AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ – ರಾಮನಗರ ಕೆಡಿಪಿ ಸಭೆ: “ಅದೇನು ಲವ್ ಲೆಟರಾ 7 ನೋಟೀಸ್ ಕೊಟ್ಟಿದ್ದೀರಾ?”; ಅಧಿಕಾರಿಗಳಿಗೆ ಕ್ಲಾಸ್​​ ತೆಗೆದುಕೊಂಡ ಸಚಿವ

ಮಂಡ್ಯ ಮತ್ತು ರಾಮನಗರ ಕೆಡಿಪಿ ಸಭೆಗಳಲ್ಲಿ ಕಾಮಗಾರಿ ವಿಳಂಬಕ್ಕೆ ಜನಪ್ರತಿನಿಧಿಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. NHAI ಅಧಿಕಾರಿಗೆ ಗಣಿಗ ರವಿಕುಮಾರ್ ಕ್ರಿಮಿನಲ್ ಕೇಸ್ ಎಚ್ಚರಿಕೆ ನೀಡಿದರೆ, ರಾಮನಗರ PWD EEಗೆ ಸಚಿವ ಬಾಲಕೃಷ್ಣ, ಇಕ್ಬಾಲ್ ಹುಸೇನ್ ಕ್ಲಾಸ್ ತೆಗೆದುಕೊಂಡರು. ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್​​​​​ ಮೋದಿಗೆ ಪತ್ರ ಬರೆಯುತ್ತೇವೆ. ಈ ಬಗ್ಗೆ ಕೇಂದ್ರದ ಗಮನಕ್ಕೆ ತರುತ್ತೇವೆ ಎಂದು ಗುಡುಗಿದ್ದಾರೆ. ಮತ್ತೊಂದು ರಾಮನಗರದಲ್ಲೂ ಕೂಡ ಅಧಿಕಾರಿಗಳಿಗೆ ಸಚಿವರು ಸಖತ್​​ ಕ್ಲಾಸ್​​​ ತೆಗೆದುಕೊಂಡಿದ್ದಾರೆ.

ಮಂಡ್ಯ - ರಾಮನಗರ ಕೆಡಿಪಿ ಸಭೆ: ಅದೇನು ಲವ್ ಲೆಟರಾ 7 ನೋಟೀಸ್ ಕೊಟ್ಟಿದ್ದೀರಾ?; ಅಧಿಕಾರಿಗಳಿಗೆ ಕ್ಲಾಸ್​​ ತೆಗೆದುಕೊಂಡ ಸಚಿವ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 24, 2026 | 2:50 PM

Share

ಮಂಡ್ಯ, ನ,24: ಕಾಮಗಾರಿಗಳ ವಿಳಂಬ ಮತ್ತು ಕಳಪೆ ಗುಣಮಟ್ಟದ ವಿಚಾರವಾಗಿ ಇಂದು (ಮಂಗಳವಾರ) ನಡೆದ ಮಂಡ್ಯ ಹಾಗೂ ರಾಮನಗರ ಜಿಲ್ಲಾ ಪಂಚಾಯಿತಿ ಕೆಡಿಪಿ (KDP) ಸಭೆಗಳಲ್ಲಿ ಜನಪ್ರತಿನಿಧಿಗಳು ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಅಧಿಕಾರಿಗೆ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿದರೆ, ರಾಮನಗರದಲ್ಲಿ ಸಚಿವ ಎಚ್.ಸಿ. ಬಾಲಕೃಷ್ಣ ಹಾಗೂ ಶಾಸಕ ಇಕ್ಬಾಲ್ ಹುಸೇನ್ ಅವರು ಪಿಡಬ್ಲ್ಯೂಡಿ (PWD) ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಮಂಡ್ಯ ಕೆಡಿಪಿ ಸಭೆ: “ಮೋದಿಗೆ ಪತ್ರ ಬರೆಯುತ್ತೇನೆ, ಕ್ರಿಮಿನಲ್ ಕೇಸ್ ಹಾಕ್ತೀನಿ

ಮಂಡ್ಯದ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕಳಪೆ ಹೆದ್ದಾರಿ ಕಾಮಗಾರಿ ವಿರುದ್ಧ ಮಂಡ್ಯ ಶಾಸಕ ಗಣಿಗ ರವಿಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯ ನಗರದ ಹೆದ್ದಾರಿಯಲ್ಲಿ ಫುಟ್‌ಪಾತ್ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿದ್ದರೂ ಗುತ್ತಿಗೆದಾರನಿಗೆ ಹಣ ಪಾವತಿ ಮಾಡಿರುವುದನ್ನು ಪ್ರಶ್ನಿಸಿ NHAI ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಈ ಅವ್ಯವಹಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರಿಗೆ ಪತ್ರ ಬರೆಯುವುದಾಗಿ ಎಚ್ಚರಿಸಿದ ಶಾಸಕರು, ಕೂಡಲೇ ಕ್ರಮ ಕೈಗೊಂಡು ಕಾಮಗಾರಿ ಮುಗಿಸದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಗುಡುಗಿದರು. ಶಾಸಕರ ತರಾಟೆಗೆ ಬೆದರಿದ ಅಧಿಕಾರಿ ಈ ವರ್ಷದ ಡಿಸೆಂಬರ್‌ವರೆಗೆ ಕಾಲಾವಕಾಶ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ರವಿಕುಮಾರ್, “ಡಿಸೆಂಬರ್ ವೇಳೆಗೆ ಕಾಮಗಾರಿ ಮುಗಿಸದಿದ್ದರೆ ಖಂಡಿತ ಕ್ರಿಮಿನಲ್ ಕೇಸ್ ದಾಖಲಿಸುತ್ತೇನೆ” ಎಂದು ಖಡಕ್ ಗಡುವು ನೀಡಿದ್ದಾರೆ.’

ಇದನ್ನೂ ಓದಿ: ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ!

ರಾಮನಗರ ಕೆಡಿಪಿ ಸಭೆ: “ಅದೇನು ಲವ್ ಲೆಟರಾ 7 ನೋಟೀಸ್ ಕೊಟ್ಟಿದ್ದೀರಾ?”

ಮತ್ತೊಂದೆಡೆ ರಾಮನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಹಾರೋಹಳ್ಳಿ ರಸ್ತೆ ಕಾಮಗಾರಿ ಎರಡು ವರ್ಷಗಳಿಂದ ವಿಳಂಬವಾಗಿರುವ ವಿಚಾರ ಭಾರಿ ಸದ್ದು ಮಾಡಿತು. ರಾಮನಗರ ವಿಭಾಗದ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರಪ್ಪ ಅವರನ್ನು ಸಚಿವ ಎಚ್.ಸಿ. ಬಾಲಕೃಷ್ಣ ಹಾಗೂ ಶಾಸಕ ಇಕ್ಬಾಲ್ ಹುಸೇನ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. “ನಿಮ್ಮ ಮಾತು ಸರಿಯಿಲ್ಲ, ನಿವೃತ್ತಿ ಸಮಯದಲ್ಲಿದ್ದೀರಿ. ಸುಮ್ಮನೆ ಕಾರಣಗಳನ್ನು ಹೇಳಬೇಡಿ, ಯಾವಾಗ ಗಂಡಸು ಆಗೋದು? ನೀವು ಹಿರಿಯ ಅಧಿಕಾರಿ, ಯಾವುದಾದರೂ ಪಕ್ಷಕ್ಕೆ ಸೀಮಿತವಾಗಿದ್ದೀರಾ?” ಎಂದು ಇಕ್ಬಾಲ್ ಹುಸೇನ್ ಕಿಡಿಕಾರಿದರು. ಗುತ್ತಿಗೆದಾರರಿಗೆ ಎಷ್ಟು ನೋಟೀಸ್ ಕೊಟ್ಟಿದ್ದೀರಾ ಎಂದು ಸಚಿವ ಬಾಲಕೃಷ್ಣ ಪ್ರಶ್ನಿಸಿದಾಗ, “ಏಳು ನೋಟೀಸ್ ಕೊಟ್ಟಿದ್ದೇವೆ” ಎಂದು ಇಇ ಶಂಕರಪ್ಪ ಉತ್ತರಿಸಿದರು. ಇದರಿಂದ ಮತ್ತಷ್ಟು ಕೆರಳಿದ ಸಚಿವರು, “ಅದೇನು ಲವ್ ಲೆಟರಾ ಏಳು ನೋಟೀಸ್ ಕೊಟ್ಟಿದ್ದೀರಾ? ರಸ್ತೆ ಕಾಮಗಾರಿ ಮಾಡದೇ ಇದ್ದರೆ ಕಠಿಣ ಕ್ರಮ ತೆಗೆದುಕೊಳ್ಳಿ, ಇಲ್ಲವಾದರೆ ನಾನು ಸುಮ್ಮನೆ ಇರಲ್ಲ” ಎಂದು ಎಚ್ಚರಿಕೆ ನೀಡಿದರು. ಸಚಿವರು ಹಾಗೂ ಶಾಸಕರ ಸರಣಿ ಪ್ರಶ್ನೆಗಳಿಗೆ ಅಧಿಕಾರಿ ತಬ್ಬಿಬ್ಬಾದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?