Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಮಹಿಳೆ ಮನೆ ಬಳಿ ದಾಂಧಲೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಮುಸ್ಲಿಂ ಯುವಕರು

ಮಂಡ್ಯ ಜಿಲ್ಲೆಯ ನಾಗಮಂಗಲ ‌ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಮುಸ್ಲಿಂ ಯುವಕರು ಅಭಿಲಾಷ್​ ಎಂಬುವರ ಮೇಲೆ ಸೋಮವಾರ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿದ ಬಳಿಕ ತಡರಾತ್ರಿ ಮುಸ್ಲಿಂ ಯುವಕರು ಅಭಿಲಾಷ್​ ಅವರ ಅತ್ತೆ ಮನೆಗೆ ತೆರಳಿ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ.

ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಮಹಿಳೆ ಮನೆ ಬಳಿ ದಾಂಧಲೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಮುಸ್ಲಿಂ ಯುವಕರು
ಪೊಲೀಸರ ಎದುರು ಅಳಲು ತೋಡಿಕೊಂಡ ಮಹಿಳೆಯರು
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on:May 28, 2024 | 10:18 AM

ಮಂಡ್ಯ, ಮೇ 28: ನಾಗಮಂಗಲ (Nagmangala) ‌ತಾಲೂಕಿನ ಬೆಳ್ಳೂರು (Bellur) ಗ್ರಾಮದಲ್ಲಿ ನಡೆದ ಹಿಂದೂ (Hindu) ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ (Muslim) ಯುವಕರು ಓರ್ವ ಮಹಿಳೆ ಮನೆ ಬಳಿ ದಾಂಧಲೆ, ನಡೆಸಿ ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಶನಿವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಲಿ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಲ್ಲದೇ ಓವರ್​ ಟೇಕ್​ ಮಾಡುವಾಗ ಬೈಕ್​ಗೆ ಟಚ್​ ಆಗಿದೆ. ಇದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರು, ಸೋಮವಾರ (ಮೇ 28) ರಂದು ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಅಭಿಲಾಷ್ ಹಲ್ಲೆ ಮಾಡಿದ್ದರು.

ಅಭಿಲಾಷ್ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಭಿಲಾಷ್ ಮೇಲೆ ಹಲ್ಲೆ ಮಾಡುವುದನ್ನು ತಡೆಯಲು ಬಂದವರ ಮೇಲೂ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ. ಬಳಿಕ ಮುಸ್ಲಿಂ ಯುವಕರು ತಡರಾತ್ರಿ ಅಭಿಲಾಷ್ ಮಾವ ನಾಗೇಶ್ ಮನೆ ಬಳಿ ತೆರಳಿ ದಾಂಧಲೆ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ ನಾಗೇಶ್ ಪತ್ನಿ ರಶ್ಮಿ ಬಾಗಿಲು ಹಾಕಿಕೊಂಡರೂ ಬಿಡಿದ ಮುಸ್ಲಿಂ ಯುವಕರು, ಬಾಗಿಲು ಬಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿ, ದಾಂಧಲೆಯನ್ನು ತೀರ್ವಗೊಳಿಸಿದ್ದಾರೆ. ಘಟನೆಯಿಂದ ನಾಗೇಶ್​ ಕುಟುಂಬ ಆತಂಕದಲ್ಲಿದೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ನೇಹಾ, ಅಂಜಲಿ ಹತ್ಯೆ ನಂತರವೂ ಹೆಣ್ಮಕ್ಕಳಿಗಿಲ್ಲ ಸುರಕ್ಷತೆ; ಕವಿವಿ ಕ್ಯಾಂಪಸ್​ನಲ್ಲೇ ವಿದ್ಯಾರ್ಥಿನಿ ಭುಜಕ್ಕೆ ಹೊಡೆದು ಹೋದ ಯುವಕ

ಹಲ್ಲೆ ಖಂಡಿಸಿ ಪ್ರತಿಭಟನೆ

ಹಲ್ಲೆ ಖಂಡಿಸಿ ಬೆಳ್ಳೂರು ಗ್ರಾಮಸ್ಥರು ಬಿಜಿಎಸ್​ ಆಸ್ಪತ್ರೆಯಿಂದ ಪೊಲೀಸ್ ಠಾಣೆವರೆಗೆ ಪ್ರತಿಭಟನೆ ನಡೆಸಲಿದ್ದಾರೆ. ಈ ವೇಳೆ ಯಾವುದೆ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಪೊಲೀಸ್ ಠಾಣೆ, ಆಯಾಕಟ್ಟಿನ ಸ್ಥಳದಲ್ಲಿ 2 ಡಿಎಆರ್ ತುಕಡಿಯನ್ನು ನಿಯೋಜಿಸಲಾಗಿದೆ. ಮಂಡ್ಯ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಎನ್​.ಯತೀಶ್ ನೇತೃತ್ವದಲ್ಲಿ ಭದ್ರತೆ‌ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷೇತೆ ಇಲ್ಲ ಎಂಬ ವಿಪಕ್ಷಗಳ ಆರೋಪದ ಮಧ್ಯೆಯೇ ಈ ಘಟನೆ ನಡೆದಿದ್ದು, ಸರ್ಕಾರಕ್ಕೆ ತಲೆಬಿಸಿಯಾಗಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ, ಹಾವೇರಿಯಲ್ಲಿ ಮಹಿಳೆ ಮೇಲೆ ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರ ಆರೋಪ, ಹಾಗೂ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಕೊಲೆ ರಾಜ್ಯ ಸರ್ಕಾರದ ಬುಡ ಅಲುಗಾಡಿಸಿವೆ.  ಇದೀಗ ಮಂಡ್ಯದಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:48 am, Tue, 28 May 24

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ