ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಕಾಮಗಾರಿ ಅಪೂರ್ಣ

ಅಪೂರ್ಣಗೊಂಡಿರುವ ಬೆಂಗಳೂರು-ಮೈಸೂರು ಹೆದ್ದಾರಿಯ ರಸ್ತೆಗಳು. ಅರ್ಧಕ್ಕೆ ನಿಂತುರುವ ಚರಂಡಿ ಕಾಮಗಾರಿ. ಅಂಡರ್ ಪಾಸ್ ಕೆಳಗೆ ನಿಂತಿರುವ ನೀರು. ಈ ಎಲ್ಲ ದೃಶ್ಯಗಳು ಕಾಣಸಿಗುವುದು ಬೆಂಗಳೂರು-ಮೈಸೂರು ಹೆದ್ದಾರಿ ಅಕ್ಕ-ಪಕ್ಕದಲ್ಲಿ. ಏನಿದು ಹೆದ್ದಾರಿ ಅಪೂರ್ಣ ಕಾಮಗಾರಿ ಕಥೆ? ಈ ಸುದ್ದಿ ಓದಿ...

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಕಾಮಗಾರಿ ಅಪೂರ್ಣ
ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್​ ರಸ್ತೆ, ಚರಂಡಿ
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on: May 17, 2024 | 10:31 AM

ಮಂಡ್ಯ, ಮೇ 17: ನೂತನ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ (Bengaluru-Mysore Highway) ಸದಾ ಒಂದಿಲ್ಲ ಒಂದು ವಿವಾದಗಳಿಂದ ಅಪಖ್ಯಾತಿಗಳಿಸಿದೆ. ಹೆದ್ದಾರಿ ನಿರ್ಮಾಣದ ವೇಳೆ ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ವಿಸ್ ರಸ್ತೆಗಳನ್ನು ಕೂಡ ನಿರ್ಮಾಣ ಮಾಡಲಾಗಿದೆ. ಆದರೆ ಸರಿಯಾಗಿ, ಪೂರ್ಣ ಪ್ರಮಾಣದಲ್ಲಿ ಸರ್ವಿಸ್ ರಸ್ತೆಗಳನ್ನು ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಅಕ್ಕ-ಪಕ್ಕದ ಗ್ರಾಮದ ವಾಹನ ಸವಾರರು ಪರದಾಡುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಕೋಟ್ಯಾಂತರ ರೂ. ವೆಚ್ಚದಲ್ಲಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಿರ್ಮಿಸಲಾಗಿದೆ. ಹೆದ್ದಾರಿ ಪಕ್ಕದ ಗ್ರಾಮಸ್ಥರ ವಾಹನ ಸವಾರರಿಗೆ ಅನುಕೂಲವಾಗಲಿ ಅಂತ ಎರಡು ಕಡೆಗಳಲ್ಲಿ ಸರ್ವಿಸ್ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಪೂರ್ಣ ಹಾಗೂ ವೈಜ್ಞಾನಿಕವಾಗಿ ಸರ್ವಿಸ್ ರಸ್ತೆಯನ್ನು ನಿರ್ಮಾಣ ಮಾಡಿಲ್ಲ. ಇನ್ನು ಸರ್ವಿಸ್ ರಸ್ತೆಯ ಕಾಮಗಾರಿ ಪೂರ್ಣಗೊಳಿಸದೆ ಅರ್ಧಕ್ಕೆ ಬಿಟ್ಟಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ಇನ್ನು ಸರ್ವಿಸ್ ರಸ್ತೆಯ ಎರಡು ಕಡೆಗಳಲ್ಲಿ ಚರಂಡಿಗಳನ್ನ ಪೂರ್ಣಗೊಳಿಸದ ಹಾಗೆ ಬಿಡಲಾಗಿದೆ. ಅವೈಜ್ಞಾನಿಕವಾಗಿ ಕಾಮಗಾರಿ ನಡೆದಿದೆ. ಇದರಿಂದಾಗಿ ಮಳೆ ಬಂದರೆ ಸರಿಯಾಗಿ ನೀರು ಚರಂಡಿಯಲ್ಲಿ ಹರಿಯುತ್ತಿಲ್ಲ. ಹೀಗಾಗಿ ಸರ್ವಿಸ್ ರಸ್ತೆಯಲ್ಲಿ ನೀರು ನಿಲ್ಲುತ್ತಿದೆ. ಅಲ್ಲದೆ ಅಂಡರ್ ಪಾಸ್​ನಲ್ಲಿಯೂ ನೀರು ನಿಲ್ಲುತ್ತಿದೆ. ನೀರು ಸರಿಯಾಗಿ ಚರಂಡಿ ಮೂಲಕ ಹರಿದು ಹೋಗದ ಹಿನ್ನೆಲೆಯಲ್ಲಿ ಸರ್ವಿಸ್ ರಸ್ತೆಯ ಪಕ್ಕದಲ್ಲಿ ಇರುವ ಮನೆಗಳಿಗೆ ನುಗ್ಗುತ್ತಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸೀಟ್ ಬೆಲ್ಟ್ ಧರಿಸದೇ ಪ್ರಯಾಣಿಸಿದರೆ ಫೈನ್ ಪಕ್ಕ; 16 ದಿನದಲ್ಲಿ 12 ಸಾವಿರ ಕೇಸ್

ಸರ್ವಿಸ್ ರಸ್ತೆ, ಅಂಡರ್ ಪಾಸ್ ನೀರು ನಿಲ್ಲುವುದರಿಂದ ವಾಹನ ಸವಾರರು ಕೂಡ ಪರದಾಡುವಂತಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಾರೆ ಅವೈಜ್ಷಾನಿಕ ಕಾಮಗಾರಿಯಿಂದ ಸ್ಥಳೀಯರು, ವಾಹನ ಸವಾರರು ಪರದಾಟ ನಡೆಸುವಂತೆ ಆಗಿದ್ದು, ಎನ್​ಹೆಚ್​ಎಐ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ