AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ನಾಡಬಾಂಬ್ ಸ್ಫೋಟ , ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬದಹಳ್ಳಿಯ ಆಂಜನೇಯ ಬೆಟ್ಟದಲ್ಲಿ ನಾಡಬಾಂಬ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯ ಮಾಡುವ ವೇಳೆ ಕಸದ ರಾಶಿಯಲ್ಲಿದ್ದ ಬಾಂಬ್ ಸಿಡಿದಿದೆ. ಕಾಡುಹಂದಿ ಬೇಟೆಗಾಗಿ ಇಡಲಾಗಿದ್ದ ಬಾಂಬ್ ಸಿಡಿದಿದೆ ಎಂದು ಶಂಕಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಂಡ್ಯದಲ್ಲಿ ನಾಡಬಾಂಬ್ ಸ್ಫೋಟ , ಇಬ್ಬರು ವಿದ್ಯಾರ್ಥಿಗಳಿಗೆ ಗಾಯ
ನಾಡಬಾಂಬ್​ ಸ್ಫೋಟ
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on:Feb 23, 2025 | 12:13 PM

ಮಂಡ್ಯ, ಫೆಬ್ರವರಿ 23: ನಾಗಮಂಗಲ (Nagamangala) ತಾಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯಬೆಟ್ಟದಲ್ಲಿ ನಾಡಬಾಂಬ್​ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹರಿಯಂತ್ ಪಾಟೀಲ್, ಪಾರ್ಥ ಗಾಯಗೊಂಡ ವಿದ್ಯಾರ್ಥಿಗಳು. ಹರಿಯಂತ್ ಪಾಟೀಲ್ ಮತ್ತು ಪಾರ್ಥ ಜೈನಬಸದಿ ಶಾಲೆಯಲ್ಲಿ ಓದುತ್ತಿದ್ದಾರೆ.

ವಿದ್ಯಾರ್ಥಿಗಳು ರವಿವಾರ (ಫೆ.23) ಬೆಟ್ಟದ ಮೇಲಿನ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ಕೆ ತೆರಳಿದ್ದರು. ಸ್ವಚ್ಛತೆ ಮಾಡುವಾಗ ಕಸದ ರಾಶಿಗೆ ವಿದ್ಯಾರ್ಥಿಗಳು ಕೈ ಹಾಕುತ್ತಿದ್ದಂತೆ ನಾಡ ಬಾಂಬ್​ ಸ್ಫೋಟಗೊಂಡಿದೆ. ಸ್ಫೋಟದ ತೀರ್ವತೆಗೆ ಓರ್ವನ ಅಂಗೈ ಛಿದ್ರಗೊಂಡಿದೆ. ಮತ್ತೊಬ್ಬನ ಮುಖದ ಭಾಗಕ್ಕೆ ಗಾಯವಾಗಿದೆ.

ಕಾಡು ಹಂದಿ ಬೇಟೆಗೆ ನಾಡ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುಗಳನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮದ್ದು, ಗುಂಡು ಸ್ಫೋಟ: ಮಗ ಸಾವು, ತಂದೆ ಜಸ್ಟ್​ ಮಿಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದ ನಾಗೇಶ್​ ಎಂಬುವವರು ರಾತ್ರಿ ವೇಳೆ ಕಾಡು ಹಂದಿ ಸೇರಿದಂತೆ ವನ್ಯಜೀವಿಗಳ ಬೇಟೆಯನ್ನು ಕಸುಬಾಗಿಸಿಕೊಂಡಿದ್ದರು. ಅದಕ್ಕಾಗಿ ತನ್ನ ಮನೆಯಲ್ಲಿ ಮದ್ದು, ಗುಂಡು ತಯಾರಿ ಮಾಡುತ್ತಿದ್ದರು. ಈ ವೇಳೆ ಮನೆಯಲ್ಲಿದ್ದ 18 ವರ್ಷದ ತನ್ನ ಮಗನನ್ನು ಸಹ ಜೊತೆಯಾಗಿಸಿಕೊಂಡು, ಮದ್ದು, ಗುಂಡು ತಯಾರಿ ಮಾಡುತ್ತಿದ್ದರು.

ಇದನ್ನೂ ಓದಿ: ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ಜೀವಂತ ನಾಡಬಾಂಬ್ ಪತ್ತೆ: ಇಬ್ಬರ ಬಂಧನ

ಈ ವೇಳೆ ತಯಾರಾಗಿದ್ದ ಮದ್ದು, ಗುಂಡು ಆಕಸ್ಮಿಕವಾಗಿ ತಂದೆ, ಮಗನ ಮುಂದೆಯೇ ಸ್ಫೋಟಗೊಂಡು ಮಗ ಪ್ರವನ್ ಮನೆಯಲ್ಲೇ ಸಾವನ್ನಪಿದ್ದರು. ತಂದೆ ನಾಗೇಶ್ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದರು. ಜೊತೆಗೆ ಸ್ಫೋಟದ ರಭಸಕ್ಕೆ ಮನೆಯ ಮೇಲ್ಚಾವಣಿ ಸಹ ಪೀಸ್ ಪೀಸ್ ಆಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲಾ ಪುಡಿ ಪುಡಿಯಾಗಿದ್ದವು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:09 pm, Sun, 23 February 25

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ