AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕೆಆರ್ ಪೇಟೆಯ ಬೀಕನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದರಿಂದ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಪ್ರತಿಮೆ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಮಂಡ್ಯ: ಕೆಆರ್ ಪೇಟೆಯ ಬೀಕನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು
ಬೀಕನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು
ಪ್ರಶಾಂತ್​ ಬಿ.
| Edited By: |

Updated on: May 08, 2024 | 9:41 AM

Share

ಮಂಡ್ಯ, ಮೇ 8: ಮಂಡ್ಯ (Mandya) ಜಿಲ್ಲೆಯ ಕೆಆರ್ ಪೇಟೆ (KR Pete) ತಾಲೂಕಿನ ಬೀಕನಹಳ್ಳಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (Sangolli Rayanna) ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ರಾಯಣ್ಣ ಪ್ರತಿಮೆಯ ಕೈಯಲ್ಲಿದ್ದ ಕತ್ತಿ ಮುರಿದು, ಕಾಲು ಸೇರಿದಂತೆ ವಿವಿಧ ಭಾಗಗಳನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.

ಕಳೆದ ವರ್ಷ ಗ್ರಾಮಸ್ಥರು ಈ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು. ತಡರಾತ್ರಿ ಕಿಡಿಗೇಡಿಗಳು ದುಷ್ಕೃತ್ಯ ಎಸಗಿದ್ದಾರೆ.

ಪ್ರತಿಮೆ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಕೆಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಶಾರ್ಟ್​​ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಮಳಿಗೆ

ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಕಚೇರಿ ಸಮೀಪ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ನಷ್ಟ ಉಂಟಾಗಿದೆ. ಪ್ರಸನ್ನ ಎಂಬುವರಿಗೆ ಸೇರಿದ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್, ಜೆರಾಕ್ಸ್ ಮಷಿನ್ ಬೆಂಕಿಗಾಹುತಿಯಾಗಿವೆ. ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ನಿಂತಿಲ್ಲ ಭ್ರೂಣಲಿಂಗ ಪತ್ತೆ, ಹತ್ಯೆ: ಆರೋಗ್ಯ ಇಲಾಖೆ ಕ್ವಾಟರ್ಸ್​​ನಲ್ಲೇ ಕೃತ್ಯ

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತು ಸಂಪೂರ್ಣ ನಾಶವಾಗಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ