ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ; ಮೂರು ಪ್ರತ್ಯೇಕ ದೂರು ದಾಖಲು
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಹಿಂದೂ ಯುವಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಘಟನೆ ಸಂಬಂಧ ಮೂರು ಪ್ರತ್ಯೇಕ ದೂರು ದಾಖಲಾಗಿದೆ. ಈ ಕುರಿತು ಹಿಂದೂ ಮುಖಂಡರು ಮಾತನಾಡಿ, ‘ಸಂಜೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಮಂಡ್ಯ, ಮೇ.28: ಜಿಲ್ಲೆಯ ನಾಗಮಂಗಲ(Nagmangala) ತಾಲೂಕಿನ ಬೆಳ್ಳೂರು(Bellur) ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಘಟನೆ ಸಂಬಂಧ ಮೂರು ಪ್ರತ್ಯೇಕ ದೂರು ದಾಖಲಾಗಿದೆ. ಹಲ್ಲೆಗೊಳಗಾದ ಅಭಿಲಾಷ್ ತಂದೆ ರಾಮು, ಅಭಿಲಾಷ್ ಅತ್ತೆ ರಶ್ಮಿ ಹಾಗೂ ಮಂಜುಳಾ ಎಂಬುವವರು ಹಿಂದೂ ಸಂಘಟನೆ (Hindu organization) ಮುಖಂಡರೊಂದಿಗೆ ಠಾಣೆಗೆ ತೆರಳಿ ಮಂಡ್ಯ ಎಸ್‌ಪಿ ಯತೀಶ್ ಸಮ್ಮುಖದಲ್ಲಿ ದೂರು ದಾಖಲು ಮಾಡಿದ್ದಾರೆ.
ಪ್ರತ್ಯೇಕ ದೂರು
ಇನ್ನು ಘಟನೆ ಬಳಿಕ ದೂರು ಸ್ವೀಕರಿಸದ ಪೊಲೀಸರ ವಿರುದ್ಧವೂ ಕಂಪ್ಲೇಂಟ್ ದಾಖಲಿಸಿದ್ದಾರೆ. ಅಭಿಲಾಷ್ ಮೇಲೆ ಹಲ್ಲೆ, ರಶ್ಮಿ ಮನೆಗೆ ನುಗ್ಗಿ ದಾಂಧಲೆ ಹಾಗೂ ಮಂಜುಳಾಗೆ ರಸ್ತೆಯಲ್ಲಿ ಬೆದರಿಕೆ ಹಾಕಿದ ಬಗ್ಗೆಯೂ ಪ್ರತ್ಯೇಕ ದೂರು ನೀಡಿದ್ದು, ಮೊಹ್ಮದ್ ಹುಜೈಫ್, ಇಮ್ರಾನ್, ಸಮೀರ್ ಸೂಫಿಯಾನ್ ಮತ್ತು ಇರ್ಫಾನ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ.
ಆರೋಪಿಗಳನ್ನ ಬಂಧಿಸದಿದ್ರೆ ಹೋರಾಟದ ಎಚ್ಚರಿಕೆ
ದೂರು ದಾಖಲಿಸಿದ ಬಳಿಕ ಹಲ್ಲೆಗೊಳಗಾದವರ ಪೋಷಕರು ಹಾಗೂ ಹಿಂದೂ ಮುಖಂಡರು ಮಾತನಾಡಿ, ‘ಸಂಜೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಲಾಗಿದೆ. ಬೆಳ್ಳೂರಿನಲ್ಲಿ ಪದೇಪದೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಮುಂದೆ ಇಲ್ಲಿ ಹಿಂದೂಗಳು ಬದುಕಲು ಅಸಾಧ್ಯವೆಂಬ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ನಿರ್ಲಕ್ಷ್ಯ ಮಾಡದೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ ಎಂದರು.
ಘಟನೆ ವಿವರ
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಓವರ್ ಟೇಕ್ ಮಾಡಲು ಹೋಗಿ ಬೈಕ್ಗೆ ಟಚ್ ಮಾಡಿರುವುದನ್ನು ಪ್ರಶ್ನಿಸಿದ್ದ ಅಭಿಲಾಷ್ ಎಂಬುವವರಿಗೆ ಇಬ್ಬರು ಮುಸ್ಲಿಂ ಯುವಕರ ಗುಂಪೊಂದು ಇಂದು (ಮೇ 27) ಸಂಜೆ ಅಭಿಲಾಷ್ ಮೇಲೆ ಹಲ್ಲೆ ಮಾಡಿತ್ತು. ಬಳಿಕ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಯುವಕರು, ಓರ್ವ ಮಹಿಳೆ ಮನೆ ಬಳಿ ದಾಂಧಲೆ, ನಡೆಸಿ ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿತ್ತು. ಈ ಘಟನೆ ಕುರಿತು ಇದೀಗ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ