ಜಿಲ್ಲಾಧಿಕಾರಿ ಆದೇಶವಿದ್ದರೂ ಕೊರೊನಾ ನಿಯಮಗಳ ಗಾಳಿಗೆ ತೂರಿ ತಹಶೀಲ್ದಾರ್ ಮಗನ ಭರ್ಜರಿ ಪಾರ್ಟಿ
ನೂರಾರು ಜನರ ಸಮ್ಮುಖದಲ್ಲಿ ಮಂಡ್ಯ ತಹಶೀಲ್ದಾರ್ ಚಂದ್ರಶೇಖರ ಶಂಗಾಳಿ ಅವರ ಮಗನ ಹುಟ್ಟುಹಬ್ಬವನ್ನು ಆಚರಿಸಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಬೃಂದಾವನದಲ್ಲಿರುವ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ಭರ್ಜರಿ ಪಾರ್ಟಿ ಮಾಡಲಾಗಿದೆ.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅಧಿಕಾರಿಗಳಿಗೊಂದು ನ್ಯಾಯ, ಜನಸಾಮಾನ್ಯರಿಗೊಂದ ನ್ಯಾಯ ಎಂಬಂತಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಆದೇಶಕ್ಕೆ ಕ್ಯಾರೆ ಎನ್ನದೆ ಕೊವಿಡ್ ನಿಯಮ ಉಲ್ಲಂಘಿಸಿ ತಹಶೀಲ್ದಾರ್ ಮಗನ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ.
ನೂರಾರು ಜನರ ಸಮ್ಮುಖದಲ್ಲಿ ಮಂಡ್ಯ ತಹಶೀಲ್ದಾರ್ ಚಂದ್ರಶೇಖರ ಶಂಗಾಳಿ ಅವರ ಮಗನ ಹುಟ್ಟುಹಬ್ಬವನ್ನು ಆಚರಿಸಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಬೃಂದಾವನದಲ್ಲಿರುವ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ಭರ್ಜರಿ ಪಾರ್ಟಿ ಮಾಡಲಾಗಿದೆ. ನಿನ್ನೆ(ಜುಲೈ 4) ಸಂಜೆಯಿಂದ ತಡರಾತ್ರಿವರೆಗೂ ಪಾರ್ಟಿ ನಡೆದಿದೆ.
ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿ ತಹಶೀಲ್ದಾರ್‌ರಿಂದ ಪಾರ್ಟಿ ನಡೆದಿದೆ. ಪಾರ್ಟಿಯಲ್ಲಿ ದೈಹಿಕ ಅಂತರ ಮಾಯವಾಗಿದ್ದು, ಮಾಸ್ಕ್ ಧರಿಸದೆ ನಿರ್ಲಕ್ಷ್ಯವಹಿಸಲಾಗಿದೆ. ಕೊವಿಡ್ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಿಗೆ 30 ಜನಕ್ಕಿಂತ ಹೆಚ್ಚು ಜನ ಸೇರಬಾರದೆಂದು ಡಿಸಿ ಆದೇಶ ಹೊರಡಿಸಿದ್ದರು. ಆದರೆ ಡಿಸಿಯಿಂದ ನಿರ್ಬಂಧವಿದ್ದರೂ ನಿಯಮ ಪಾಲಿಸಬೇಕಾದ ತಹಶೀಲ್ದಾರ್ ಆದೇಶ ಉಲ್ಲಂಘಿಸಿದ್ದಾರೆ.
ಜೊತೆಗೆ ಪಾಂಡವಪುರ ತಹಶೀಲ್ದಾರ್ ಪ್ರಮೋದ್ ಪಾಟೀಲ್ ಸೇರಿದಂತೆ ಹಲವು ಅಧಿಕಾರಿಗಳು, ಸಂಘಟನೆಗಳ ಮುಖ್ಯಸ್ಥರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ತಹಶೀಲ್ದಾರ್ ನಡೆಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ಇದನ್ನೂ ಓದಿ: IT Raid: ಶಾಸಕ ಜಮೀರ್ ಅಹಮ್ಮದ್ ಭವ್ಯ ಬಂಗಲೆ ಮೇಲೆ ಐಟಿ ದಾಳಿ; ಶಾಸಕ ಜಮೀರ್ ಆಸ್ತಿಪಾಸ್ತಿ ಎಷ್ಟಿದೆ? ವಿವರ ಇಲ್ಲಿದೆ