ಅರ್ಚಕನ ಸಾವು ಕೇಸ್‌ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅರ್ಚಕ ಸಿದ್ದಲಿಂಗಪ್ಪ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿ ಶಾಲಿನಿ, ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರ ಹರೀಶ್ ಮತ್ತು ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿದ್ದಾಳೆ. ನಾಲೆಗೆ ಬಿಸಾಡಿದ್ದ ಮೃತದೇಹ ಪತ್ತೆಯಾದ ನಂತರ ಪೊಲೀಸರ ತನಿಖೆ ವೇಳೆ ಈ ಘೋರ ಕೃತ್ಯ ಬಯಲಾಗಿದೆ. ಪತ್ನಿ, ಪ್ರಿಯಕರ ಸೇರಿ ನಾಲ್ವರನ್ನು ಬಂಧಿಸಲಾಗಿದ್ದು, ಈ ಘಟನೆ ಮಂಡ್ಯದಲ್ಲಿ ಸಂಚಲನ ಮೂಡಿಸಿದೆ.

ಅರ್ಚಕನ ಸಾವು ಕೇಸ್‌ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
ಮಂಡ್ಯ ಕೊಲೆ
Edited By:

Updated on: Mar 11, 2026 | 9:35 AM

ಮಂಡ್ಯ, ಮಾ.11: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರ ಮತ್ತು ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲದಲ್ಲಿ ಬೆಳಕಿಗೆ ಬಂದಿದೆ. ಅರ್ಚಕ ಸಿದ್ದಲಿಂಗಪ್ಪ (46) ಹತ್ಯೆಯಾದ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಶಾಲಿನಿ, ಪ್ರಿಯಕರ ಹರೀಶ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಮಾ.6ರಂದು ಸಿಡಿಎಸ್ ನಾಲೆಯಲ್ಲಿ ಸಿದ್ದಲಿಂಗಪ್ಪ ಶವವಾಗಿ ಪತ್ತೆಯಾಗಿದ್ದರು. ಚಪ್ಪಲಿ ಸಿಕ್ಕ ಸ್ಥಳದಲ್ಲಿ ರಕ್ತದ ಕಲೆ ಇದ್ದ ಹಿನ್ನೆಲೆ ಪೊಲೀಸರಿಗೆ ಅನುಮಾನ ಮೂಡಿ ತನಿಖೆಯನ್ನು ಚುರುಕುಗೊಳಿಸಿದಾಗ ಪೊಲೀಸರಿಗೆ ಈ ಸತ್ಯ ಗೊತ್ತಾಗಿದೆ.

ಮರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ ಅವರ ಪತ್ನಿ ಶಾಲಿನಿ, ಇಬ್ಬರು ಮಕ್ಕಳಿದ್ದರು, ಸುಖದ ಜೀವನ ನಡೆಸುತ್ತಿರುವಾಗ, ಅದೇ ಗ್ರಾಮದ ಹರೀಶ್ ಎಂಬಾತನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಒಂದೂವರೆ ವರ್ಷದ ಹಿಂದೆ ಸಿದ್ದಲಿಂಗಪ್ಪನಿಗೆ ಈ ವಿಷಯ ತಿಳಿದು ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಆಗ ಪತ್ನಿಗೆ ಬುದ್ಧಿಮಾತು ಹೇಳಿ ಸರಿದಾರಿಗೆ ತರಲು ಪ್ರಯತ್ನಿಸಿದ್ದರು. ಆದರೆ ಪತ್ನಿ ಶಾಲಿನಿ ಮಾತ್ರ ತನ್ನ ಕಾಮದಾಟಕ್ಕೆ ಗಂಡ ಅಡ್ಡಿಯಾಗುತ್ತಿದ್ದಾನೆ ಎಂದು ಆತನನ್ನು ಮುಗಿಸಲು ಸ್ಕೆಚ್ ಹಾಕಿದ್ದಳು.

ಮಾರ್ಚ್ 6ರಂದು ಸಿದ್ದಲಿಂಗಪ್ಪ ಪೂಜೆಗಾಗಿ ಪಕ್ಕದ ಊರಿಗೆ ತೆರಳಿದ್ದಾಗ, ಶಾಲಿನಿ ತನ್ನ ಪ್ರಿಯಕರ ಹರೀಶ್‌ಗೆ ಮೆಸೇಜ್ ಮಾಡಿ ಪತಿಯ ಹೊರಗಡೆ ಹೋಗಿರುವ ಬಗ್ಗೆ ಮಾಹಿತಿ ನೀಡಿದ್ದಳು.ಸಿದ್ದಲಿಂಗಪ್ಪ ಪೂಜೆ ಮುಗಿಸಿ ಬೈಕ್‌ನಲ್ಲಿ ಮರಳಗಾಲದ ನಾಲೆ ಏರಿ ಮೇಲೆ ಬರುತ್ತಿದ್ದಾಗ, ಹರೀಶ್ ಮತ್ತು ಆತನ ಸ್ನೇಹಿತರಾದ ಸಂತೋಷ್ ಹಾಗೂ ಗಣೇಶ್ ಅಡ್ಡಗಟ್ಟಿದ್ದಾರೆ. ಸಿದ್ದಲಿಂಗಪ್ಪ ಅವರ ತಲೆಗೆ ದೊಣ್ಣೆಯಿಂದ ಬಲವಾಗಿ ಹೊಡೆದು ಹತ್ಯೆ ಮಾಡಿದ ಆರೋಪಿಗಳು, ಸಾಕ್ಷ್ಯ ನಾಶಪಡಿಸಲು ಮೃತದೇಹ ಮತ್ತು ಬೈಕ್ ಅನ್ನು ಸಿಡಿಎಸ್ (CDS) ನಾಲೆಗೆ ಬಿಸಾಡಿ ಎಸ್ಕೇಪ್ ಆಗಿದ್ದರು.

ಇದನ್ನೂ ಓದಿ: ಗ್ರಾಹಕರ ಗಮನಕ್ಕೆ… ಬೆಂಗಳೂರಿನಲ್ಲಿ ಇನ್ಮುಂದೆ ಸಿಗಲ್ಲ ವಡೆ, ಬಜ್ಜಿ, ಪಕೋಡ: ಸ್ನ್ಯಾಕ್ಸ್ ತಿಂಡಿಗೂ ಕೋಕ್

ನಾಲೆ ದಡದಲ್ಲಿ ಸಿದ್ದಲಿಂಗಪ್ಪನ ಚಪ್ಪಲಿ ಮತ್ತು ಬಟ್ಟೆ ಪತ್ತೆಯಾದಾಗ ರಕ್ತದ ಕಲೆಗಳು ಕಂಡುಬಂದಿದ್ದವು. ಇದು ಕೇವಲ ಅಪಘಾತವಲ್ಲ, ಹತ್ಯೆ ಎಂಬ ಸಂಶಯಗೊಂಡ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ತನಿಖೆ ತೀವ್ರಗೊಳಿಸಿದಾಗ ಶಾಲಿನಿಯ ಅಕ್ರಮ ಸಂಬಂಧದ ವಿಷಯ ಬಯಲಾಗಿದೆ. ಈ ಬಗ್ಗೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳು ಕೃತ್ಯ ಒಪ್ಪಿಕೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Loading...
Unable to load recommendations.
Follow Us