AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಸನ್ನೆ, ಕೈಸನ್ನೆ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ; HD ಕುಮಾರಸ್ವಾಮಿ ಗಂಭೀರ ಆರೋಪ

ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಹೆಚ್.ಡಿ.ಕುಮಾರಸ್ವಾಮಿ, ‘ಚುನಾವಣಾಧಿಕಾರಿ ಸಮಕ್ಷಮದಲ್ಲಿ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೆ, ಕೈಸನ್ನೆ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಕಣ್ಸನ್ನೆ, ಕೈಸನ್ನೆ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ; HD ಕುಮಾರಸ್ವಾಮಿ ಗಂಭೀರ ಆರೋಪ
HD ಕುಮಾರಸ್ವಾಮಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Aug 28, 2024 | 6:42 PM

Share

ಮಂಡ್ಯ, ಆ.28: ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೆ, ಕೈಸನ್ನೆ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಗಂಭೀರ ಆರೋಪ ಮಾಡಿದ್ದಾರೆ.

ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು, ‘ವಾಮಮಾರ್ಗದಲ್ಲಿ ಜೆಡಿಎಸ್, ಬಿಜೆಪಿ ಪಕ್ಷಗಳು ಅಧಿಕಾರ ಹಿಡಿದವು ಎಂಬ ಶಾಸಕ ಗಣಿಗ ರವಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟಿದ್ದು, ‘ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು? ಮತದಾನದ ವೇಳೆಯಲ್ಲಿಯೂ ಕಣ್ಸನ್ನೆ, ಕೈಸನ್ನೆ ಮೂಲಕ ನಮ್ಮ ಸದಸ್ಯರಿಗೆ ಹಣದ ಆಮೀಷ ಒಡ್ಡಿದ್ದು ವಾಮಮಾರ್ಗ ಅಲ್ಲದೆ ಮತ್ತೇನು? ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯರ ಹಿರಿಮಗನನ್ನು ಪ್ರಸ್ತಾಪಿಸಿದ ಹೆಚ್ ಡಿ ಕುಮಾರಸ್ವಾಮಿ!

‘ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ ಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ ನಾನು ಬರಲೇಬೇಕಾಯಿತು. ದೆಹಲಿಯಲ್ಲಿ ಸಚಿವ ಸಂಪುಟದ ಸಭೆ ನಿಗದಿ ಆಗಿತ್ತು. ನಾನು ಪ್ರಧಾನಮಂತ್ರಿಗಳ ಕಚೇರಿಯ ಅನುಮತಿ ಪಡೆದು ಮತದಾನದಲ್ಲಿ ಭಾಗವಹಿಸಿದೆ. ಕಾಂಗ್ರೆಸ್ ಈ ಜಿಲ್ಲೆಯಲ್ಲಿ ದೊಡ್ಡ ಮಟ್ಟಿಗೆ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.

ಸೋಲಿನ ಭಯದಲ್ಲಿ ಚುನಾವಣೆ ಮುಂದೂಡುವುದರಲ್ಲಿ ಕಾಂಗ್ರೆಸ್ ಎಕ್ಸ್​ಪರ್ಟ್

ಶಾಂತಿಯುತವಾಗಿ ಚುನಾವಣೆ ನಡೆಯಲು ಅಧಿಕಾರಿಗಳು ಸಹಕರಿಸಿದ್ದಾರೆ. ಆದರೆ, ಏನಾದರೂ ಕಿತಾಪತಿ ಮಾಡುವುದಕ್ಕೆ ಕಾಂಗ್ರೆಸ್ ನಾಯಕರು ಪ್ರಯತ್ನ ಮಾಡಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿಂದಿನ ಅಧ್ಯಕ್ಷರು ವ್ಯಾಪಾರ ಶುರು ಮಾಡಿದ್ದರು. ನಮ್ಮ‌ ಪಕ್ಷದಿಂದ ಗೆದ್ದು ಯಾವ ರೀತಿ ನಡೆದುಕೊಂಡರು ಎನ್ನುವುದು ಗೊತ್ತಿದೆ. ಮಹದೇವು ನಿಷ್ಠಾವಂತ ಜೆಡಿಎಸ್ ಸದಸ್ಯ, ಪಕ್ಷ ನಿಷ್ಠೆಗೆ ಬೆಲೆ ಕೊಟ್ಟು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿಲ್ಲ. ಕಾಂಗ್ರೆಸ್ ನಾಯಕರು ಇವರ ಕುಟುಂಬದ ಸದಸ್ಯರನ್ನು ಬ್ಲಾಕ್ ಮೇಲ್ ಮಾಡಿದರು. ಮಹದೇವು ಅವರು ತೆಗೆದುಕೊಂಡ ನಿರ್ಧಾರ ಪಕ್ಷನಿಷ್ಠೆಗೆ ಮಾದರಿಯಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!