ಜೆಡಿಎಸ್​ ಅಧಿಕಾರಕ್ಕೆ ಬರಬೇಕೆಂಬುದು ಹಲವರ ಆಸೆ: ಮುಂದಿನ ಸಿಎಂ ನಾನೇ ಎಂದು ಪರೋಕ್ಷವಾಗಿ ಹೇಳಿಕೊಂಡ ಕುಮಾರಸ್ವಾಮಿ

ಭಗವಂತ ಯಾರ ಹಣೆ ಮೇಲೆ ಏನು ಬರೆದಿದ್ದಾನೋ ಗೊತ್ತಿಲ್ಲ. ರಾಜ್ಯದ ಜನರೇ ಈ ಬಾರಿ ಜೆಡಿಎಸ್ ಪಕ್ಷ ಬೆಂಬಲಿಸಲಿದ್ದಾರೆ ಎಂದು ಹೆಚ್​.ಡಿ ಕುಮಾರಸ್ವಾಮಿ ಹೇಳಿದರು.

ಜೆಡಿಎಸ್​ ಅಧಿಕಾರಕ್ಕೆ ಬರಬೇಕೆಂಬುದು ಹಲವರ ಆಸೆ: ಮುಂದಿನ ಸಿಎಂ ನಾನೇ ಎಂದು ಪರೋಕ್ಷವಾಗಿ ಹೇಳಿಕೊಂಡ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 17, 2022 | 5:03 PM

ಮಂಡ್ಯ: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಸಂಬಂಧಿಸಿದಂತೆ ಈಗಾಗಲೇ ಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ದಿನದಿಂದ ದಿನಕ್ಕೆ ಚುನಾವಣೆ ಕಾವು ಹೆಚ್ಚಾಗುತ್ತಿದೆ. ಸಿಎಂ ಬೊಮ್ಮಾಯಿ ಜನಸಂಕಲ್ಪ ಯಾತ್ರೆ ಮಾಡುತ್ತಿದ್ದಾರೆ. ಇತ್ತ ವಿಪಕ್ಷ ನಾಯಕ ಸಿದ್ಧರಾಮಯ್ಯ ಕೋಲಾರ ಪ್ರವಾಸ ಮಾಡಿದ್ದಾರೆ. ಇನ್ನು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಮುಂದಿನ ಸಿಎಂ ಎಂಬ ಸರ್ವೆ ಕೂಡ ಮಾಡಿದ್ದಾರೆ. ಈ ಕುರಿತಾಗಿ ಜಿಲ್ಲೆಯ ಮಳವಳ್ಳಿ ತಾಲೂಕಿನ ಕನ್ನಹಳ್ಳಿಯಲ್ಲಿ ಬಸವ ಭವನ ಶಂಕು ಸ್ಥಾಪನೆ ಉದ್ಘಾಟಿಸಿ ಮಾತನಾಡಿ, ಭಗವಂತ ಯಾರ ಹಣೆ ಮೇಲೆ ಏನು ಬರೆದಿದ್ದಾನೋ ಗೊತ್ತಿಲ್ಲ. ಬಹಳ ಜನರಿಗೆ ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿದೆ. ರಾಜ್ಯದ ಜನರೇ ಈ ಬಾರಿ ಜೆಡಿಎಸ್ ಪಕ್ಷ ಬೆಂಬಲಿಸಲಿದ್ದಾರೆ ಎಂದು ಹೇಳಿದರು. ಕಟ್ಟಡ ನಿರ್ಮಾಣ ಆಗುವಷ್ಟರಲ್ಲಿ ಮುಂದಿನ ಸರ್ಕಾರ ಬಂದಿರುತ್ತೆ ಆಗ ನಾನೇ ಒಂದು ಕೋಟಿ ರೂ. ನೀಡುತ್ತೇನೆ ಮತ್ತು ನಾನೇ ಉದ್ಘಾಟನೆ ಮಾಡುತ್ತೇನೆ ಎಂದು ಮುಂದಿನ ಸಿಎಂ ನಾನೇ ಎಂದು ಪರೋಕ್ಷವಾಗಿ ಹೆಚ್.ಡಿ ಕುಮಾರಸ್ವಾಮಿ ಹೇಳಿಕೊಂಡರು.

ಮನುಷ್ಯನಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ

ಸಮಾಜದಲ್ಲಿ ಮಾನವೀಯ ಮೌಲ್ಯಗಳು ಹಾಳಾಗುತ್ತಿವೆ. ಕಾಯಕವೇ ದೇವರು ಎಂಬ ಸಂದೇಶ ಸಾರಿದ ಬಸವಣ್ಣ, ಅವರ ತತ್ವಗಳು ನಿಜ ಜೀವನದಲ್ಲಿ ಅಳವಡಿಕೆಯಾಗಬೇಕು. ಮನುಷ್ಯನಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಭಾವನಾತ್ಮಕ ಸಂಬಂಧಗಳಿಗೆ ಬೆಲೆ ಕೊಡಬೇಕು. ಬಸವಣ್ಣನವರು ಆ ಕಾಲದಲ್ಲೇ ಸಮಾನತೆ ಸಂದೇಶ ಸಾರಿದ್ದರು. ಸರ್ವಜನಾಂಗದ ಶಾಂತಿಯ ತೋಟವಾಗಿ ನಾವೆಲ್ಲ ಬಾಳಬೇಕು. ಅನ್ನದಾನಿ ಕ್ಷೇತ್ರದ ಸಮಸ್ಯೆಗಳಿಗೆ ಪ್ರಾಮಾಣಿಕ ಕೆಲಸ ಮಾಡುತ್ತಿದ್ದಾರೆ. ಅನ್ನದಾನಿ ಕಾರ್ಯಕ್ಕೆ ನನ್ನ ಮೆಚ್ಚುಗೆ ಇದೆ. ನಮ್ಮ ಮನೆ ಹುಡುಗ ಅಂತಾ ನಾನು ಹತ್ತಿರದಿಂದ ಆತನನ್ನ ನೋಡಿದ್ದೇನೆ ಎಂದು ಹೇಳಿದರು.

ಗೋಪುರ ಹೇಗಿದೆ ಎಂಬುದು ಮುಖ್ಯವಲ್ಲ ನೆರಳು ನೀಡುವುದು ಮುಖ್ಯ 

ಮೈಸೂರಿನಲ್ಲಿ ಗುಂಬಜ್ ಮಾದರಿ ಬಸ್ ಶೆಲ್ಟರ್​ ನಿರ್ಮಾಣ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದು ಗುಂಬಜ್ ಇದೆಯೋ, ಗೋಪುರ ಇದೆಯೋ ಅನ್ನೋದು ಮುಖ್ಯವಲ್ಲ. ಆದರೆ ನೆರಳು ನೀಡುವ ಕೆಲಸ ಆಗುತ್ತಿದೆಯಾ ಎಂಬುದು ಮುಖ್ಯ. ಬಸ್​ ನಿಲ್ದಾಣ ತೆರವು ಮಾಡಬೇಕು ಅನ್ನೋದು ಮೂರ್ಖರ ಹೇಳಿಕೆ. ಪ್ರತಾಪ್ ಸಿಂಹಗೆ ಕಟ್ಟಿ ಅಭ್ಯಾಸವಿಲ್ಲ, ಅವರಿಗೇನಿದ್ದರೂ ಕೆಡವಿ ಅಭ್ಯಾಸ. ಆ ಪಕ್ಷದ ಶಾಸಕರೇ ಸಂಸದರಿಂದ ನೋವು ಅನುಭವಿಸುತ್ತಿದ್ದಾರೆ. ಇನ್ನು ಮತ ಹಾಕಿದ ಮತದಾರರ ಕತೆ ಏನೋ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪರ್ಸನಲ್ ಡೇಟಾ ಕಲೆ ಹಾಕಿದ ಆರೋಪ ಕುರಿತು ಮಾತನಾಡಿದ್ದು, ಬಿಜೆಪಿಯ ಸರ್ಕಾರದಲ್ಲಿ ಕೆಲ ಖಾಸಗಿ ಸಂಸ್ಥೆಗಳಿಗೆ ಡೇಟಾ ಬೇಸ್ ಕಲೆ ಹಾಕುವ ಜವಾಬ್ದಾರಿ ಕೊಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಟ್ಯಾಂಪರ್ ಮಾಡಬೇಕು ಅನ್ನೋದು ಮುಖ್ಯ ಉದ್ದೇಶವಾಗಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಕಾಗೇರಿ ಹೇಳಿಕೆಯನ್ನು ಕುಮಾರಸ್ವಾಮಿ ಪ್ರಸ್ಥಾಪಿಸಿದರು. ಚುನಾವಣೆಯಲ್ಲಿ ಹಣ ಖರ್ಚು ಮಾಡದೆ ಹೋದರೆ ಗೆಲ್ಲಲು ಆಗೋಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಇದರ ಸತ್ಯಾಸತ್ಯತೆ ಏನೆಂದು ಸರ್ಕಾರ ಸ್ಪಷ್ಠೀಕರಣ ನೀಡಬೇಕಿದೆ. 2010 ರಲ್ಲಿ ಬಿಬಿಎಂಪಿಯಲ್ಲಿ ದಾಖಲಾತಿಗಳ ಕೊಠಡಿಗೆ ಬೆಂಕಿ ಹಚ್ಚಲಾಗಿತ್ತು. ಇವಿಎಂ ಪ್ರೊಡಕ್ಷನ್ ಮಾಡೋ ಅಭ್ಯರ್ಥಿಗಳೇ ಈ ಕೆಲಸದಲ್ಲಿದ್ದಾರೆಂಬ ಮಾತುಗಳಿವೆ. ಇದರಲ್ಲಿ ಇಂಟರ್​ಲಿಂಕ್​ಗಳಿವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:58 pm, Thu, 17 November 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ