AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕ್ಷಣದ ಆತುರಕ್ಕೆ ಹೋಯ್ತು ಅಮೂಲ್ಯ ಜೀವ! ರೈಲಿಗೆ ಸಿಲುಕಿ ಪದವಿ ವಿದ್ಯಾರ್ಥಿನಿ ಸಾವು

ಮಂಡ್ಯದಲ್ಲಿ ನಡೆದ ದುರಂತದಲ್ಲಿ 19 ವರ್ಷದ ವಿದ್ಯಾರ್ಥಿನಿ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ರೈಲ್ವೆ ಗೇಟ್ ಹಾಕಿದ್ದರೂ ಅದನ್ನು ಲೆಕ್ಕಿಸದೆ ಹಳಿ ದಾಟಲು ಯತ್ನಿಸಿದಾಗ ದುರ್ಘಟನೆ ಸಂಭವಿಸಿದೆ. ಒಂದು ಕ್ಷಣದ ನಿರ್ಲಕ್ಷ್ಯ ಅಮೂಲ್ಯ ಜೀವ ಬಲಿ ಆಗಿದೆ. ರೈಲ್ವೆ ಪೊಲೀಸರು ಪರಿಶೀಲನೆ ಮಾಡಿದ್ದಾರೆ.

ಒಂದು ಕ್ಷಣದ ಆತುರಕ್ಕೆ ಹೋಯ್ತು ಅಮೂಲ್ಯ ಜೀವ! ರೈಲಿಗೆ ಸಿಲುಕಿ ಪದವಿ ವಿದ್ಯಾರ್ಥಿನಿ ಸಾವು
ಮೃತ ಯುವತಿ ಲಿಖಿತಾ
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 15, 2026 | 7:28 AM

Share

ಮುಖ್ಯಾಂಶಗಳು

  • ಒಂದು ಕ್ಷಣದ ಆತುರಕ್ಕೆ ಅಮೂಲ್ಯ ಜೀವ ಬಲಿ
  • ರೆಲ್ವೆ ಡಿಕ್ಕಿ ಹೊಡೆದು ಯುವತಿ ಸಾವು
  • ಮಂಡ್ಯದ ಚಂದಗಿರಿ ಕೊಪ್ಪಲು ಗ್ರಾಮದ ಬಳಿ ಘಟನೆ

ಮಂಡ್ಯ, ನವೆಂಬರ್​​ 15: ಕಾಲೇಜು ಮುಗಿಸಿಕೊಂಡು ಸಂತೋಷದಿಂದ ಮನೆಗೆ ಮರಳಬೇಕಿದ್ದ 19 ವರ್ಷದ ಯುವತಿ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ರೈಲ್ವೆ ಗೇಟ್​ ಹಾಕಿದ್ದರೂ ಹಳಿ ದಾಟಲು ಮುಂದಾದ ವಿದ್ಯಾರ್ಥಿನಿ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಲಿಖಿತಾ ಮೃತ ದುರ್ದೈವಿ.

ನಡೆದಿದ್ದೇನು?

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಂದಗಿರಿಕೊಪ್ಪಲು ಗ್ರಾಮದ ಲಿಖಿತಾ ಪಾಂಡವಪುರ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಳು. ಚಂದಗಿರಿ ಕೊಪ್ಪಲು ಗ್ರಾಮದ ಬಳಿ ರೈಲ್ವೆ ಗೇಟ್ ಹಾಕಿದ್ದರೂ ಅದನ್ನು ಲೆಕ್ಕಿಸದೆ ಲಿಖಿತಾ ಹಳಿ ದಾಟಲು ಮುಂದಾಗಿದ್ದಾಳೆ. ಅಷ್ಟರಲ್ಲೇ ಸಮೀಪಿಸುತ್ತಿದ್ದ ರೈಲು ಕ್ಷಣಾರ್ಧದಲ್ಲಿ ಆಕೆಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಕುಟುಂಬಕ್ಕೆ ಬರಸಿಡಿಲು ಬಡಿದಂತಾದ ಘಟನೆ

ಇನ್ನೇನು‌ ಕಾಲೇಜು ಮುಗಿಸಿ ಮಗಳು ಮನೆಗೆ ಬರುತ್ತಾಳೆ ಎಂದು ಕಾಯುತ್ತಿದ್ದ ಕುಟುಂಬಕ್ಕೆ ಇದೀಗ ಬರಸಿಡಿಲು ಬಡಿದಂತಾಗಿದೆ. ಮನೆಯವರ ಕನಸುಗಳೆಲ್ಲಾ ಕ್ಷಣಮಾತ್ರದಲ್ಲಿ ನುಚ್ಚುನೂರಾಗಿವೆ. ವಾಹನ ಸವಾರರೊಬ್ಬರು ರೈಲು ಹೋಗುವ ದೃಶ್ಯ ಸೆರೆ ಹಿಡಿಯುತ್ತಿದ್ದಾಗ ಈ ದುರ್ಘಟನೆ ಭೀಕರ ದೃಶ್ಯ ಕೂಡ ಸೆರೆಯಾಗಿದೆ.

ಇದನ್ನೂ ಓದಿ: ಕಂತು ಕಟ್ಟಲಾಗದ ವೃದ್ಧೆಯ ಮನೆ ಸೀಜ್: ಜಗಳೂರಿನಲ್ಲಿ 15 ದಿನಗಳಿಂದ ಬೀದಿಯಲ್ಲಿ ಕುಟುಂಬ, ಮೈಕ್ರೋ ಫೈನಾನ್ಸ್ ವಿರುದ್ಧ ಆಕ್ರೋಶ

ಇನ್ನು ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರೈಲ್ವೆ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ರೈಲ್ವೆ ಗೇಟ್ ಹಾಕಿದ್ದರೂ ಹಳಿ ದಾಟಲು ಮುಂದಾಗಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ರೈಲು ಬರುವುದನ್ನು ಲೆಕ್ಕಿಸದೆ ಹಳಿ ದಾಟುವ ಆತುರ ಎಂತಹ ಭೀಕರ ಪರಿಣಾಮಕ್ಕೆ ಕಾರಣವಾಗಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More