AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಜನ್ಮಕೊಟ್ಟ ತಂದೆಗೆ ಖೆಡ್ಡಾ ತೋಡಲು ಹೋಗಿ ತಾನೇ ಬಲೆಗೆ ಬಿದ್ದ ಕುಲಪುತ್ರ!

ಮಂಡ್ಯದ ರಿಯಲ್ ಎಸ್ಟೇಟ್ ಉದ್ಯಮಿ ತಂದೆಗೆ ಮಗನಿಂದಲೇ ಬ್ಲ್ಯಾಕ್‌ಮೇಲ್ ಮಾಡಲಾಗಿದ್ದು, ವಾಟ್ಸಾಪ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ತಂದೆ ದೂರಿನ ಆಧಾರದ ಮೇಲೆ ಮಗ ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ದಾಖಲಾಗಿದೆ.

ಮಂಡ್ಯ: ಜನ್ಮಕೊಟ್ಟ ತಂದೆಗೆ ಖೆಡ್ಡಾ ತೋಡಲು ಹೋಗಿ ತಾನೇ ಬಲೆಗೆ ಬಿದ್ದ ಕುಲಪುತ್ರ!
ಪ್ರಾತಿನಿಧಿಕ ಚಿತ್ರ
ದಿಲೀಪ್​, ಚೌಡಹಳ್ಳಿ
| Edited By: |

Updated on:Sep 04, 2025 | 12:11 PM

Share

ಮಂಡ್ಯ, ಸೆಪ್ಟೆಂಬರ್​ 04: ಸಕ್ಕರೆನಾಡು ಮಂಡ್ಯದಲ್ಲೊಂದು (Mandya) ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಆಸ್ತಿಗಾಗಿ ಮಗನಿಂದಲೇ ತಂದೆಗೆ ಬ್ಲ್ಯಾಕ್​ಮೇಲ್​​ (Blackmail) ಮಾಡಿರುವಂತಹ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮಗನ ವಿರುದ್ದ ರೊಚ್ಚಿಗೆದ್ದ ತಂದೆ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಬೆದರಿಕೆ ಹಾಕಿದ ಆರೋಪಿ ಮಗನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ದಾಖಲಾಗಿದೆ.

ನಡೆದದ್ದೇನು?

ಸತೀಶ್​​ ಎಂಬುವವರು ರಾಜ್ಯದ ಹಲವೆಡೆ ರಾಣಿ ಐಶ್ವರ್ಯ ಡೆವಲಪರ್ಸ್ ಹೆಸರಲ್ಲಿ ರಿಯಲ್ ಎಸ್ಟೇಟ್ ಉದ್ಯಮ​ ಮಾಡುತ್ತಾರೆ. ಇವರ ಮಗನೇ ಪ್ರಣವ್ (25). ಈಗಾಗಲೇ ತಂದೆಯ ಕೋಟ್ಯಾಂತರ ರೂ. ಕಳೆದು ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದ. ಆದರೆ ಯಾವಾಗ ತಂದೆ ಹಣ ಕೊಡಲಿಲ್ಲವೋ ಬುದ್ದಿ ಕಲಿಸಲು ಮುಂದಾಗಿದ್ದ.

ಇದನ್ನೂ ಓದಿ: ಗದಗ: ಮಾಜಿ ಪ್ರೇಮಿಯಿಂದ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್, ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ

ಅದಕ್ಕಾಗಿ ಕೆಲವರ ಜೊತೆ ಸೇರಿ ಅಪ್ಪನಿಗೆ ಖೆಡ್ಡಾ ತೋಡಿದ್ದ. ಅಷ್ಟಕ್ಕೂ ಮಗ ಮಾಡಿದ್ದಾದರೂ ಏನು ಎಂದರೆ, ತನ್ನ ತಂದೆಯ ಭಾವಚಿತ್ರಕ್ಕೆ ಅಶ್ಲೀಲ ಚಿತ್ರ ಹಾಗೂ ವಾಯ್ಸ್ ಎಡಿಟ್ ಮಾಡಿ ವಾಟ್ಸಾಪ್ ಗ್ರೂಪ್​​ಗೆ ಹಾಕಿ, ಹಣಕ್ಕೆ ಬೇಡಿಕೆ ಇಟ್ಟಿದ್ದ. ತಮ್ಮ ಮಗನ ವಿರುದ್ಧ ತಂದೆ ಬ್ಲ್ಯಾಕ್​ಮೇಲ್ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ವಿದೇಶಿ ಸಿಮ್ ಬಳಸಿ ತರಕಾರಿ ವ್ಯಾಪಾರಿಗೆ ಕರೆ ಮಾಡಿ ಮಗಳ ಅಶ್ಲೀಲ ಫೋಟೋ ಹರಿಬಿಡುವುದಾಗಿ ಬೆದರಿಕೆ

ದುಶ್ಚಟಗಳಿಗೆ ಬಲಿಯಾಗಿ ವಿರೋಧಿಗಳ ಜೊತೆ ಸೇರಿ ಆಸ್ತಿಗಾಗಿ ಜನ್ಮಕೊಟ್ಟ ತಂದೆಯನ್ನೇ ಟ್ರ್ಯಾಪ್ ಮಾಡಲು ಹೋಗಿ ಕೊನೆಗೆ ತಾನೇ ಹಳ್ಳಕ್ಕೆ ಬಿದಿದ್ದಾನೆ. ತನ್ನ ಮಗನಿಗೆ ಪ್ರಚೋದಿಸಿದವರು ಸೇರಿ ಮಗನ ವಿರುದ್ಧ ಮದ್ದೂರು ಪೊಲೀಸರಿಗೆ ತಂದೆ ದೂರು ನೀಡಿದ್ದು, ಅವರ ದೂರಿನ ಮೇರೆಗೆ ಆರೋಪಿಗಳಾದ ಮಗ ಪ್ರಣವ್, ಮಹೇಶ್​​, ಈಶ್ವರ್, ಪ್ರೀತಮ್​​ ಎಂಬುವವರನ್ನು ಬಂಧಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:07 pm, Thu, 4 September 25

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್