ಶ್ರೀರಂಗಪಟ್ಟಣ ತಾಲೂಕಿನಲ್ಲಿ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಸಬ್ಬನಕುಪ್ಪೆ ಗ್ರಾಮದ ಜನರು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸಬ್ಬನಕುಪ್ಪೆ ಗ್ರಾಮದಲ್ಲಿ ಪದೇಪದೇ ಪ್ರತ್ಯಕ್ಷಗೊಂಡು ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ.

ಶ್ರೀರಂಗಪಟ್ಟಣ ತಾಲೂಕಿನಲ್ಲಿ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಸಬ್ಬನಕುಪ್ಪೆ ಗ್ರಾಮದ ಜನರು
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಬೋನಿಗೆ ಬಿದ್ದ ಚಿರತೆ
Follow us
TV9 Web
| Updated By: Rakesh Nayak Manchi

Updated on:Jan 05, 2023 | 10:27 AM

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಸಬ್ಬನಕುಪ್ಪೆ ಗ್ರಾಮದ ಜನರನ್ನು ಬಿಟ್ಟುಬಿಡದೆ ಕಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿನೊಳಗೆ ಸೆರೆಸಿಕ್ಕಿದೆ (Leopard falls into cage). ಸಬ್ಬನಕುಪ್ಪೆ ವ್ಯಾಪ್ತಿಯಲ್ಲಿ ಚಿರತೆ ಆಗಾಗ್ಗೆ ಕಾಣಿಸಕೊಳ್ಳುತ್ತಿತ್ತು. ಇದರಿಂದಾಗಿ ಭೀತಿಗೊಂಡ ಜನರು ಚಿರತೆ ಸೆರೆಗೆ ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದರು. ಅದರಂತೆ ಸಬ್ಬನಕುಪ್ಪೆ ನಿವಾಸಿ ಬಾಲು ಎಂಬುವವರ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದರು. ಇಂದು ಬೆಳಿಗ್ಗೆ ಆಹಾರ ಅರಸಿಕೊಂಡು ಜಮೀನಿಗೆ ಬಂದ ಚಿರತೆ ಬೋನಿನೊಳಗಿದ್ದ ಅದರ ಆಹಾರ ತಿನ್ನಲು ಹೋಗಿ ಸೆರೆಯಾಗಿದೆ.

ಚಿರತೆ ಬೋನಿಗೆ ಬಿದ್ದ ಮಾಹಿತಿ ತಿಳಿಯುತ್ತಿದ್ದಂತೆ ನಿಟ್ಟುಸಿರು ಬಿಟ್ಟ ಸಬ್ಬನಕುಪ್ಪೆ ಗ್ರಾಮದ ಜನರು ಚಿರತೆ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇನ್ನೊಂದೆಡೆ ಚಿರತೆ ಬೋನಿಗೆ ಬಿದ್ದ ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಸೆರೆಯಾದ ಚಿರತೆಯನ್ನ ದೂರದ ಅರಣ್ಯಕ್ಕೆ ಬಿಡಲು ನಿರ್ಧಾರಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಕೇಂದ್ರ ಆಹಾರ ಸಂಶೋಧ‌ನಾಲಯದ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಶಾಲೆಗೆ ರಜೆ ಘೋಷಣೆ

ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲೂ ಚಿರತೆ ಭೀತಿ ಇದ್ದು, ಈ ಹಿಂದೆ ಬ್ಲಫ್ ಬಳಿ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿತ್ತು. ತಾಲೂಕಿನಲ್ಲಿ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಸಹಜವಾಗಿ ಜನರಲ್ಲಿನ ಆತಂಕವನ್ನು ಹೆಚ್ಚಿಸಿದೆ. ಮಳವಳ್ಳಿ ತಾಲೂಕಿನ ಬ್ಲಫ್ ಬಳಿಯ ನಂಜಪ್ಪ ಎಂಬುವವರು ಸಾಕಿದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿತ್ತು. ಗ್ರಾಮದಲ್ಲಿ ಕತ್ತಲಾದರೆ ಸಾಕು ಜನರು ಒಂಟಿಯಾಗಿ ಓಡಾಡಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ.

ಇದಕ್ಕೂ ಮುನ್ನ ಕೆ.ಆರ್​.ಪೇಟೆ ತಾಲೂಕಿನ ಚಟ್ಟಂಗೆರೆಯಲ್ಲೂ ಚಿರತೆ ಕಾಣಿಸಿಕೊಂಡಿತ್ತು. ಗ್ರಾಮದ ಸುತ್ತಮುತ್ತ ಹಲವು ಬಾರಿ ಕಾಣಿಸಿಕೊಂಡಿದ್ದ ಚಿರತೆ ಮನೆ ಮುಂದೆ ಕಟ್ಟಿ ಹಾಕಿದ್ದ ಶ್ವಾನವನ್ನು ಕಚ್ಚಿ ಎಳೆದು ಕೊಂಡು ಹೋಗಿತ್ತು. ಇದರ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಚಿರತೆ ದಾಳಿಯಿಂದ ಕಂಗೆಟ್ಟ ಚಟ್ಟಂಗೆರೆ ಗ್ರಾಮಸ್ಥರು, ಬೋನ್ ಇಟ್ಟು ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:27 am, Thu, 5 January 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್