ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ವಂಚನೆ ಪ್ರಕರಣ: ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್ ಸೇರಿ ಐವರಿಗೆ 7 ವರ್ಷ ಶಿಕ್ಷೆ

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್ ಸೇರಿದಂತೆ ಐದು ಮಂದಿಗೆ ತಲಾ 7 ವರ್ಷ ಶಿಕ್ಷೆ, 5 ಕೋಟಿ ದಂಡ ವಿಧಿಸಿ ಬೆಂಗಳೂರಿನ ಸಿಬಿಐ ಕೋರ್ಟ್‌ ಆದೇಶ ಹೊರಡಿಸಿದೆ. 

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ವಂಚನೆ ಪ್ರಕರಣ: ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್ ಸೇರಿ ಐವರಿಗೆ 7 ವರ್ಷ ಶಿಕ್ಷೆ
ಸಿಬಿಐ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 09, 2022 | 9:33 PM

ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್ ಸೇರಿದಂತೆ ಐದು ಮಂದಿಗೆ ತಲಾ 7 ವರ್ಷ ಶಿಕ್ಷೆ, 5 ಕೋಟಿ ದಂಡ ವಿಧಿಸಿ ಬೆಂಗಳೂರಿನ ಸಿಬಿಐ ಕೋರ್ಟ್‌ ಆದೇಶ ಹೊರಡಿಸಿದೆ.  ಕೆಬ್ಬಳ್ಳಿ ಆನಂದ್, ಹೆಚ್.ಎಸ್.ನಾಗಲಿಂಗಸ್ವಾಮಿ, ಚಂದ್ರಶೇಖರ್, ಹೆಚ್.ಕೆ.ನಾಗರಾಜ, ಕೆ.ಬಿ.ಹರ್ಷನ್‌ಗೆ ಶಿಕ್ಷೆಗೊಳಗಾದ ಆಪಾಧಿತರು.

ಪ್ರಕರಣದ ಹಿನ್ನೆಲೆ

2013ರಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ 5 ಕೋಟಿ ಹಣವನ್ನು ಪಡೆದು ಹಿಂತಿರುಗಿಸದೆ ವಂಚಿದ್ದ ಆರೋಪದ ಮೇರೆಗೆ ಕಾಂಗ್ರೆಸ್ ಮುಖಂಡ ಕೆಬ್ಬಹಳ್ಳಿ ಆನಂದ್​ ಸೇರಿ ಒಟ್ಟು 11 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಆರೋಪಿಗಳು ಮಂಡ್ಯ ಮಾತ್ರವಲ್ಲದೆ ರಾಮನಗರ-ಚನ್ನಪಟ್ಟಣ ನಗರಾಭಿವೃದ್ಧಿಗೂ ಇದೇ ಆರೋಪಿಗಳು 5 ಕೋಟಿ ರೂ ಹಣ ವಂಚನೆ ಮಾಡಿರುವುದಾಗಿ ಬೆಳಕಿಗೆ ಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರ ಜುಲೈ 5 ರಂದು ಮಂಡ್ಯದ ಪಶ್ಚಿಮ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಈ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತ್ತು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರಕಾರ ಸಿಬಿಐ ತನಿಖೆಗೆ ಒಪ್ಪಿಸಿತ್ತು. ಸಿಬಿಐ ವಿಚಾರಣೆ ವೇಳೆ 6 ಜನರನ್ನು ಕೈಬಿಟ್ಟು 5 ಮಂದಿಯ ವಿರುದ್ಧ ಅಂದಿನ ಸಿಬಿಐ ಡಿವೈಎಸ್ಪಿ ಕೆ.ವೈ. ಗುರುಪ್ರಸಾದ್ ನೇತೃತ್ವದ ತಂಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.

ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಗಳ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಐದು ಮಂದಿ ಅಪರಾಧಿಗಳಿಗೆ ತಲಾ 7 ವರ್ಷ ಜೈಲು ಶಿಕ್ಷೆ, ತಲಾ ಒಂದೊಂದು ಕೋಟಿಯಂತೆ ಐದು ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:05 pm, Fri, 9 September 22