ಮಂಡ್ಯ: ಕರ್ನಾಟಕದ ಮಂಡ್ಯ ಜಿಲ್ಲೆಯ ಹನಕೆರೆ ಬಳಿ ಅಂಡರ್‌ಪಾಸ್‌ಗಾಗಿ ಒತ್ತಾಯಿಸಿ, ಸಮೀಪದ ಗ್ರಾಮಸ್ಥರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಭಾನುವಾರ (ಫೆಬ್ರವರಿ 19) ಎರಡು ಗಂಟೆಗಳಿಗೂ ಹೆಚ್ಚು ಕಾಲ ತಡೆದಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು. ಹೆದ್ದಾರಿಯಲ್ಲಿ ಎತ್ತಿನ ಗಾಡಿಗಳನ್ನು ನಿಲ್ಲಿಸಿದ ಪ್ರತಿಭಟನಾಕಾರರು, ಕೂಡಲೇ ಅಂಡರ್‌ಪಾಸ್ ನಿರ್ಮಾಣಕ್ಕೆ ಮುಂದಾಗದಿದ್ದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದರು.
ಪೊಲೀಸರು ರಸ್ತೆ ತೆರವು ಮಾಡುವಂತೆ ಗ್ರಾಮಸ್ಥರಿಗೆ ಮನವಿ ಮಾಡಿದರು. ಆದರೆ, 8 ತಿಂಗಳ ಹಿಂದೆಯೇ ಅಂಡರ್‌ಪಾಸ್ ಅಗತ್ಯತೆ ಕುರಿತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಈ ಭಾಗದ ರೈತ ಮುಖಂಡ ಮಧುಸೂಧನ್ ಮಾತನಾಡಿ, ಗ್ರಾಮದಿಂದ 1 ಕಿ.ಮೀ ದೂರದಲ್ಲಿ ಅಂಡರ್‌ಪಾಸ್ ನಿರ್ಮಿಸಲಾಗಿದ್ದು, ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಧಿಕಾರಿಗಳು ಅಂಡರ್‌ಪಾಸ್‌ನ ಪ್ರಸ್ತಾವನೆಯು ಬಾಕಿ ಉಳಿದಿದ್ದು, ಯೋಜನೆಗೆ ಅನುಮೋದನೆ ದೊರೆತ ನಂತರ ನಿರ್ಮಾಣ ಪ್ರಾರಂಭವಾಗಲಿದೆ ಎಂದು ಪ್ರತಿಭಟನಾಕಾರರಿಗೆ ತಿಳಿಸಿದರು. ಪ್ರತಿಭಟನೆ ಮುಂದುವರಿಯುತ್ತಿದ್ದಂತೆಯೇ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪ್ರತಿಭಟನೆಯನ್ನು ತಡೆಗಟ್ಟಲು 10 ಪ್ರತಿಭಟನಾಕಾರರನ್ನು ಕಸ್ಟಡಿಗೆ ತೆಗೆದುಕೊಂಡು, ನಂತರ ಬಿಡುಗಡೆ ಮಾಡಲಾಯಿತು.
ಘಟನೆ ಕುರಿತು ಪ್ರತಿಕ್ರಿಯಿಸಿದ ಮೈಸೂರು ಸಂಸದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ರೈತ ಸಂಘವು ಅಂಡರ್‌ಪಾಸ್‌ಗಾಗಿ ಬೇಡಿಕೆ ಇಟ್ಟಿದ್ದು, ಅದನ್ನು ಎನ್‌ಎಚ್‌ಎಐಗೆ ತಿಳಿಸಲಾಗಿದೆ. ರಸ್ತೆ ಕಾಮಗಾರಿ ಪೂರ್ಣಗೊಂಡ ಈ ಬಳಿಕ ಸಮಸ್ಯೆ ಬಗೆಹರಿಯಲಿದೆ ಎಂದರು. ಆದರೆ, ರೈತರು ಆಕ್ಷೇಪ ವ್ಯಕ್ತಪಡಿಸಿ, ಎಂಟು ತಿಂಗಳ ಹಿಂದೆ ಭರವಸೆ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನೆಯನ್ನು ಮುಂದುವರಿಸಿದರು.
ಇದನ್ನೂ ಓದಿ: ಮಷಿನ್‌ಗೆ ಸಿಲುಕಿ ತುಂಡಾಗಿದ್ದ ಕೈ ಮಣಿಕಟ್ಟನ್ನು ಯಶಸ್ವಿಯಾಗಿ ಮರುಜೋಡಿಸಿದ ವೈದ್ಯರು
117 ಕಿಮೀ ಉದ್ದದ ಎಕ್ಸ್‌ಪ್ರೆಸ್‌ವೇಯನ್ನು ಎರಡು ಹಂತದಲ್ಲಿ 8,408 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಒಟ್ಟು 117 ಕಿಮೀ ಇರುವ ಹೆದ್ದಾರಿಯಲ್ಲಿ 52 ಕಿ.ಮೀ ಹಸಿರು ಕ್ಷೇತ್ರವಾಗಿದ್ದು, ಪಟ್ಟಣಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಐದು ಬೈಪಾಸ್‌ಗಳನ್ನು ಒಳಗೊಂಡಿದೆ. ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಹೈಬ್ರಿಡ್ ಆನ್ಯೂಟಿ ಮಾಡೆಲ್ (HAM) ಅಡಿಯಲ್ಲಿ ಈ ಹೆದ್ದಾರಿಯನ್ನು ನಿರ್ಮಿಸಲಾಗುತ್ತಿದೆ. ಸುಮಾರು 8,066 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯ ಗುತ್ತಿಗೆದಾರ ದಿಲೀಪ್ ಬಿಲ್ಡ್‌ಕಾನ್ ಲಿಮಿಟೆಡ್. ಈ ರಸ್ತೆಯು ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು 150 ನಿಮಿಷಗಳಿಂದ ೯೦ ನಿಮಿಷಕ್ಕೆ ಇಳಿಸುವ ನಿರೀಕ್ಷೆಯಿದೆ.