Tuition centers: ಟ್ಯೂಷನ್ ಬಾಲಕಿ ರೇಪ್ ಮರ್ಡರ್ ಪ್ರಕರಣ: ಎಚ್ಚೆತ್ತ ಮಂಡ್ಯ ಶಿಕ್ಷಣ ಇಲಾಖೆಯಿಂದ ಖಡಕ್ ನಿಯಮ ಜಾರಿ
Mandya DDPI: ಮಂಡ್ಯ ಜಿಲ್ಲೆಯಾದ್ಯಂತ ಅಕ್ರಮ ಟ್ಯೂಷನ್ ಸೆಂಟರ್ ಪತ್ತೆಗೆ ಸುತ್ತೋಲೆ ಹೊರಡಿಸಿರುವ ಡಿಡಿಪಿಐ, ಅನಧಿಕೃತ ಟ್ಯೂಷನ್ ಕಂಡು ಬಂದ್ರೆ ತಕ್ಷಣವೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.
ಮಂಡ್ಯ: ಟ್ಯೂಷನ್‌ಗೆ ಹೋದ ಬಾಲಕಿಯ ರೇಪ್ ಅಂಡ್ ಮರ್ಡರ್ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಮಂಡ್ಯ ಶಿಕ್ಷಣ ಇಲಾಖೆಯು ಅನಧಿಕೃತ ಟ್ಯೂಷನ್ ಗಳ ಮೇಲೆ ಹದ್ದಿನ ಕಣ್ಣಿಡಲು ಮುಂದಾಗಿದೆ. ಅನುಮತಿ ಪಡೆಯದೆ ಟ್ಯೂಷನ್ ನಡೆಸಿದರೆ ಕೇಸ್ ಬೀಳುತ್ತೆ ಎಂದು ಮಂಡ್ಯದಲ್ಲಿ ಡಿಡಿಪಿಐ (Mandya DDPI) ಜವರೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಟ್ಯೂಷನ್ ಗೆ ತೆರಳಿದ್ದ 10 ವರ್ಷದ ಬಾಲಕಿ ಮೇಲೆ ನಡೆದಿದ್ದ ರೇಪ್ ಅಂಡ್ ಮರ್ಡರ್ ಪ್ರಕರಣದಲ್ಲಿ (Mandya Rape and Murder Case) ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸಂಸ್ಥೆಯ ಮೇಲ್ವಿಚಾರಕನಿಂದಲೆ ಪೈಶಾಚಿಕ ಕೃತ್ಯ ನಡೆದಿತ್ತು. ಅದು ಅನಧಿಕೃತವಾಗಿ ನಡೆಯುತ್ತಿದ್ದ ಟ್ಯೂಷನ್ ಸೆಂಟರ್ (Tuition center) ಆಗಿತ್ತು. ಮಂಡ್ಯ ಜಿಲ್ಲೆಯಾದ್ಯಂತ ಅಕ್ರಮ ಟ್ಯೂಷನ್ ಸೆಂಟರ್ ಪತ್ತೆಗೆ ಸುತ್ತೋಲೆ ಹೊರಡಿಸಿರುವ ಡಿಡಿಪಿಐ, ಅನಧಿಕೃತ ಟ್ಯೂಷನ್ ಕಂಡು ಬಂದ್ರೆ ತಕ್ಷಣವೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದ್ರೆ ಶಿಸ್ತುಕ್ರಮಕ್ಕೆ ಒಳಗಾಗುತ್ತಾರೆ. ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಶಿಕ್ಷಣ ಇಲಾಖೆ ಈ ಎಚ್ಚರಿಕೆಯ ಕ್ರಮಕ್ಕೆ ಮುಂದಾಗಿದೆ.
Published On - 12:32 pm, Tue, 18 October 22