ನಾಗಮಂಗಲ ಕೋಮುಗಲಭೆ ಕೇಸ್: ದೂರು ನೀಡಿದ್ದ ಪೊಲೀಸ್ ಅಧಿಕಾರಿಯೇ ಸಸ್ಪೆಂಡ್

Nagamangala Violence: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಈ ಗಲಭೆ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಇದೀಗ ಕೋಮುಗಲಭೆ ಪ್ರಕರಣಕ್ಕೆ ಟ್ವಿಸ್ಟ್​​ ಸಿಕ್ಕಿದೆ.

ನಾಗಮಂಗಲ ಕೋಮುಗಲಭೆ ಕೇಸ್: ದೂರು ನೀಡಿದ್ದ ಪೊಲೀಸ್ ಅಧಿಕಾರಿಯೇ ಸಸ್ಪೆಂಡ್
ನಾಗಮಂಗಲ ಪಿಎಸ್​ಐ ರವಿ
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on:Oct 08, 2024 | 10:25 AM

ಮಂಡ್ಯ, ಅಕ್ಟೋಬರ್​​ 08: ನಾಗಮಂಗಲದಲ್ಲಿ ಗಣೇಶ ವಿಷರ್ಜನೆ ವೇಳೆ ನಡೆದ ಕೋಮುಗಲಭೆ (Nagamangala Violence) ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಈ ಗಲಭೆ ಪ್ರಕರಣಕ್ಕೆ ಈಗ ಟ್ವಿಸ್ಟ್​​ ಸಿಕ್ಕಿದೆ. ಗಲಭೆ ಬಗ್ಗೆ ದೂರು ನೀಡಿದ್ದ ಅಧಿಕಾರಿಯನ್ನೇ ಅಮಾನತು ಮಾಡಲಾಗಿದೆ.

ನಾಗಮಂಗಲ ಕೋಮುಗಲಭೆ ಬಳಿಕ ದೂರು ನೀಡಿದ್ದ ನಾಗಮಂಗಲ ಟೌನ್ ಠಾಣೆ ಪಿಎಸ್​ಐ ಬಿ.ಜೆ.ರವಿ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

ಗಣೇಶ ವಿಸರ್ಜನೆ ಮಾಡುತ್ತಿದ್ದವರ ಪ್ರಚೋದನೆಯಿಂದ ಗಲಭೆ ಸೃಷ್ಷಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಪಿಎಸ್ಐ ರವಿ ಅವರನ್ನು ಅಮಾನತು ಮಾಡಲಾಗಿದೆ. ಪಿಎಸ್ಐ ಬಿಜೆ ರವಿ ಜೊತೆಗೆ ಪೊಲೀಸ್​ ಪೇದೆ ​ ರಮೇಶ್ ಅವರನ್ನೂ ಕೂಡ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ನಾಗಮಂಗಲ ಗಲಭೆಯಲ್ಲಿ ನಿಷೇಧಿತ PFI ಸದಸ್ಯರು ಭಾಗಿ?, ಇನ್ಸ್‌ಪೆಕ್ಟರ್ ಅಮಾನತು

ಗಣೇಶ ವಿಷರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣ ಸಂಬಂಧ ಒಟ್ಟು ‌ನಾಲ್ವರ ತಲೆದಂಡವಾಗಿದೆ. ಈ ಹಿಂದೆ ಡಿವೈಎಸ್​ಪಿ ಸುಮಿತ್, ಪಿಐ ಅಶೋಕ್ ಅಮಾನತು ಆಗಿದ್ದರು. ಇದೀಗ ಮತ್ತಿಬ್ಬರನ್ನು ಅಮಾನತು ಮಾಡಿ ಎಸ್​ಪಿ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

ಏನಿದು ಘಟನೆ?

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ದರ್ಗಾ ಬಳಿ ನಡೆದ ಗಲಭೆಯಲ್ಲಿ 20ಕ್ಕೂ ಅಧಿಕ ಅಂಗಡಿಗಳನ್ನು ಧ್ವಂಸ ಮಾಡಲಾಗಿತ್ತು. ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಹಿಂದೂಗಳ ಗುಂಪು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದಂತೆ ಮುಸ್ಲಿಮರ ಗುಂಪು ಅಲ್ಲಾಹು ಅಕ್ಬರ್ ಘೋಷಣೆ ಕೂಗಿ ಗಲಾಟೆಯೆಬ್ಬಿಸಿದ್ದರು. ಬಳಿಕ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು.

ರಿಸರ್ವ್ ಪೊಲೀಸ್ ಸಿಬ್ಬಂದಿ ಊಟಕ್ಕೆ ಹೋದಾಗ ನಡೆಯಿತು ಗಲಭೆ!

ಗಲಾಟೆ ಹಿಂದೆ ಪೊಲೀಸರ ಲೋಪ ದೋಷ ಎದ್ದು ಕಾಣುತ್ತಿದೆ. ಗಣೇಶ ವಿಸರ್ಜನೆ ಮೆರವಣಿಗೆಗೆ ಕಾವಲಿಗೆ 24 ಜನ ಡಿಎಆರ್​ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೆ, ಈ ಸಿಬ್ಬಂದಿಗೆ ಊಟ ಕೊಡಿಸಲು ನಾಗಮಂಗಲ ಠಾಣೆ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಹಿಂದೇಟು ಹಾಕಿದ್ದರು. ಬದಲಿಗೆ 24 ಮಂದಿ ಡಿಎಆರ್​ ಸಿಬ್ಬಂದಿಯನ್ನು ಊಟಕ್ಕೆ ಬೇರೆ ಕಡೆ ಕಳುಹಿಸಿದ್ದರು. ರಿಸರ್ವ್ ಪೊಲೀಸ್ ಸಿಬ್ಬಂದಿ ‌ವಾಹನ ಹೊರಟ ಅರ್ಧ ಗಂಟೆ ನಂತರ ಕೋಮುಗಲಭೆ ಆರಂಭವಾಗಿತ್ತು.

ಗಲಾಟೆ ಆರಂಭವಾದಾಗ‌ ಸ್ಥಳದಲ್ಲಿ ಕೇವಲ ಏಳು ಸಿಬ್ಬಂದಿ‌ ಮಾತ್ರ ಇದ್ದರು. ಈ ಸಿಬ್ಬಂದಿ ಪ್ರಾಣ ಉಳಿಸಿಕೊಳ್ಳಲು‌ ಪರದಾಡಿದರು. ಪಿಎಸ್​ಐ ರವಿ ಸೇರಿದಂತೆ ಹಲವು ಸಿಬ್ಬಂದಿ ಮೇಲೆಯೇ ಕಿಡಿಗೇಡಿಗಳು ದಾಳಿ ಮಾಡಿದ್ದರು. ರಿಸರ್ವ್ ಸಿಬ್ಬಂದಿ ವಾಪಸ್‌ ಬರುವಷ್ಟರಲ್ಲಿ ಪರಿಸ್ಥಿತಿ ಕೈಮೀರಿತ್ತು. ಕಲ್ಲು, ದೊಣ್ಣೆ, ಮಾರಕಾಸ್ತ್ರ, ಪೆಟ್ರೋಲ್ ಬಾಂಬ್ ಎಸೆಯುವ ಜೊತೆಗೆ ‌ಅಂಗಡಿ ಮುಂಗಟ್ಟಿಗೆ ಬೆಂಕಿ ಹಚ್ಚಿ ಕ್ರೌರ್ಯ ಮೆರೆಯಲಾಗಿತ್ತು. ಹೀಗಾಗಿ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಗೃಹ ಇಲಾಖೆ ಅಮಾನತು ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:18 am, Tue, 8 October 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ