋಪ
ವರ್ಗಾವಣೆಯಿಂದ ಬೇಸತ್ತ ಕೆಎಸ್ಆರ್ಟಿಸಿ ಬಸ್ ಚಾಲಕನೊಬ್ಬ ಬಸ್ ಡಿಪೋದ ಮುಂದೇಯೇ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಚಾಲಕ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪರವಾಗಿ ಕೆಲಸ ಮಾಡಿದಕ್ಕೆ ಸಚಿವ ಚಲುವರಾಯ ಸ್ವಾಮಿ ಅವರು ನಾಗಮಂಗಲದಿಂದ ಮದ್ದೂರಿಗೆ ವರ್ಗಾವಣೆ ಮಾಡಿಸಿದ್ದಾರೆ ಎಂದು ಆರೋಪಿಸಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇದನ್ನೂ ಓದಿ: ಪೊಲೀಸ್ ಇಲಾಖೆಯ ಕಾರ್ಯಕಾರ್ಯೇತರ ಹುದ್ದೆಗಳಲ್ಲಿ ಮಾರ್ಪಾಡು: ಗೃಹ ಸಚಿವ ಡಾ ಜಿ ಪರಮೇಶ್ವರ್ ಆದೇಶ
ಸದ್ಯ ಜಗದೀಶ್ಗೆ ನಾಗಮಂಗಲ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಚುಂಚನಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:55 pm, Wed, 5 July 23