AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಜಯಂತಿ ಆಚರಣೆ: ಶ್ರೀರಂಗಪಟ್ಟಣದಲ್ಲಿ ಇಂದು ನಿಷೇಧಾಜ್ಞೆ ಜಾರಿ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಚಿಂತನೆ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಅವರು ಇಂದು ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ. ಟಿಪ್ಪು ವಕ್ಫ್​ ಎಸ್ಟೇಟ್​, ಟಿಪ್ಪು ಜಯಂತಿ ಆಚರಿಸಲು ಮುಂದಾಗಿದ್ದು, ಮೈಸೂರು ಸೇರಿದಂತೆ ಹಲವೆಡೆಯಿಂದ ಜನ ಆಗಮಿಸುವ ಸಾಧ್ಯತೆ ಇದೆ.

ಟಿಪ್ಪು ಜಯಂತಿ ಆಚರಣೆ: ಶ್ರೀರಂಗಪಟ್ಟಣದಲ್ಲಿ ಇಂದು ನಿಷೇಧಾಜ್ಞೆ ಜಾರಿ
ಟಿಪ್ಪು ಜಯಂತಿ ಆಚರಣೆ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ಇಂದು ನಿಷೇಧಾಜ್ಞೆ ಜಾರಿ
Follow us
ಪ್ರಶಾಂತ್​ ಬಿ.
| Updated By: Rakesh Nayak Manchi

Updated on:Nov 10, 2023 | 8:05 AM

ಮಂಡ್ಯ, ನ.10: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿ (Tipu Jayanti) ಆಚರಣೆಗೆ ಚಿಂತನೆ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಅವರು ಇಂದು ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ. ಟಿಪ್ಪು ವಕ್ಫ್​ ಎಸ್ಟೇಟ್​, ಟಿಪ್ಪು ಜಯಂತಿ ಆಚರಿಸಲು ಮುಂದಾಗಿದ್ದು, ಮೈಸೂರು ಸೇರಿದಂತೆ ಹಲವೆಡೆಯಿಂದ ಜನ ಆಗಮಿಸುವ ಸಾಧ್ಯತೆ ಇದೆ.

ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗ್ಗೆ 6 ರಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ರಾತ್ರಿ 11 ಗಂಟೆವರೆಗೆ ಇರಲಿದೆ. ಯಾವುದೇ ಮೆರವಣಿಗೆ, ಪ್ರತಿಭಟನೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ, ಯಾವುದೇ ಘೋಷಣೆ ಕೂಗದಂತೆ, ಪ್ರಚೋದನಕಾರಿ ಚಿತ್ರವಿರುವ ಟೀ ಶರ್ಟ್​ ಧರಿಸದಂತೆ, ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ ಸಿಡಿಸದಂತೆ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ: ಶ್ರೀರಂಗಪಟ್ಟಣದಲ್ಲಿ ಇಂದು 144 ಸೆಕ್ಷೆನ್ ಜಾರಿ

ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಬಾರಿ ಸರ್ಕಾರ ಅಧಿಕಾರಕ್ಕೆ ಬಂದಾಗ ಟೀಕೆ, ವಿರೋಧಗಳ ನಡುವೆ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತರಲಾಗಿತ್ತು. ಇದನ್ನು ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ (2019 ರಲ್ಲಿ) ರದ್ದುಗೊಳಿಸಿ ಆದೇಶ ಹೊರಡಿಸಿತ್ತು.

ಇದೀಗ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ 2019ರಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಹೀಗಾಗಿ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ನಡೆಯುವುದಿಲ್ಲ. ಆದರೆ, ಕೆಲವು ಮುಸ್ಲಿಂ ಸಂಘಟನೆಗಳು ಆಚರಣೆಗೆ ಮುಂದಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:01 am, Fri, 10 November 23