AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ನಿಲ್ಲದ ಹೆಣ್ಣುಭ್ರೂಣ ಪತ್ತೆ, ಹತ್ಯೆ ದಂಧೆ: ಮಾವಿನಕೆರೆ ತೋಟದ ಮನೆಯಲ್ಲಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು

ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳ ಹೊರತಾಗಿಯೂ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣು ಭ್ರೂಣ ಪತ್ತೆ, ಹತ್ಯೆ ನಡೆಯುತ್ತಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಬಯಲಿಗೆಳೆದಿದ್ದಾರೆ.

ಮಂಡ್ಯದಲ್ಲಿ ನಿಲ್ಲದ ಹೆಣ್ಣುಭ್ರೂಣ ಪತ್ತೆ, ಹತ್ಯೆ ದಂಧೆ: ಮಾವಿನಕೆರೆ ತೋಟದ ಮನೆಯಲ್ಲಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು
ಆರೋಗ್ಯಾಧಿಕಾರಿಗಳ ದಾಳಿ (ಒಳ ಚಿತ್ರದಲ್ಲಿ ಬಂಧಿತ ಆರೋಪಿ ಧನಂಜಯ್)
ಪ್ರಶಾಂತ್​ ಬಿ.
| Edited By: |

Updated on: Aug 16, 2024 | 10:55 AM

Share

ಮಂಡ್ಯ, ಆಗಸ್ಟ್ 16: ಮಂಡ್ಯ ಜಿಲ್ಲೆಯಲ್ಲಿ ಹೆಣ್ಣುಭ್ರೂಣ ಪತ್ತೆ, ಹತ್ಯೆ ನಡೆಯುತ್ತಿರುವ ವಿಚಾರ ಕರ್ನಾಟಕದಾದ್ಯಂತ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪಾಂಡವಪುರ ಸರ್ಕಾರಿ ಹೆಲ್ತ್​​ ಕ್ವಾರ್ಟರ್ಸ್​ನಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಮೇ ತಿಂಗಳಲ್ಲಿ ಭಾರಿ ಸದ್ದು ಮಾಡಿತ್ತು. ಇದೀಗ ಆ ವಿಚಾರ ಸಂಬಂಧಿತ ಚರ್ಚೆ ತಣ್ಣಗಾಗುತ್ತಿರುವ ಹೊತ್ತಿನಲ್ಲಿಯೇ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಮಂಡ್ಯದ ಆಲೆಮನೆ, ಹೆಲ್ತ್ ಕ್ವಾರ್ಟರ್ಸ್​ ಬಳಿಕ ಇದೀಗ ತೋಟದ ಮನೆಯಲ್ಲೂ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಕೃತ್ಯ ನಡೆಯುತ್ತಿರುವುದು ಗೊತ್ತಾಗಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಭ್ರೂಣಲಿಂಗ ಪತ್ತೆ ಮಾಡುತ್ತಿದ್ದಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರಿಂದ ಆರೋಪಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಗುರುವಾರ ತಡ‌ರಾತ್ರಿ ಡಿಹೆಚ್​ಒ ಡಾ. ಮೋಹನ್ ‌ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಮನೆಯಲ್ಲಿ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಮಷಿನ್ ಪತ್ತೆಯಾಗಿದೆ. ಇದೇ ವೇಳೆ ಸ್ಥಳದಲ್ಲಿ‌ ಹಾಸನ ಮೂಲದ ಗರ್ಭಿಣಿಯೂ ಇದ್ದರು. ಭ್ರೂಣಲಿಂಗ ಪತ್ತೆಗಾಗಿ ಗರ್ಭಿಣಿಯನ್ನು ಕರೆತರಲಾಗಿತ್ತು. ಗರ್ಭಿಣಿ ಮೂರನೇ ಹೆಣ್ಣುಭ್ರೂಣ ಅಬಾರ್ಷನ್​ಗೆ ಬಂದಿದ್ದರು ಎಂಬುದೂ ಗೊತ್ತಾಗಿದೆ.

ಇದನ್ನೂ ಓದಿ: ಪಾಂಡವಪುರದಲ್ಲಿ ಭ್ರೂಣ ಹತ್ಯೆ ಕೇಸ್​ಗೆ ಆಘಾತಕಾರಿ ಟ್ವಿಸ್ಟ್​: ಮಂಡ್ಯ ಆಲೆಮನೆ ಆರೋಪಿ ಹಳೆ ಚಾಳಿ ಬಿಟ್ಟಿಲ್ಲ!

ಸದ್ಯ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಯಂತ್ರವನ್ನು ಸೀಜ್ ಮಾಡಿದ ಪೊಲೀಸರು, ಗರ್ಭಿಣಿಯ ಪತಿಯನ್ನು ಬಂಧಿಸಿದ್ದಾರೆ. ಸ್ಕ್ಯಾನಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ. ಮನೆ ಮಾಲೀಕ ಧನಂಜಯ್ ಆರೋಗ್ಯ ಇಲಾಖೆ ಗ್ರೂಪ್​ ಡಿ ಸಿಬ್ಬಂದಿ ಎನ್ನಲಾಗಿದೆ.

ಈ ಹಿಂದೆ ಮಂಡ್ಯದ ಆಲೆಮನೆ ಹಾಗೂ ಹೆಲ್ತ್ ಕ್ವಾರ್ಟರ್ಸ್​​​ನಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ದಂಧೆ ನಡೆಯುತ್ತಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು