ನನಗೆ ಜೀವ ಬೆದರಿಕೆ ಇತ್ತು ಎಂದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್

| Updated By: ಗಂಗಾಧರ​ ಬ. ಸಾಬೋಜಿ

Updated on: Feb 23, 2024 | 12:58 PM

ಮಂಡ್ಯ ಜಿಲ್ಲಾ ಪಂಚಾಯತ್‌ ಕಾವೇರಿ ಭವನದಲ್ಲಿ ಆಯೋಜಿಸಿದ್ದ ತಮ್ಮ ಅಧಿಕಾರ ಅವಧಿಯ ಕೊನೆ ದಿಶಾ ಸಭೆಯಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್​, ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡಿದ್ದಕ್ಕೆ ನನಗೆ ಜೀವ ಬೆದರಿಕೆ ಇದ್ದರೂ ನಾನು ಹೋರಾಡಿದ್ದೇನೆ. ನನಗೆ ನಿರಂತರವಾಗಿ ಜೀವ ಬೆದರಿಕೆ ಕರೆ ಬರುತ್ತಿದ್ದವು. ಅಂದು ಹೋರಾಟದ ಫಲವಾಗಿ ಹೈಕೋರ್ಟ್ ಗಣಿಗಾರಿಕೆ ನಿಷೇಧಿಸಿದೆ ಎಂದು ಹೇಳಿದ್ದಾರೆ.

ನನಗೆ ಜೀವ ಬೆದರಿಕೆ ಇತ್ತು ಎಂದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್
ಸಂಸದೆ ಸುಮಲತಾ ಅಂಬರೀಶ್
Follow us on

ಮಂಡ್ಯ, ಫೆಬ್ರವರಿ 23: ನನಗೆ ಜೀವ ಬೆದರಿಕೆ ಇದ್ದರೂ ನಾನು ಹೋರಾಡಿದ್ದೇನೆ. ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡಿದ್ದಕ್ಕೆ ಬೆದರಿಕೆ ಕರೆ ಮಾಡಿದ್ದರು ಎಂದು ಸಂಸದೆ ಸುಮಲತಾ ಅಂಬರೀಶ್ (sumalatha ambareesh)​ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯತ್‌ ಕಾವೇರಿ ಭವನದಲ್ಲಿ ಆಯೋಜಿಸಿದ್ದ ತಮ್ಮ ಅಧಿಕಾರ ಅವಧಿಯ ಕೊನೆ ದಿಶಾ ಸಭೆಯಲ್ಲಿ ಮಾತನಾಡಿದ ಅವರು, ನನಗೆ ನಿರಂತರವಾಗಿ ಜೀವ ಬೆದರಿಕೆ ಕರೆ ಬರುತ್ತಿದ್ದವು. ಕೆಆರ್​ಎಸ್​ ಉಳಿವಿಗಾಗಿ ಅಕ್ರಮದ ವಿರುದ್ಧ ಹೋರಾಡಿದ್ದೇನೆ. ಹೋರಾಟದ ಫಲವಾಗಿ ಹೈಕೋರ್ಟ್ ಗಣಿಗಾರಿಕೆ ನಿಷೇಧಿಸಿದೆ ಎಂದು ಹೇಳಿದ್ದಾರೆ.

ನನಗೆ ಬೇರೆಡೆ ಟಿಕೆಟ್​ ಪಡೆಯುವುದು ಕಷ್ಟವಲ್ಲ

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ದೆಹಲಿ ಪ್ರವಾಸದ ಬಗ್ಗೆ ಸುಮಲತಾ ಪ್ರತಿಕ್ರಿಯೆ ನೀಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಏನು ಬೇಕಾದರೂ ಹೇಳಿಕೊಳ್ಳಲಿ. ಅಂತೆ ಕಂತೆಗಳನ್ನ ನಾವು ಕೇಳಿಕೊಂಡೇ ಬರುತ್ತಿದ್ದೇವೆ. ಅಂತಿಮವಾಗುವವರೆಗೆ ಏನೂ ಹೇಳುವುದಕ್ಕೆ ಆಗಲ್ಲ. ನನ್ನ ಮುಂದೆ ಹಲವಾರು ಆಯ್ಕೆಗಳಿವೆ. ನನಗೆ ಬೇರೆಡೆ ಟಿಕೆಟ್​ ಪಡೆಯುವುದು ಕಷ್ಟವಲ್ಲ. ನಾನು ಕ್ಷೇತ್ರ ಉಳಿಸಿಕೊಳ್ಳಬೇಕು ಅಂತಾ ಹೇಳಿದ್ದೇನೆ. ಅಂತಿಮ ನಿರ್ಧಾರ ಆಗುವವರೆಗೂ ಏನೂ ಹೇಳಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ರಂಗೇರಿದ ಲೋಕ ಅಖಾಡ; ಒಂದೇ ವೇದಿಕೆಯಲ್ಲಿ ಕಾಣಿಸ್ಕೊಂಡ ಮೂರು ಪಕ್ಷಗಳ ಸಂಭಾವ್ಯ ಅಭ್ಯರ್ಥಿಗಳು

ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ. ಕಳೆದ 5 ವರ್ಷಗಳ ದಿಶಾ ಸಭೆಗಳಲ್ಲಿ ಹಲವು ವಿಷಯ ಚರ್ಚೆಯಾಗಿದೆ. ಚರ್ಚೆಯಾದ ವಿಷಯ ಎಷ್ಟರ ಮಟ್ಟಿಗೆ ಜಾರಿಯಾಗಿದೆ ಎನ್ನುವುದರ ಬಗ್ಗೆ ವಿವರ ಕೇಳಬೇಕು. ಭ್ರೂಣ ಹತ್ಯೆ ಬಗ್ಗೆ ನಾನು 4 ವರ್ಷಗಳ ಹಿಂದೆಯೆ ಪ್ರಸ್ತಾಪ ಮಾಡಿದ್ದೆ. ಆದರೆ ಅದರ ವಿರುದ್ಧ ಸರಿಯಾದ ಕ್ರಮ ಆಗಲಿಲ್ಲ. ಭ್ರೂಣ ಹತ್ಯೆ ತಡೆಯಲು ಜಿಲ್ಲಾಡಳಿತ ವಿಫಲವಾಗಿದೆ ಬೇಸರ ವ್ಯಕ್ತಪಡಿಸಿದ್ದಾರೆ.  ಇಂದಿನ ಸಭೆಯಲ್ಲಿ ಕೇಂದ್ರದ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗಿದೆ.

ಇದನ್ನೂ ಓದಿ: ಯಾವುದೇ ಕಾರಣಕ್ಕೂ ನಾನು ಈ ಮಣ್ಣನ್ನ ಬಿಡೋದಿಲ್ಲ; ಮಂಡ್ಯ ಲೋಕಸಭಾ ಸ್ಪರ್ಧೆ ಬಗ್ಗೆ ಸುಮಲತಾ ಸುಳಿವು

ಬೇಬಿಬೆಟ್ಟ ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಮಾತನಾಡಿದ ಅವರು, ಟ್ರಯಲ್ ಬ್ಲಾಸ್ಟ್‌ಗೆ ಕೋರ್ಟ್ ಆದೇಶ ಇದೆ. ಆದರೆ ವಾಸ್ತವ ಮಾಹಿತಿಯನ್ನು ಅಧಿಕಾರಗಳಿಗೆ ತಿಳಿಸಿದ್ದೇನೆ. ಟ್ರಯಲ್ ಬ್ಲಾಸ್ಟ್‌ಗೆ ರೈತರ ವಿರೋಧ ಇದೆ‌. ರೈತರ ಮನವಿಯಲ್ಲಿ ನ್ಯಾಯ ಇದೆ. ನಾನು ಅವರೊಂದಿಗಿದ್ದೇನೆ.

ಟ್ರಯಲ್ ಬ್ಲಾಸ್ಟ್ ನಡೆಸಿದರೆ ಅನುಕೂಲಕ್ಕಿಂತ ಅನಾನುಕೂಲ ಜಾಸ್ತಿ. ಟ್ರಯಲ್ ಬ್ಲಾಸ್ಟ್‌ಗೆ ಸ್ಟೇ ಆರ್ಡರ್ ತರಲು ರೈತ ಸಂಘ ಮುಂದಾಗಿದೆ. ಜಿಲ್ಲಾಡಳಿತಕ್ಕೆ ಮೇಲ್ಮನವಿ ಸಲ್ಲಿಸುವ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:57 pm, Fri, 23 February 24