ರೈತರಿಗೆ ಬಿಗ್ ಶಾಕ್ ಕೊಟ್ಟ ಮನ್ಮುಲ್: ಖರೀದಿ ಹಾಲಿನ ದರ ಕಡಿತ

ರೈತರಿಂದ ಖರೀದಿಸುವ ಹಾಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಲೀಟರ್ ಗೆ 1 ರೂ. ಕಡಿತ ಮಾಡಿ ಆದೇಶ ಹೊರಡಿಸಿದೆ. ಮೇ.26ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ರೈತರಿಗೆ ಬಿಗ್ ಶಾಕ್ ಕೊಟ್ಟ ಮನ್ಮುಲ್: ಖರೀದಿ ಹಾಲಿನ ದರ ಕಡಿತ
ಮನ್ಮುಲ್
Follow us
ಆಯೇಷಾ ಬಾನು
|

Updated on: Jun 03, 2023 | 10:18 AM

ಮಂಡ್ಯ: ಮನ್ಮುಲ್(Manmul) ರೈತರಿಗೆ ಬಿಗ್ ಶಾಕ್ ಕೊಟ್ಟಿದೆ. ರೈತರಿಂದ(Farmer) ಖರೀದಿಸುವ ಹಾಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಲೀಟರ್ ಗೆ 1 ರೂ. ಕಡಿತ ಮಾಡಿ ಆದೇಶ ಹೊರಡಿಸಿದೆ. ಜೂನ್ 1ರಿಂದಲೇ ಪರಿಷ್ಕೃತ ಆದೇಶ ಜಾರಿ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರಿಯಲಿದೆ.

ಮೇ.26ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜೂ.1 ರಿಂದ ಮುಂದಿನ ಆದೇಶದವರೆಗೆ ಈ ನೂತನ ದರ ಪರಿಷ್ಕರಣೆ ಮುಂದುವರಿಯುತ್ತದೆ ಎಂದು ಮನ್ಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ ಪಿ.ಆರ್.ಮಂಜೇಶ್ ಸುತ್ತೋಲೆ ಹೊರಡಿಸಿದ್ದಾರೆ. ಜಿಲ್ಲಾ ಹಾಲು ಒಕ್ಕೂಟವು ಪ್ರತಿದಿನ 9,38,035 ಕೆಜಿ ಹಾಲನ್ನು ಸಂಗ್ರಹಿಸುತ್ತಿದೆ. ಬೇಸಿಗೆ ಕಾಲದಲ್ಲಿ ಹಸಿರು ಮೇವಿನ ಕೊರತೆಯಿಂದ ಉತ್ಪಾದಕರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಸದ್ಯ ನೂತನ ದರದಂತೆ ಸಂಘಗಳಿಗೆ ಶೇ 4.0 ಜಿಡ್ಡು ಮತ್ತು ಶೇ 8.5 ಜಿಡ್ಡೇತರ ಘನಾಂಶಕ್ಕೆ 33.15 ರೂ. ಬದಲು 32.15 ರೂ ಹಾಗೂ ಉತ್ಪಾದಕರಿಗೆ 32.25 ರೂ ಬದಲು 31.25 ರೂ. ನಿಗಧಿಗೊಳಿಸಲಾಗಿದೆ.

ಒಕ್ಕೂಟದ ವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಮಳೆ ಅರಂಭವಾಗಿದ್ದು, ಹಸಿರು ಮೇವಿನ ಲಭ್ಯತೆ ಸುಧಾರಿಸಿದೆ. ಹೀಗಾಗಿ ದರ ಕಡಿತ ಮಾಡಲಾಗಿದೆ ಎಂದು ಮನ್‌ಮುಲ್ ಆಡಳಿತ ಮಂಡಳಿ ದರ ಇಳಿಕೆಗೆ ಸಮರ್ಥನೆ ನೀಡಿದ್ದಾರೆ.

ಮಂಡ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್