ಮಂಡ್ಯ: ವಂದೇ ಭಾರತ್ ರೈಲಿಗೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು

|

Updated on: May 17, 2023 | 7:39 AM

ಮಂಡ್ಯ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮಂಡ್ಯ: ವಂದೇ ಭಾರತ್ ರೈಲಿಗೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು
ವಂದೇ ಭಾರತ್ ಎಕ್ಸ್​ಪ್ರೆಸ್​
Image Credit source: The Hindu
Follow us on

ಮಂಡ್ಯ: ಸೋಮವಾರ ಮಂಡ್ಯ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ(Vande Bharat Express) ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೆಳಗ್ಗೆ 11.30ರ ಸುಮಾರಿಗೆ ಮಹಿಳೆ ಪ್ಲಾಟ್‌ಫಾರ್ಮ್ ನಂ 2ರ ಬಳಿ ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅತ್ಯಂತ ವೇಗದಲ್ಲಿ ನಿಲ್ದಾಣವನ್ನು ದಾಟಿತು. ರೈಲು ನಿಲ್ದಾಣದಲ್ಲಿದ್ದವರು ಕೂಗಿ ಮಹಿಳೆಯನ್ನು ಎಚ್ಚರಿಸಲು ಪ್ರಯತ್ನಿಸಿದರೂ ವೇಗವಾಗಿ ಬಂದ ರೈಲು ಆಕೆಯ ಮೇಲೆ ಹರಿದಿದೆ. ಈ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Mangaluru news: ಬೈಕಂಪಾಡಿಯಲ್ಲಿ ಗೂಡ್ಸ್​ ರೈಲಿಗೆ ಸಿಲುಕಿ 20 ಎಮ್ಮೆಗಳು ಸಾವು

ಮುಂಬೈ-ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯೋಗಿಕ ಸಂಚಾರ ಆರಂಭ

ಮುಂಬೈ-ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯೋಗ ಮೇ 16 ರಂದು ಆರಂಭವಾಗಿದ್ದು, ಶೀಘ್ರದಲ್ಲೇ ಈ ಮಾರ್ಗದಲ್ಲಿ ಸಂಚಾರ ಆರಂಭವಾಗಲಿದೆ. ಮುಂಬೈ ಪ್ರಸ್ತುತ ಮೂರು ವಂದೇ ಭಾರತ್ ರೈಲುಗಳನ್ನು ಹೊಂದಿದೆ. ಮುಂಬೈ ಸೆಂಟ್ರಲ್ – ಅಹಮದಾಬಾದ್ – ಗಾಂಧಿನಗರ ರಾಜಧಾನಿ; ಮುಂಬೈ – ಸಾಯಿನಗರ ಶಿರಡಿ, ಮತ್ತು ಮುಂಬೈ – ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು. ನಾಲ್ಕನೇ ವಂದೇ ಭಾರತ್ ಸೆಮಿ-ಹೈ-ಸ್ಪೀಡ್ ರೈಲು ಪ್ರಾಯೋಗಿಕ ಪರೀಕ್ಷೆ ಮುಗಿಯುತ್ತಿದ್ದಂತೆ ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ