AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya: ಮಂಡ್ಯ ಎಸ್​ಪಿ ಹುದ್ದೆ ಹರಾಜಿಗಿದೆ; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ಹರಾಜಿಗಿದೆ, ಹೆಚ್ಚು ಬಿಡ್​​​ ಕೂಗಿದವರನ್ನು ಸರ್ಕಾರ ನೇಮಿಸಲಿದೆ ಎಂಬ ಪೋಸ್ಟ್​ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Mandya: ಮಂಡ್ಯ ಎಸ್​ಪಿ ಹುದ್ದೆ ಹರಾಜಿಗಿದೆ; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್
ಮಂಡ್ಯ ಎಸ್​ಪಿ ಸುಮನ್ ಪನ್ನೇಕರ್
TV9 Web
| Edited By: |

Updated on:Oct 28, 2021 | 5:26 PM

Share

ಮಂಡ್ಯ: ಮಂಡ್ಯದ ಮಹಿಳಾ ಎಸ್​ಪಿ ನೇಮಕಾತಿ ವಿವಾದ ಇನ್ನೂ ಬಗೆಹರಿದಿಲ್ಲ. ದಿನದಿಂದ ದಿನಕ್ಕೆ ಈ ಪ್ರಕರಣದಲ್ಲಿ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ರಾಜಕೀಯ ಒತ್ತಡದಿಂದ ಮಂಡ್ಯದ ನೂತನ ಮಹಿಳಾ ಎಸ್​ಪಿ ಸುಮನ್ ಡಿ. ಪನ್ನೇಕರ್ ಅಧಿಕಾರ ವಹಿಸಿಕೊಳ್ಳದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಕಳೆದ 1 ವಾರದಿಂದ ಮಂಡ್ಯ ಎಸ್​ಪಿ ಸ್ಥಾನ ಖಾಲಿಯಿದೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಮಂಡ್ಯ ಎಸ್​ಪಿ ಅಧಿಕಾರ ಸ್ವೀಕರಿಸಲು ಯಾವುದೇ ಅಡ್ಡಿಯಿಲ್ಲ ಎಂದಿದ್ದಾರೆ.

ಮಂಡ್ಯ ಎಸ್​ಪಿ ನೇಮಕ ವಿಚಾರದಲ್ಲಿ ಯಾವುದೇ ಒತ್ತಡವಿಲ್ಲ. ಅನೇಕ ಪೊಲೀಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ. ಅವರಿಗೆ ಡ್ಯೂಟಿಗೆ ರಿಪೋರ್ಟ್ ಮಾಡಿಕೊಳ್ಳುವುದಕ್ಕೆ ಸಮಯ ಇರುತ್ತದೆ. ಮಂಡ್ಯ ಎಸ್​ಪಿ ಸುಮನ್ ಪನ್ನೇಕರ್ ಅಧಿಕಾರ ಸ್ವೀಕರಿಸಲು ಯಾವುದೇ ತಡೆಯಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇನ್ನು, ಸಾಮಾಜಿಕ ಜಾಲತಾಣಗಳಲ್ಲಿ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ಹರಾಜಿಗಿದೆ, ಹೆಚ್ಚು ಬಿಡ್​​​ ಕೂಗಿದವರನ್ನು ಸರ್ಕಾರ ನೇಮಿಸಲಿದೆ ಎಂಬ ಪೋಸ್ಟ್​ಗಳು ಹರಿದಾಡುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಕ್ಕು ಹೋರಾಟಗಾರ ರವೀಂದ್ರ ಈ ಪೋಸ್ಟ್​ ಹಾಕಿದ್ದು, ಮಂಡ್ಯ ಎಸ್​ಪಿ ಹುದ್ದೆ ಒಂದು ವಾರದಿಂದ ಖಾಲಿಯಿದೆ. ಭ್ರಷ್ಟ ಐಪಿಎಸ್​, KSPS ಅಧಿಕಾರಿಗಳಿಗೆ ಸುವರ್ಣಾವಕಾಶ ಸಿಕ್ಕಂತಾಗಿದೆ. ಹೆಚ್ಚು ಬಿಡ್​ ಕೂಗಿದವರಿಗೆ ಸರ್ಕಾರ ಎಸ್​ಪಿ ಹುದ್ದೆ ನೀಡುತ್ತದಾ? ಎಂದು ಪ್ರಶ್ನೆ ಹಾಕಿದ್ದಾರೆ.

ಅ. 20ರಂದು ಮಂಡ್ಯ ಎಸ್​ಪಿ ಡಾ.ಎಂ. ಅಶ್ವಿನಿ ಅವರನ್ನು ವರ್ಗಾವಣೆಗೊಳಿಸಿದ್ದ ಸರ್ಕಾರ ಆ ಜಾಗಕ್ಕೆ ಸುಮನ್ ಡಿ. ಪನ್ನೇಕರ್​ ಅವರನ್ನು ನೇಮಕ ಮಾಡಿತ್ತು. ಆದರೆ, ಸುಮನ್ ಡಿ. ಪನ್ನೇಕರ್​ ಅವರಿಗೆ ಎಸ್​ಪಿ ಆಗಿ ಚಾರ್ಜ್​ ತೆಗೆದುಕೊಳ್ಳದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಮೌಖಿಕ ಆದೇಶ ನೀಡಿದ್ದರು. ಇದರಿಂದ ಕಳೆದ 1 ವಾರದಿಂದ ಖಾಲಿಯಿರುವ ಮಂಡ್ಯ ಎಸ್​ಪಿ ಹುದ್ದೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರವೀಂದ್ರ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಮಂಡ್ಯಕ್ಕೆ ಎಸ್​​ಪಿ ಇಲ್ಲಾ! ರಾಯಚೂರು ಜಿಲ್ಲೆಗೆ ಜಿಲ್ಲಾಧಿಕಾರಿ ಇಲ್ಲ: ಪ್ರಭಾವಿ ರಾಜಕಾರಣಿಗಳ ಮೇಲುಗೈ

ಎಲೆಕ್ಷನ್ ಬ್ಯುಸಿಯಲ್ಲಿರುವ ಸರ್ಕಾರಿ ಆಡಳಿತ ಯಂತ್ರ: ಬಗೆಹರಿದಿಲ್ಲ ಮಂಡ್ಯ ಎಸ್ಪಿ ನೇಮಕ, ವಿವಾದ ಸೀದಾ ರಾಜ್ಯಪಾಲರ ಅಂಗಳಕ್ಕೆ

Published On - 5:22 pm, Thu, 28 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ