ಮೇಲುಕೋಟೆ ಬಳಿ ನವಜಾತ ಶಿಶುವಿನ ಶವ ಪತ್ತೆ; ಹೆಣ್ಣು ಎಂಬ ಕಾರಣಕ್ಕೆ ಬಿಸಾಡಿದರಾ?
ರಾಜ್ಯಾದ್ಯಂತ ಸುದ್ದಿಯಾಗಿದ್ದ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ(Pandavapura) ತಾಲ್ಲೂಕಿನ ಮೇಲುಕೋಟೆ ಸಮೀಪದ ದಳವಾಯಿ ಕೆರೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವವೊಂದು ಪತ್ತೆಯಾಗಿದೆ.
ಮಂಡ್ಯ, ಡಿ.12: ಇಡೀ ರಾಜ್ಯಾದ್ಯಂತ ಸುದ್ದಿಯಾಗಿದ್ದ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ(Pandavapura) ತಾಲ್ಲೂಕಿನ ಮೇಲುಕೋಟೆ ಸಮೀಪದ ದಳವಾಯಿ ಕೆರೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವವೊಂದು ಪತ್ತೆಯಾಗಿದೆ. ಎರಡು ದಿನಗಳ ಕೆಳಗೆ ಜನಿಸಿರುವ ಹೆಣ್ಣು ಶಿಶು ಇದಾಗಿದ್ದು, ಕವರ್ನಲ್ಲಿ ಸುತ್ತಿ ಕೆರೆಯ ಸಮೀಪ ಬಿಸಾಡಿ ಹೋಗಿದ್ದಾರೆ. ಇದೀಗ ಹೆಣ್ಣು ಎಂಬ ಕಾರಣಕ್ಕೆ ಶಿಶುವನ್ನ ಸಾಯಿಸಿ ಬಿಸಾಡಿದರಾ ಎಂಬ ಶಂಕೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿಸಯುತ್ತಿದ್ದಂತೆ ಸ್ಥಳಕ್ಕೆ ಪಾಂಡವಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಪ್ಪಿತಸ್ಥರ ಬಂಧನಕ್ಕೆ ಮುಂದಾಗಿದ್ದಾರೆ.
ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಪ್ರಕರಣವನ್ನು ಬೇಧಿಸಿ 9 ಜನ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಮಂಡ್ಯ ಜಿಲ್ಲೆಯಲ್ಲಿ ಈ ದಂಧೆ ಹೊರಬಂದ ಹಿನ್ನೆಲೆಯಲ್ಲಿಇತ್ತೀಚೆಗಷ್ಟೇ ಲೋಕಾಯುಕ್ತ ಅಧಿಕಾರಿಗಳು ಕೂಡ ಮಧ್ಯ ಪ್ರವೇಶಿಸಿ, ಈ ಕೃತ್ಯದಲ್ಲಿ ಅಧಿಕಾರಿಗಳೂ ಶಾಮೀಲಾಗಿದ್ದಾರೆಯೇ ಎಂಬುದರ ಕುರಿತು ಸಮಗ್ರ ಮಾಹಿತಿ ಕಲೆ ಹಾಕಲು ಲೋಕಾಯುಕ್ತ ಅಧಿಕಾರಿಗಳು ಮುಂದಾಗಿದ್ದರು.
ಇದನ್ನೂ ಓದಿ:ಮಂಡ್ಯದಲ್ಲಿ ಭ್ರೂಣಲಿಂಗ ಹತ್ಯೆ ಕೇಸ್: ಸ್ಯ್ಕಾನಿಂಗ್ ಸೆಂಟರ್ಗೆ ಬೀಗ ಜಡಿದ ಅಧಿಕಾರಿಗಳು
ಮಂಡ್ಯದಲ್ಲಿ ಇಷ್ಟು ದೊಡ್ಡ ಮಟ್ಟಿಗೆ ಈ ಕೃತ್ಯ ನಡೆಯುತ್ತಿದೆ ಎಂಬ ಬಗ್ಗೆ ಮಾಹಿತಿ ಇದ್ದರೂ, ಆರೋಗ್ಯ ಇಲಾಖೆ ದಿವ್ಯ ನಿರ್ಲಕ್ಷ್ಯ ವಹಿಸಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡ ನಂತರ ಘಟನಾ ಸ್ಥಳಕ್ಕೂ ಭೇಟಿ ಕೊಟ್ಟಿರಲಿಲ್ಲ. ‘ಟಿವಿ9’ ನಲ್ಲಿ ನಿರಂತರ ವರದಿ ಬಿತ್ತರಗೊಂಡ ನಂತರ ಆರೋಗ್ಯ ಇಲಾಖೆ ಅಧಿಕಾರಿಗಳು, ಎಸಿ, ತಹಶೀಲ್ದಾರ್ ಭೇಟಿ ನೀಡಿದ್ದರು. ಸಮಗ್ರ ಮಾಹಿತಿ ಕಲೆ ಹಾಕಿ, ಆಲೆಮನೆಯನ್ನು ಕೂಡ ಸೀಜ್ ಮಾಡಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡುತ್ತೇವೆ ಎಂದಿದ್ದರು.
ಕೆಲ್ಲೋಡು ಸೇತುವೆ ಬಳಿ ಅಪರಿಚಿತ ಮಹಿಳೆಯ ಶವಪತ್ತೆ
ಚಿತ್ರದುರ್ಗ: ಸೇತುವೊಂದರ ಬಳಿ ಅಪರಿಚಿತ ಮಹಿಳೆಯ ಶವಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಸುಮಾರು 60ವರ್ಷದ ಅಪರಿಚಿತ ಮಹಿಳೆಯ ಶವ ಇದಾಗಿದ್ದು, ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ