ಮಂಡ್ಯ ಜಿಲ್ಲಾ ಪಂಚಾಯಿತಿಯಿಂದ ಸಚಿವ ಅಶ್ವಥ್ ನಾರಾಯಣಗೆ ನೋಟಿಸ್ ಜಾರಿ!
ಮೇ 16 ರಂದು ಮಂಡ್ಯ ಮಿಮ್ಸ್ ಮಹಿಳಾ ಸರ್ಕಾರಿ ಕಾಲೇಜಿಗೆ ಸಚಿವರು ಭೇಟಿ ಕೊಟ್ಟಿದ್ದರು. ಮಿಮ್ಸ್ ಸೇರಿದಂತೆ ಮಂಡ್ಯದ ಹಲವೆಡೆ ಭೇಟಿ ನೀಡಿದ್ದರು. ಈ ಕುರಿತು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಮಂಡ್ಯ: ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣಗೆ (Ashwath Narayan) ಮಂಡ್ಯ ಜಿಲ್ಲಾ ಪಂಚಾಯಿತಿಯಿಂದ ನೋಟಿಸ್ (Notice) ಜಾರಿಯಾಗಿದೆ. ಮೇ 16 ರಂದು ಮಂಡ್ಯ ಮಿಮ್ಸ್ ಮಹಿಳಾ ಸರ್ಕಾರಿ ಕಾಲೇಜಿಗೆ ಸಚಿವರು ಭೇಟಿ ಕೊಟ್ಟಿದ್ದರು. ಮಿಮ್ಸ್ ಸೇರಿದಂತೆ ಮಂಡ್ಯದ ಹಲವೆಡೆ ಭೇಟಿ ನೀಡಿದ್ದರು. ಈ ಕುರಿತು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಕಾಂಗ್ರೆಸ್ ನೀಡಿದ ದೂರಿನ ಅನ್ವಯ ಜಿಲ್ಲಾಡಳಿತ ವರದಿ ತರೆಸಿಕೊಂಡಿದೆ. ತಹಶೀಲ್ದಾರ್ ನೀಡಿದ ವರದಿಯಲ್ಲಿ ಮೇಲ್ನೊಟಕ್ಕೆ ನೀತಿ ಸಂಹಿತೆ ಉಲ್ಲಂಘಿಸಿರುವುದು ತಿಳಿದು ಬಂದಿದೆ. ಈ ಹಿನ್ನೆಲೆ ಉನ್ನತ ಶಿಕ್ಷಣ ಸಚಿವರಿಗೆ ನೋಟಿಸ್ ನೀಡಿ ಸ್ಪಷ್ಟನೆ ನೀಡುವಂತೆ ಜಿಲ್ಲಾ ಪಂಚಾಯಿತಿ ಕೇಳಿದೆ.
ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮೇ 16 ರಂದು ಮಂಡ್ಯದ ಹಲವು ಕಾಲೇಜುಗಳಲ್ಲಿ ಸಚಿವ ಅಶ್ವತ್ಥ್ ನಾರಾಯಣ ಪಕ್ಷದ ಮುಖಂಡರ ಜೊತೆ ಪ್ರಚಾರ ಸಭೆ ನಡೆಸಿದ್ದರು. ಈ ಮೂಲಕ ಸಚಿವರಿಂದಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಖಾಸಗಿ ಕಾಲೇಜು ಆಡಳಿತ ಮಂಡಳಿ ಸಭೆ ಆಯೋಜನೆ ಮಾಡಿತ್ತು. ಈ ಬೆನ್ನಲ್ಲೆ ಸಚಿವರಿಂದ ಆಡಳಿತ ದುರುಪಯೋಗ, ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ: Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ
ಪ್ರಾಂಶುಪಾಲರು, ಉಪನ್ಯಾಸಕರು, ಕಾಲೇಜು ಆಡಳಿತ ಮಂಡಳಿಗೆ ಸಚಿವರು ಆಮಿಷ ಒಡ್ಡಿದ್ದಾರೆಂದು ಆರೋಪಿಸಿ, ಸಚಿವರ ನಡೆ ವಿರುದ್ಧ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಜೊತೆಗೆ ಸಚಿವರು, ಕಾಲೇಜು ಆಡಳಿತ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ, ಚುನಾವಣಾಧಿಕಾರಿಗೆ ವಿಪಕ್ಷಗಳು ಆಗ್ರಹಿಸಿದ್ದವು. ಕ್ರಮ ಕೈಗೊಳ್ಳದಿದ್ದರೆ ಆಯೋಗಕ್ಕೆ ದೂರು ಸಲ್ಲಿಸಲು ನಿರ್ಧಾರ ಮಾಡಿದ್ದವು.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:24 am, Wed, 25 May 22