AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ವಿದ್ಯಾರ್ಥಿನಿಗೆ 31 ಲಕ್ಷ ರೂ. ಪಂಗನಾಮ

ಲಿಂಗಾಯತ ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಕೆಲಸ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿನಿಗೆ ಮಕ್ಮಲ್ ಟೋಪಿ ಹಾಕಲಾಗಿದ ಆರೋಪಿ ಅರೆಸ್ಟ್

ಮಂಡ್ಯ: ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ವಿದ್ಯಾರ್ಥಿನಿಗೆ 31 ಲಕ್ಷ ರೂ. ಪಂಗನಾಮ
ಆರೋಪಿ ಮಧು ಮತ್ತು ಆರೋಪಿಯಿಂದ ವಶ ಪಡಿಸಿಕೊಳ್ಳಲಾದ ಹಣ
ಆಯೇಷಾ ಬಾನು
|

Updated on: Apr 06, 2023 | 12:48 PM

Share

ಮಂಡ್ಯ: ಮ್ಯಾಟ್ರಿಮೋನಿಯಲ್ಲಿ ವೈಯಕ್ತಿಕ ಮಾಹಿತಿ ಹಾಕುವವರೇ ಎಚ್ಚರ. ನಿಮ್ಮ ವೈಯಕ್ತಿಕ ದಾಖಲೆಯನ್ನ ಪಡೆದು ಸೈಬರ್ ಚೋರರು ವಂಚಿಸಲಿದ್ದಾರೆ. ಸಕ್ಕರೆ ನಾಡು ಮಂಡ್ಯದಲ್ಲಿ ದಿನದಿಂದ ದಿನಕ್ಕೆ ಸೈಬರ್ ಚೋರರ ಹಾವಳಿ ಹೆಚ್ಚಾಗುತ್ತಿದೆ. ಲಿಂಗಾಯತ ಮ್ಯಾಟ್ರಿಮೋನಿಯಲ್ಲಿ ಹಾಕಿದ್ದ ಪ್ರಫೈಲೆ ಡಿಟೇಲ್ಸ್ ತೆಗೆದುಕೊಂಡು ವಂಚನೆ ಮಾಡಲಾಗಿದೆ. ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಕೆಲಸ ಕೊಡಿಸುವುದಾಗಿ ವಿದ್ಯಾರ್ಥಿನಿಗೆ ಮಕ್ಮಲ್ ಟೋಪಿ ಹಾಕಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲಿಂಗಾಯತ್ ಮ್ಯಾಟ್ರಿಮೋನಿ.ಕಾಮ್ (lingayatmatrimony.com) ಮೂಲಕ ವೈಯಕ್ತಿಕ ದಾಖಲೆಯನ್ನ ಪಡೆದು ಮಂಡ್ಯ ಜಿಲ್ಲೆ ಮದ್ದೂರು ಮೂಲದ ಬಿದರಕೋಟೆ ಗ್ರಾಮದ ವಿದ್ಯಾರ್ಥಿನಿಗೆ ಪರಿಚಯವಾದ ವ್ಯಕ್ತಿ ಆಕೆಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಕೆಲಸ ಕೊಡಿಸುವುದಾಗಿ 31 ಲಕ್ಷದ 34 ಸಾವಿರದ 300 ರೂಪಾಯಿ ವಂಚನೆ ಮಾಡಿದ್ದಾನೆ. ಈ ಕುರಿತು ಮಂಡ್ಯದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೈಬರ್ ಚೋರನ ಬಂಧಿಸಿದ್ದಾರೆ. ಕೆಲಸ ಕೊಡಿಸುವುದಾಗಿ 31 ಲಕ್ಷ ಹಣ ವಂಚಿಸಿದ್ದ ಆರೋಪಿ ಮಧುನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ಬಂಧನದ ವೇಳೆ ಸ್ಪೋಟಕ ಸತ್ಯ ಬಯಲಾಗಿದೆ. ಮಂಡ್ಯ, ಮೈಸೂರು, ಕೆ.ಆರ್ ನಗರ, ಕಾಟನ್ ಪೇಟೆ, ಹರಿಹರದಲ್ಲಿಯೂ ಕೆಲಸ ಕೊಡಿಸುವುದಾಗಿ ಈತ ವಂಚಿಸಿಯುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮದುವೆಯಾದ ಒಂದೇ ವರ್ಷಕ್ಕೆ ಪತ್ನಿಯನ್ನು ಮನೆಯಿಂದ ದೂರವಿಟ್ಟ ಪತಿ; ಗಂಡನಿಗಾಗಿ ಧರಣಿ ಕುಳಿತ ಮಡದಿ

ಬಂಧಿತನಿಂದ 10 ಲಕ್ಷ ನಗದು, 2ಲಕ್ಷ 34 ಸಾವಿರ ಮೌಲ್ಯದ ಚಿನ್ನಾಭರಣ, 1ಲಕ್ಷ 30 ಸಾವಿರ ಮೌಲ್ಯದ ಐಫೋನ್, ಒಂದು ಪಲ್ಸರ್ ಬೈಕ್ ಜಪ್ತಿ ಮಾಡಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ವಿದ್ಯಾರ್ಥಿನಿ, ಕಳೆದ ಮಾ.29ರಂದು ಮಂಡ್ಯ ಸಿ.ಇ.ಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಾನು lingayatmatrimony.com ನಲ್ಲಿ ತನ್ನ ವೈಯಕ್ತಿಕ ವಿವರಗಳನ್ನು ದಾಖಲು ಮಾಡಿದ್ದೆ. ಇದರಿಂದ ವ್ಯಕ್ತಿಯೊಬ್ಬ ಪರಿಚಯವಾಗಿ ತನಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಲಸದ ಸಂಬಂಧ ಡಿ.ಡಿ.ತೆಗೆದುಕೊಳ್ಳಲು, ಸ್ಯಾಲರಿ ಖಾತೆ ಮಾಡಿಸಲು, ಮೊಬೈಲ್ ನಂಬರ್‌ಗೆ ಆಧಾರ್ ಲಿಂಕ್ ಮಾಡಿಸಲು, ಸೆಕ್ಯೂರಿಟಿ ಡಿಪಾಸಿಟ್ ಹಣ ಪಾವತಿಸಲು ಇತ್ಯಾದಿ ಕಾರಣಗಳನ್ನು ನೀಡಿ ಹಂತ ಹಂತವಾಗಿ ಫೋನ್‌, ಗೂಗಲ್‌ಪೇ ಹಾಗೂ ಇತರೆ ಆನ್‌ಲೈನ್‌ ಪೇಮಂಟ್ ಮುಖಾಂತರ ಆ ವ್ಯಕ್ತಿಯ ಹಾಗೂ ಆತನ ಪರಿಚಯಸ್ಥರು ಹಾಗೂ ಆತನ ಸ್ನೇಹಿತರ ಖಾತೆಗಳಿಗೆ ಒಟ್ಟು ₹ 31,34,300 ಗಳನ್ನು ಪಾವತಿಸಿಕೊಂಡು ಕೆಲಸ ಕೊಡಿಸದೇ ಮತ್ತು ಹಣ ವಾಪಸ್‌ ನೀಡದೆ ಮೋಸ ಮಾಡಿದ್ದಾರೆಂದು ದೂರು ದಾಖಲಿಸಿದ್ದರು. ಈ ದೂರಿನ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮತ್ತಷ್ಟು ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?