ಮಂಡ್ಯ, ಮೇ 28: ನಾಗಮಂಗಲ (Nagmangala) ತಾಲೂಕಿನ ಬೆಳ್ಳೂರು (Bellur) ಗ್ರಾಮದಲ್ಲಿ ನಡೆದ ಹಿಂದೂ (Hindu) ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ (Muslim) ಯುವಕರು ಓರ್ವ ಮಹಿಳೆ ಮನೆ ಬಳಿ ದಾಂಧಲೆ, ನಡೆಸಿ ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.
ಶನಿವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಲಿ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಲ್ಲದೇ ಓವರ್ ಟೇಕ್ ಮಾಡುವಾಗ ಬೈಕ್ಗೆ ಟಚ್ ಆಗಿದೆ. ಇದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್ ಎಂಬುವರು ಪ್ರಶ್ನಿಸಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರು, ಸೋಮವಾರ (ಮೇ 28) ರಂದು ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಅಭಿಲಾಷ್ ಹಲ್ಲೆ ಮಾಡಿದ್ದರು.
ಅಭಿಲಾಷ್ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಭಿಲಾಷ್ ಮೇಲೆ ಹಲ್ಲೆ ಮಾಡುವುದನ್ನು ತಡೆಯಲು ಬಂದವರ ಮೇಲೂ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ. ಬಳಿಕ ಮುಸ್ಲಿಂ ಯುವಕರು ತಡರಾತ್ರಿ ಅಭಿಲಾಷ್ ಮಾವ ನಾಗೇಶ್ ಮನೆ ಬಳಿ ತೆರಳಿ ದಾಂಧಲೆ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ ನಾಗೇಶ್ ಪತ್ನಿ ರಶ್ಮಿ ಬಾಗಿಲು ಹಾಕಿಕೊಂಡರೂ ಬಿಡಿದ ಮುಸ್ಲಿಂ ಯುವಕರು, ಬಾಗಿಲು ಬಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿ, ದಾಂಧಲೆಯನ್ನು ತೀರ್ವಗೊಳಿಸಿದ್ದಾರೆ. ಘಟನೆಯಿಂದ ನಾಗೇಶ್ ಕುಟುಂಬ ಆತಂಕದಲ್ಲಿದೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ನೇಹಾ, ಅಂಜಲಿ ಹತ್ಯೆ ನಂತರವೂ ಹೆಣ್ಮಕ್ಕಳಿಗಿಲ್ಲ ಸುರಕ್ಷತೆ; ಕವಿವಿ ಕ್ಯಾಂಪಸ್ನಲ್ಲೇ ವಿದ್ಯಾರ್ಥಿನಿ ಭುಜಕ್ಕೆ ಹೊಡೆದು ಹೋದ ಯುವಕ
ಹಲ್ಲೆ ಖಂಡಿಸಿ ಬೆಳ್ಳೂರು ಗ್ರಾಮಸ್ಥರು ಬಿಜಿಎಸ್ ಆಸ್ಪತ್ರೆಯಿಂದ ಪೊಲೀಸ್ ಠಾಣೆವರೆಗೆ ಪ್ರತಿಭಟನೆ ನಡೆಸಲಿದ್ದಾರೆ. ಈ ವೇಳೆ ಯಾವುದೆ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಪೊಲೀಸ್ ಠಾಣೆ, ಆಯಾಕಟ್ಟಿನ ಸ್ಥಳದಲ್ಲಿ 2 ಡಿಎಆರ್ ತುಕಡಿಯನ್ನು ನಿಯೋಜಿಸಲಾಗಿದೆ. ಮಂಡ್ಯ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷೇತೆ ಇಲ್ಲ ಎಂಬ ವಿಪಕ್ಷಗಳ ಆರೋಪದ ಮಧ್ಯೆಯೇ ಈ ಘಟನೆ ನಡೆದಿದ್ದು, ಸರ್ಕಾರಕ್ಕೆ ತಲೆಬಿಸಿಯಾಗಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ, ಹಾವೇರಿಯಲ್ಲಿ ಮಹಿಳೆ ಮೇಲೆ ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರ ಆರೋಪ, ಹಾಗೂ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಕೊಲೆ ರಾಜ್ಯ ಸರ್ಕಾರದ ಬುಡ ಅಲುಗಾಡಿಸಿವೆ. ಇದೀಗ ಮಂಡ್ಯದಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:48 am, Tue, 28 May 24