AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಪ್ರತಿಭಟನೆ: ಅಂಡರ್ ಪಾಸ್ ನಿರ್ಮಿಸುವಂತೆ ಒತ್ತಾಯ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇ: ಹೆದ್ದಾರಿಯಲ್ಲಿ ಎತ್ತಿನ ಗಾಡಿಗಳನ್ನು ನಿಲ್ಲಿಸಿದ ಪ್ರತಿಭಟನಾಕಾರರು, ಕೂಡಲೇ ಅಂಡರ್‌ಪಾಸ್‌ ನಿರ್ಮಾಣಕ್ಕೆ ಮುಂದಾಗದಿದ್ದಲ್ಲಿ ಅನಿರ್ದಿಷ್ಟಾವಧಿವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದರು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಪ್ರತಿಭಟನೆ: ಅಂಡರ್ ಪಾಸ್ ನಿರ್ಮಿಸುವಂತೆ ಒತ್ತಾಯ
ಬೆಂಗಳೂರು-ಮೈಸೂರು ಹೆದ್ದಾರಿ Image Credit source: PTI
ನಯನಾ ಎಸ್​ಪಿ
|

Updated on: Feb 21, 2023 | 6:21 PM

Share

ಮಂಡ್ಯ: ಕರ್ನಾಟಕದ ಮಂಡ್ಯ ಜಿಲ್ಲೆಯ ಹನಕೆರೆ ಬಳಿ ಅಂಡರ್‌ಪಾಸ್‌ಗಾಗಿ ಒತ್ತಾಯಿಸಿ, ಸಮೀಪದ ಗ್ರಾಮಸ್ಥರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಭಾನುವಾರ (ಫೆಬ್ರವರಿ 19) ಎರಡು ಗಂಟೆಗಳಿಗೂ ಹೆಚ್ಚು ಕಾಲ ತಡೆದಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು. ಹೆದ್ದಾರಿಯಲ್ಲಿ ಎತ್ತಿನ ಗಾಡಿಗಳನ್ನು ನಿಲ್ಲಿಸಿದ ಪ್ರತಿಭಟನಾಕಾರರು, ಕೂಡಲೇ ಅಂಡರ್‌ಪಾಸ್‌ ನಿರ್ಮಾಣಕ್ಕೆ ಮುಂದಾಗದಿದ್ದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದರು.

ಪೊಲೀಸರು ರಸ್ತೆ ತೆರವು ಮಾಡುವಂತೆ ಗ್ರಾಮಸ್ಥರಿಗೆ ಮನವಿ ಮಾಡಿದರು. ಆದರೆ, 8 ತಿಂಗಳ ಹಿಂದೆಯೇ ಅಂಡರ್‌ಪಾಸ್‌ ಅಗತ್ಯತೆ ಕುರಿತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಈ ಭಾಗದ ರೈತ ಮುಖಂಡ ಮಧುಸೂಧನ್ ಮಾತನಾಡಿ, ಗ್ರಾಮದಿಂದ 1 ಕಿ.ಮೀ ದೂರದಲ್ಲಿ ಅಂಡರ್‌ಪಾಸ್‌ ನಿರ್ಮಿಸಲಾಗಿದ್ದು, ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಧಿಕಾರಿಗಳು ಅಂಡರ್‌ಪಾಸ್‌ನ ಪ್ರಸ್ತಾವನೆಯು ಬಾಕಿ ಉಳಿದಿದ್ದು, ಯೋಜನೆಗೆ ಅನುಮೋದನೆ ದೊರೆತ ನಂತರ ನಿರ್ಮಾಣ ಪ್ರಾರಂಭವಾಗಲಿದೆ ಎಂದು ಪ್ರತಿಭಟನಾಕಾರರಿಗೆ ತಿಳಿಸಿದರು. ಪ್ರತಿಭಟನೆ ಮುಂದುವರಿಯುತ್ತಿದ್ದಂತೆಯೇ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪ್ರತಿಭಟನೆಯನ್ನು ತಡೆಗಟ್ಟಲು 10 ಪ್ರತಿಭಟನಾಕಾರರನ್ನು ಕಸ್ಟಡಿಗೆ ತೆಗೆದುಕೊಂಡು, ನಂತರ ಬಿಡುಗಡೆ ಮಾಡಲಾಯಿತು.

ಘಟನೆ ಕುರಿತು ಪ್ರತಿಕ್ರಿಯಿಸಿದ ಮೈಸೂರು ಸಂಸದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ರೈತ ಸಂಘವು ಅಂಡರ್‌ಪಾಸ್‌ಗಾಗಿ ಬೇಡಿಕೆ ಇಟ್ಟಿದ್ದು, ಅದನ್ನು ಎನ್‌ಎಚ್‌ಎಐಗೆ ತಿಳಿಸಲಾಗಿದೆ. ರಸ್ತೆ ಕಾಮಗಾರಿ ಪೂರ್ಣಗೊಂಡ ಈ ಬಳಿಕ ಸಮಸ್ಯೆ ಬಗೆಹರಿಯಲಿದೆ ಎಂದರು. ಆದರೆ, ರೈತರು ಆಕ್ಷೇಪ ವ್ಯಕ್ತಪಡಿಸಿ, ಎಂಟು ತಿಂಗಳ ಹಿಂದೆ ಭರವಸೆ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನೆಯನ್ನು ಮುಂದುವರಿಸಿದರು.

ಇದನ್ನೂ ಓದಿ: ಮಷಿನ್‌ಗೆ ಸಿಲುಕಿ ತುಂಡಾಗಿದ್ದ ಕೈ ಮಣಿಕಟ್ಟನ್ನು ಯಶಸ್ವಿಯಾಗಿ ಮರುಜೋಡಿಸಿದ ವೈದ್ಯರು

117 ಕಿಮೀ ಉದ್ದದ ಎಕ್ಸ್‌ಪ್ರೆಸ್‌ವೇಯನ್ನು ಎರಡು ಹಂತದಲ್ಲಿ 8,408 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಒಟ್ಟು 117 ಕಿಮೀ ಇರುವ ಹೆದ್ದಾರಿಯಲ್ಲಿ 52 ಕಿ.ಮೀ ಹಸಿರು ಕ್ಷೇತ್ರವಾಗಿದ್ದು, ಪಟ್ಟಣಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಐದು ಬೈಪಾಸ್‌ಗಳನ್ನು ಒಳಗೊಂಡಿದೆ. ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಹೈಬ್ರಿಡ್ ಆನ್ಯೂಟಿ ಮಾಡೆಲ್ (HAM) ಅಡಿಯಲ್ಲಿ ಈ ಹೆದ್ದಾರಿಯನ್ನು ನಿರ್ಮಿಸಲಾಗುತ್ತಿದೆ. ಸುಮಾರು 8,066 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯ ಗುತ್ತಿಗೆದಾರ ದಿಲೀಪ್ ಬಿಲ್ಡ್‌ಕಾನ್ ಲಿಮಿಟೆಡ್. ಈ ರಸ್ತೆಯು ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು 150 ನಿಮಿಷಗಳಿಂದ ೯೦ ನಿಮಿಷಕ್ಕೆ ಇಳಿಸುವ ನಿರೀಕ್ಷೆಯಿದೆ.

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..